NEWSನಮ್ಮರಾಜ್ಯರಾಜಕೀಯ

ದೊಡ್ಡ ಹುದ್ದೆಗೆ ಹೋದಂತೆ ಮನುಷ್ಯನಿಗೆ ಗರ್ವ ಸಲ್ಲ: ಸಿಟಿ ರವಿಗೆ ಸಲಹೆ ಇತ್ತ ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮನುಷ್ಯ ದೊಡ್ಡ ಹುದ್ದೆಗೆ ಹೋದಂತೆಲ್ಲ ಬುದ್ದಿಮತ್ತೆ ಕೂಡ ಹೆಚ್ಚಾಗಬೇಕೇ ವಿನಃ ಗರ್ವ ಬರಬಾರದು. ಆದರೆ, ಸಿ.ಟಿ.ರವಿಯವರ ಮಾತುಗಳು ಆ ಹಂತ ತಲುಪಿದಂತೆ ಭಾಸವಾಗುತ್ತದೆ. ಬಳಸುವ ಭಾಷೆ ಅದನ್ನು ಪ್ರತಿಧ್ವನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಟೀಕಿಸಿದ್ದಾರೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿ ಸ್ಥಾನಕ್ಕೆ ಅಂದಿನ ಬಿಜೆಪಿ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಶಾ ಪುತ್ರ ರಾತ್ರೋರಾತ್ರಿ ಬಂದು ಕುಳಿತಿದ್ದಾರೆ. ಜಯ್ ಶಾ ಎಷ್ಟು ಸೆಂಚುರಿ, ಎಲ್ಲಿ ಬಾರಿಸಿದ್ದಾರೆ? ಸಿ.ಟಿ.ರವಿಗೆ ಅಲ್ಪಜ್ಞಾನ ಇರುವುದಕ್ಕೆ ನನಗೆ ಕನಿಕರ. ಜಯ್ ಶಾ ಪದವಿ ಕೂಡ ಅವರಪ್ಪನ ಬಳುವಳಿ ಎಂದು ಹೇಳುವ ಧೈರ್ಯ ರವಿಗೆ ಇಲ್ಲ ಎಂದು ಹೇಳಿದರು.

ಸಿ.ಟಿ.ರವಿಗೆ ಬಹುಶಃ ತನ್ನದೇ ಪಕ್ಷದಲ್ಲಿ ಹೆಮ್ಮರವಾಗುತ್ತಿರುವ ವಂಶವಾಹಿ ರಾಜಕಾರಣದ ವಿರುದ್ಧ ಕೋಪ ಇರಬೇಕು. ಅದಕ್ಕಾಗಿ ಈ ವಿಚಾರ ಕೆಣಕಿದ್ದಾರೆ ಎಂದೆನಿಸುತ್ತಿದೆ ಎಂದು ಕಾಲೆಳೆದಿದ್ದಾರೆ.

ಸಿ.ಟಿ.ರವಿಯವರು ಮಂತ್ರಿ ಪದವಿ ಹೋದದ್ದಕ್ಕೆ ಅಥವಾ ಭವಿಷ್ಯದಲ್ಲಿ ವಂಶವಾಹಿ ರಾಜಕಾರಣದಲ್ಲಿ ಬೆಳೆದು, ಪಕ್ಷದಲ್ಲಿ ತನ್ನ ಬುಡಕತ್ತರಿಸುವ ಆತಂಕದಿಂದ ಹಾಗೂ ಬಿಜೆಪಿಯಲ್ಲಿನ ವೈರುದ್ಯಗಳ ಬಗ್ಗೆ ಧ್ವನಿ ಎತ್ತಲು ಧೈರ್ಯ ಇಲ್ಲದೇ ಬೇರೆ ಪಕ್ಷಗಳ ವಂಶವಾಹಿ ಆಡಳಿತದ ಬಗೆಗೆ ಪರೋಕ್ಷವಾಗಿ ಮಾತನಾಡುತ್ತಿದ್ದಾರೆ ಎಂದು ಭಾಸವಾಗುತ್ತಿದೆ ಎಂದು ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ