ಚಿತ್ರದುರ್ಗ: ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಐವರು ಮುರುಘಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗದ ಮುರುಘಾಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡುವ ಮುರುಘಾಶ್ರೀ ಪ್ರಶಸ್ತಿಗೆ, ರಂಗಭೂಮಿ ಸಿನಿಮಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ನಟ ಮುಖ್ಯಮಂತ್ರಿ ಚಂದ್ರು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ, ಬಸವತತ್ವ ಪ್ರಚಾರಕರಾದ ಹುಲುಸೂರು ಗುರು ಬಸವೇಶ್ವರ ಮಠದ ಶಿವಾನಂದ ಸ್ವಾಮೀಜಿ, ಮದ್ಯಪಾನ ವಿರೋಧಿ ಹೋರಾಟಗಾರ್ತಿ ಸ್ವರ್ಣ ಭಟ್ ಹಾಗೂ ಧರ್ಮದರ್ಶಿ ಷಣ್ಮುಖಪ್ಪ ಭಾಜನರಾಗಿದ್ದಾರೆ ಎಂದು ಶಿವಮೂರ್ತಿ ಮುರುಘಾಶರಣರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇನ್ನು10 ಭಾಷೆಗಳಲ್ಲಿ ಮಾತನಾಡಬಲ್ಲ ಸಾಮರ್ಥ್ಯವನ್ನು ಹೊಂದಿರುವ 17 ವರ್ಷದ ಬಾಲಕಿ ಜಾಹ್ನಾವಿ ಪನ್ವಾರ್ ಅವರನ್ನು ಭರಮಣ್ಣನಾಯಕ ಶೌರ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುರುಘಾಶ್ರೀ ಹಾಗೂ ಭರಮಣ್ಣನಾಯಕ ಶೌರ್ಯ ಪ್ರಶಸ್ತಿಯು 25 ಸಾವಿರ ರೂ. ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಅಕ್ಟೋಬರ್ 24ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.