NEWSದೇಶ-ವಿದೇಶರಾಜಕೀಯ

ಬಡವರ ಹಸಿವು ನೀಗಿಸದೆ ‘ವಿಶೇಷ’ ಸ್ನೇಹಿತರ ಜೇಬು ತುಂಬಿಸಲು ನಿರತವಾದ ಕೇಂದ್ರ ಸರ್ಕಾರ: ರಾಹುಲ್‌ ವಾಗ್ದಾಳಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸರ್ಕಾರ ತಮ್ಮ ಕೆಲ ‘ವಿಶೇಷ’ ಸ್ನೇಹಿತರ ಜೇಬು ತುಂಬಿಸುವಲ್ಲಿ ನಿರತವಾಗಿರುವುದರಿಂದ ದೇಶದ ಬಡವರು ಹಸಿವಿನಿಂದ ಬಳಲುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ ಭಾರತ 94ನೇ ಸ್ಥಾನ ಪಡೆದಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ರಾಹುಲ್ ಗಾಂಧಿ ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಹಸಿವಿನಲ್ಲಿ ಭಾರತ ಪಾಕಿಸ್ತಾನವನ್ನು ಹಿಂದಿಕ್ಕಿದೆ ಎಂದರೆ ನಮ್ಮ ದೇಶದ ಜನರ ಸ್ಥಿತಿ ಹೇಗಿದೆ ಎಂಬುದನ್ನು ಊಹಿಸಿಕೊಂಡರೇ ಭಯವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ 94ನೇ ಸ್ಥಾನದಲ್ಲಿದೆ. ನಮ್ಮ ದೇಶಕ್ಕಿಂತಲೂ ಆರ್ಥಿಕವಾಗಿ ಹಿಂದುಳಿದಿರುವ ಪಾಕಿಸ್ತಾನ(88) ಮತ್ತು ಬಾಂಗ್ಲಾದೇಶ (75) ಗಿಂತಲೂ ಕೆಳಗಿರುವ ಗ್ರಾಫಿಕ್ಸ್ ಅನ್ನು ರಾಹುಲ್ ತಮ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಇದರ ಪ್ರಕಾರ ಕೇವಲ 13 ದೇಶಗಳು ಮಾತ್ರ ಭಾರತದಿಂದ ಕೆಳಗಿವೆ. ಇದು ರವಾಂಡ, ನೈಜೀರಿಯಾ, ಅಫ್ಗಾನಿಸ್ತಾನ ಮತ್ತು ಲಿಬಿಯಾಗಳನ್ನು ಒಳಗೊಂಡಿವೆ. ಕಳೆದ ವರ್ಷ 102ರಷ್ಟಿದ್ದ ಶ್ರೇಣಿ ಈ ವರ್ಷ 94ಕ್ಕೆ ಏರಿಕೆಯಾಗಿದೆ. ವಿಶ್ವದಾದ್ಯಂತ ಹಸಿವಿನ ಮಟ್ಟ ಮತ್ತು ಅಪೌಷ್ಟಿಕತೆಯನ್ನು ಲೆಕ್ಕಹಾಕುವ ಸೂಚ್ಯಂಕವನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.

107 ದೇಶಗಳ ಪಟ್ಟಿಯಲ್ಲಿ ಭಾರತದ ಒಟ್ಟಾರೆ ಮೊತ್ತ 27.2 ಆಗಿದೆ. ಇದು ಭಾರತವನ್ನು ಗಂಭೀರ ವಿಭಾಗದಲ್ಲಿರಿಸುತ್ತದೆ. ವರದಿಯ ಪ್ರಕಾರ, ಭಾರತದ ಜನಸಂಖ್ಯೆಯ ಶೇ.14ರಷ್ಟು ಜನರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಇನ್ನಾದರೂ ಕೇಂದ್ರ ಸರ್ಕಾರ ಇದರತ್ತ ಹೆಚ್ಚಿನ ಗಮನಕೊಡಬೇಕು ಎಂದು ರಾಹುಲ್‌ ಗಾಂಧಿ ಸಲಹೆ ನೀಡಿದ್ದಾರೆ.

1 Comment

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ