ಕಾರವಾರ: ಎರಡು ಬಸ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್ನಲ್ಲಿದ್ದ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ನಡೆದಿದೆ.

ಭಟ್ಕಳದಿಂದ ಬಾಗಲಕೋಟೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಶಿರಸಿಯಿಂದ ಕುಮಟಾ ಕಡೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
ಅಪಘಾತದ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಖಾಸಗಿ ಬಸ್ನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಇನ್ನು ಎರಡು ಬಸ್ನಲ್ಲಿ ಇದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಕೂಡಲೇ ಗಾಯಾಳುಗಳನ್ನು ಶಿರಸಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
Related


Megha








