CRIMENEWSನಮ್ಮಜಿಲ್ಲೆ

ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು: ಚಾಲಕನಿಗೆ ಗಂಭೀರ ಗಾಯ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಚಾಲಕನ ನಿಯಂತ್ರಣ ಕಳೆದುಕೊಂಡ ಇನ್ನೋವಾ ಕಾರು ಅಡಿಕೆ ತೋಟಕ್ಕೆ ಬಿದ್ದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ, ಲಿಂಗಾಪುರ ಗ್ರಾಮದ ಬಳಿ ನಡೆದಿದೆ.

ಮಂಗಳೂರಿನಿಂದ ಬೇಲೂರು ಕಡೆಗೆ ಹೋಗುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣಕ್ಕ ಸಿಗದೇ ಅಡಿಕೆ ತೋಟಕ್ಕೆ ಬಿದ್ದಿದೆ. ಘಟನೆಯಲ್ಲಿ ಕಾರು ಚಾಲಕ ಮಹಮದ್ (30) ಎಂಬುವರು ಗಾಯಗೊಂಡಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಗಾಯಗೊಂಡಿದ್ದ ಚಾಲಕನನ್ನು ಆಸ್ಪತ್ರೆಗೆ ರವಾನಿಸಿದರು. ಕಾರು ಬಿದ್ದ ರಭಸಕ್ಕೆ ಮೂರು ಅಡಿಕೆ ಮರಗಳು ಮುರಿದು ಹೋಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Deva
the authorDeva

Leave a Reply

error: Content is protected !!
Latest news
NWKRTC ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಬೆಂಗಾವಲು ವಾಹ‌ನ ಡಿಕ್ಕಿ ಎಲ್ಲ ಕಚೇರಿಗಳು, ನಿಗಮಗಳಲ್ಲೂ ಲೋಕಾ ಯುಕ್ತರ ಸಹಾಯವಾಣಿ ಸಂಖ್ಯೆ ಒಳಗೊಂಡ ಪ್ರದರ್ಶನ ಫಲಕ ಅಳವಡಿಸಲು ಸಿಎಸ್‌ ಡಾ. ಶಾಲಿನಿ... KSRTC ಕೂಟದಿಂದ ಏ.8ರಿಂದ ಪಾದಯಾತ್ರೆ, 21ರಿಂದ ಆಮರಣಾಂತ ಉಪವಾಸ ನಾಳೆ ಇಪಿಎಸ್-95 ಪಿಂಚಣಿದಾರರ 99ನೇ ಮಾಸಿಕ ಸಭೆ: BMTC ‍& KSRTC ನಿವೃತ್ತ ನೌಕರರ ಸಂಫದ ಅಧ್ಯಕ್ಷ ನಂಜುಂಡೇಗೌಡ ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯ ಮುಕ್ತಾಯ: ಏ.7ರಂದು ಫಲಿತಾಂಶ ಪ್ರಕಟ ಸಾಧ್ಯತೆ ಪಾದಚಾರಿ ಮಾರ್ಗ ಒತ್ತುವರಿ ಮಾಡಿದರೆ ದಂಡ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮಾಜಿ ಲೋಕಾಯುಕ್ತ ಸಂತೋಷ್ ಹೆಗಡೆ ಆರೋಗ್ಯದಲ್ಲಿ ಚೇತರಿಕೆ -ಡಿಸ್ಮಾರ್ಜ್ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ: ನವ ವಿವಾಹಿತೆ ಸೇರಿ ಇಬ್ಬರು ಮೃತ ಓರ್ವನ ಸ್ಥಿತಿ ಗಂಭೀರ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಹಲವು ಪ್ರಯಾಣಿಕರಿಗೆ ಗಂಭೀರ ಗಾಯ BMTC ಮೆಜೆಸ್ಟಿಕ್: ಪ್ಲಾಟ್‌ಫಾರಂ-05ರಲ್ಲಿ ಸೂಪರ್‌ ಟಾಕೀಸ್‌ಆದ ಸುಜಾತಾ ಟಾಕೀಸ್‌; ಅತೀ ಚಿಕ್ಕದಾಗಿ ಕಾಣುವ ಅಕ್ಷರಗಳು