NEWSನಮ್ಮರಾಜ್ಯರಾಜಕೀಯ

ತನ್ನ ಕಾಲಿನ ಮೇಲೆ ನಿಂತು ಅಗ್ನಿಪರೀಕ್ಷೆಗೆ ಮೊದಲ ಹೆಜ್ಜೆ ಇಟ್ಟ ಜೆಡಿಎಸ್‌: ಕಾರ್ಯಕರ್ತರಲ್ಲಿ ಇಮ್ಮಡಿಗೊಂಡ ಉತ್ಸಾಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನವೆಂಬರ್‌ 3ರಂದು ಎರಡು ವಿಧಾನಸಭಾ ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆ ಜಾತ್ಯತೀತ ಜನತಾದಳದ ಪಾಲಿಗೆ ಅಗ್ನಿಪರೀಕ್ಷೆಯ ಜತೆಗೆ ತನ್ನ ಅಸ್ತಿತ್ವದ ಪ್ರಶ್ನೆಯೂ ಎದುರಾಗಿದೆ.

ತನ್ನದೇ ಆದ ಶಿರಾ ಕ್ಷೇತ್ರವನ್ನು ಉಳಿಸಿಕೊಳ್ಳಲು ಹರ ಸಾಹಸ ಪಡುತ್ತಿರುವ ಜೆಡಿಎಸ್ ಆರ್‌ಆರ್‍ ನಗರದಲ್ಲಿ ಗುರುತರ ಸವಾಲನ್ನೇ ಎದುರಿಸುತ್ತಿದೆ. ಗೆಲುವು ಸೋಲು ಸಾಮಾನ್ಯ ಆದರೆ ಗೆಲ್ಲುವುದಕ್ಕಿಂತ ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಯ ಆಪರೇಷನ್ ತಡೆಯುವುದೇ ಈಗ ಪಕ್ಷಕ್ಕೆ ದೊಡ್ಡ ತಲೆನೋವಾಗುತ್ತಿದೆ.

ನಾಯಕರು ಹೋದರೂ ಕಾರ್‍ಯಕರ್ತರು ನಮ್ಮ ಬಳಿ ಇದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರೂ ವಾಸ್ತವದಲ್ಲಿ ಸಂಘಟನೆಯನ್ನು ಉಳಿಸಿಕೊಳ್ಳಲು ಅವರೂ ಸಹ ಭಗೀರಥ ಪ್ರಯತ್ನವನ್ನೇ ನಡೆಸುವುದು ಅನಿರ್ವಾಗಿದೆ. ಬೆಳೆಯುವ ತನಕ ಜೆಡಿಎಸ್‌ನಲ್ಲಿ ಇದ್ದು ಬೆಳೆದ ಬಳಿಕ ಅನ್ಯ ಪಕ್ಷಕ್ಕೆ ಹಾರುವುದು ಹೆಚ್ಚಾಗುತ್ತಿರುವುದರಿಂದ ಪಕ್ಷಕ್ಕೆ ನೆಲೆ ಭದ್ರಪಡಿಸಿಕೊಳ್ಳುವ ಹೋರಾಟವು ನಿರಂತರವಾಗಿ ಬಿಡಲಿದೆ. ಆದ್ದರಿಂದ ಪಕ್ಷಕ್ಕೆ ನಿಷ್ಠರಾದವರನ್ನೇ ಮೊದಲು ಗುರುತಿಸಿ ಬೆಳೆಸುವ ಕಾಯಕದಲ್ಲಿ ವರಿಷ್ಠರು ನಿರತರಾಗಬೇಕಿದೆ.

ಇನ್ನು ಶಿರಾದಲ್ಲಿ ಸತ್ಯನಾರಾಯಣ ಅವರ ಪತ್ನಿಗೆ ಟಿಕೆಟ್ ನೀಡಿ ಅನುಕಂಪದ ಮತಗಳ ಮೇಲೆ ಕಣ್ಣಿಟ್ಟಿದ್ದರೂ ಗೆಲುವು ಕಟ್ಟಿಟ್ಟ ಬುತ್ತಿ ಎಂಬಂತಹ ಪರಿಸ್ಥಿತಿ ಸ್ವಲ್ಪಮಟ್ಟಿಗೆ ಕಡಿಮೆಯೇ. ಈ ನಡುವೆ ಸರತಿ ಸಾಲಿನಲ್ಲಿ ನಿಂತು ಸ್ಥಳೀಯ ಮುಖಂಡರು ಕಾಂಗ್ರೆಸ್ ಮತ್ತು ಬಿಜೆಪಿಗೆ ವಲಸೆ ಹೋಗುತ್ತಿದ್ದಾರೆ. ಇದನ್ನು ತಡೆಯುವ ನಿಟ್ಟಿನಲ್ಲೂ ವರಿಷ್ಠರು ಕಾಳಜಿ ತೆಗೆದುಕೊಳ್ಳಬೇಕು ಬಂದ ಪುಟ್ಟ ಹೋದ ಪುಟ್ಟ ಎಂಬಂತೆ ಆಗದ ರೀತಿಯಲ್ಲಿ ಹೋಗುವವರನ್ನು ತಡೆದು ನಿಲ್ಲಿಸುವ ಕಾರ್ಯದಲ್ಲೂ ಹಿಂದೆ ಸರಿಯಬಾರದು.

ಆರ್‌ಆರ್‍ ನಗರದಲ್ಲೂ ಸಹ ಪರಿಸ್ಥಿತಿ ಭಿನ್ನವಾಗಿ ಏನು ಕಾಣಿಸುತ್ತಿಲ್ಲ. ಟಿಕೆಟ್ ಹಂಚಿಕೆ ನಂತರ ಸ್ವತಃ ಕ್ಷೇತ್ರದ ಜೆಡಿಎಸ್ ಘಟಕಾಧ್ಯಕ್ಷರೇ ಪಕ್ಷ ತೊರೆದು ಡಿಕೆಶಿ ಸಖ್ಯ ಬೆಳೆಸಿದ್ದಾರೆ. ಜತೆಗೆ ತಮ್ಮ ಬೆಂಬಲಿಗರನ್ನೂ ಗುಳೆ ಎಬ್ಬಿಸಿದ್ದಾರೆ. ಇದು ಅವರಿಗೆ ಶೋಭೆ ತರದಿದ್ದರೂ ನೀವು ಅಂಥವರನ್ನು ಹೋಗದ ರೀತಿ ತಡೆಯುವಲ್ಲಿ ಸಫಲವಾಗುವ ಜಾಣ್ಮೆಯನ್ನು ಈ ಸಮಯದಲ್ಲಿ ಪ್ರದರ್ಶಿಸಬೇಕಿದೆ.

ಒಟ್ಟಾರೆ ಬಿಜೆಪಿ-ಕಾಂಗ್ರೆಸ್ ಸಹವಾಸ ಬಿಟ್ಟು ಈ ಬಾರಿ ಸ್ವತಂತ್ರವಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳುವ ಹೋರಾಟಕ್ಕೆ ಮುಂದಾಗಿರುವುದು ಭವಿಷ್ಯದಲ್ಲಿ ಪಕ್ಷದ ಕಾರ್ಯಕರ್ತರಲ್ಲೂ ವಿಶ್ವಾಸವನ್ನು ಇಮ್ಮಡಿಗೊಳಿಸಿದಂತ್ತಾಗಿದೆ. ಈ ಹೋರಾಟದ ಮೊದಲ ಪರೀಕ್ಷೆಯೇ ಶಿರಾ ಮತ್ತು ಆರ್‌ಆರ್‍ ನಗರ ಕ್ಷೇತ್ರಗಳ ಉಪಚುನಾವಣೆಯಾಗಿದೆ. ಇದೇ ರೀತಿ ರಾಜ್ಯಾದ್ಯಂತ ಗಟ್ಟಿ ನಿಲುವನ್ನು ತಳೆದರೆ ಜೆಡಿಎಸ್‌ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುವುದು ಪಕ್ಷದ ಸಾಮಾನ್ಯ ಕಾರ್ಯಕರ್ತನ ಅನಿಸಿಕೆಯಾಗಿದೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ