CRIMENEWSನಮ್ಮರಾಜ್ಯ

ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ: ನವ ವಿವಾಹಿತೆ ಸೇರಿ ಇಬ್ಬರು ಮೃತ ಓರ್ವನ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ಕಂಟೈನರ್ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಶೆಟ್ಟಿಗೆರೆ ಕ್ರಾಸ್ ಬಳಿ ನಡೆದಿದೆ.

ಇಂದು ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ರಕ್ಷಿತಾ ರೆಡ್ಡಿ (23), ಪವನ್ ರೆಡ್ಡಿ (30) ಮೃತಪಟ್ಟಿದ್ದು, ರಾಜಶೇಖರ್ ರೆಡ್ಡಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

5 ತಿಂಗಳ ಹಿಂದೆಯಷ್ಟೇ ಮದುವೆ: ಬಳ್ಳಾರಿ ತಾಲೂಕಿನ ಜೋಳದ ರಾಶಿ ಗ್ರಾಮದ ರಾಜಶೇಖರ್ ರೆಡ್ಡಿ ಮತ್ತು ರಕ್ಷಿತಾ ರೆಡ್ಡಿ (23) ಕಳೆದ 5 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಇದೀಗ ಅಪಘಾತದಲ್ಲಿ ಪತ್ನಿ ಕೊನೆಯುಸಿರೆಳೆದಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿರುವ ರಾಜಶೇಖರ್ ರೆಡ್ಡಿ, ನವೆಂಬರ್ ತಿಂಗಳಲ್ಲಿ ರಕ್ಷಿತಾ ರೆಡ್ಡಿಯನ್ನು ಮದುವೆಯಾಗಿದ್ದರು. ಇಬ್ಬರೂ ಬೆಂಗಳೂರಿನಲ್ಲಿ ವಾಸವಾಗಿದ್ದರು. ಸ್ನೇಹಿತ ಪವನ್ ರೆಡ್ಡಿ ಜತೆ ದಂಪತಿ ಹಿಂದೂಪುರದ ಅವಳಗಿ ಗ್ರಾಮಕ್ಕೆ ಹೋಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಕಂಟೈನರ್ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಈ ಸಂಬಂಧ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾತ್ರೆ ಸಂಭ್ರಮದಲ್ಲಿ ಭಾಗವಹಿಸಬೇಕೆಂದು ಊರಿಗೆ ಹೋಗುತ್ತಿದ್ದ ನವಜೋಡಿಗೆ ಅಪಘಾತವಾದ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟುವಂತಿತ್ತು. ಜೋಳದ ರಾಶಿ ಗ್ರಾಮಕ್ಕೆ ಮೃತದೇಹ ತರುತ್ತಿದ್ದಂತೆ ಕುಟುಂಬಸ್ಥರು, ಸಂಬಂಧಿಕರ ರೋದನ ನಿಂತಿದ್ದ ಜನರಲ್ಲೂ ದುಃಖ ತರಿಸುತ್ತಿತ್ತು.

Megha
the authorMegha

Leave a Reply

error: Content is protected !!
Latest news
ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ವಿ.ಡಿ.ಸತೀಶನ್ ಇಂದು ಕೇರಳದ ನೂತನ ಸಿಎಂಆಗಿ ವಿ.ಡಿ. ಸತೀಶನ್‌ ಪ್ರಮಾಣ ವಚನ ಸ್ವೀಕಾರ KSRTC ಜಂಟಿ ಸಮಿತಿ ಒಳೊಪ್ಪಂದ ಬಯಲು; 2.5 ಕೋಟಿ ರೂ.ಗೆ ಸೇಲಾದರ ನೀಚರು, ನೌಕರರ ದಾರಿತಪ್ಪಿಸುತ್ತಿರುವುದರ ಹಿಂದಿನ ಮರ್ಮ... ವಿಜಯಪಥ ವರದಿ ಪರಿಣಾಮ: ಎಚ್ಚೆತ್ತ BMTC ಅಧಿಕಾರಿಗಳು- ಆದೇಶದ ದಿನಾಂಕಕ್ಕಿಂತ ಮೂರು ದಿನ ಮುಂಚಿತವಾಗಿಯೇ ನೌಕರರಿಗೆ 11 ತ... ಸಾರಿಗೆ ನೌಕರರಿಗೆ ಸೆಡ್ಡು ಹೊಡೆಯಲು ಸರ್ಕಾರ ತಂತ್ರ: ಬಸ್ ಸಂಚಾರ ನಿಲ್ಲಿಸಿ ಮುಷ್ಕರಕ್ಕೆ ಮುಂದಾಗಿರುವ ನೌಕರರಿಗೆ ಶಾಕ್ ...