NEWSನಮ್ಮರಾಜ್ಯರಾಜಕೀಯ

ಬಿಎಸ್‌ವೈ ಅವರದು ಪರ್ಸಂಟೇಜ್ ಸರ್ಕಾರ : ಸಿದ್ದರಾಮಯ್ಯ ಆರೋಪ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರದು ಪರ್ಸಂಟೇಜ್ ಸರ್ಕಾರ, ಲಂಚ ನೀಡದೆ ಇಲ್ಲಿ ನಯಾಪೈಸೆ ಬಿಡುಗಡೆಯಾಗಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಹೊಸ ಅನುದಾನವಂತೂ ಇಲ್ಲ, ಇದರ ಜೊತೆಗೆ ಹಿಂದೆ ಘೋಷಿಸಿದ್ದ ಅನುದಾನವನ್ನೂ ತಡೆಹಿಡಿಯಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಕಾಲದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹೀಗಿತ್ತಾ? ಯಡಿಯೂರಪ್ಪ
ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಒಮ್ಮೆ ಗೋಲಿಬಾರ್ ನಡೆಸಿ ರೈತರನ್ನು ಕೊಂದರು, ಎರಡನೇ ಬಾರಿ ಮುಖ್ಯಮಂತ್ರಿಯಾದಾಗ ಎರಡು ಬಾರಿ ಗೋಲಿಬಾರ್ ನಡೆಸಿ ಅಮಾಯಕರನ್ನು ಕೊಂದರು. ಇದು ಕಾನೂನು ಮತ್ತು ಸುವ್ಯವಸ್ಥೆನಾ ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ತಂಡ ರಾಜ್ಯದ ಪ್ರವಾಹ ಸಮೀಕ್ಷೆ ನಡೆಸಿ ಇಷ್ಟು ದಿನವಾಯ್ತಲ್ಲ ಒಂದು ರೂಪಾಯಿಯಾದ್ರೂ ಪರಿಹಾರ ಬಂದಿದೆಯಾ? ಸಚಿವ ಆರ್. ಅಶೋಕ್ ಅವರು ಪರಿಹಾರ ಇವತ್ತು ಬರುತ್ತೆ, ನಾಳೆ ಬರುತ್ತೆ ಅಂತನೇ ದಿನ ದೂಡುತ್ತಿದ್ದಾರೆ, ಜನ ಕಷ್ಟದಲ್ಲಿರುವಾಗ ಪರಿಹಾರ ಕೊಡದೆ ಯಾವಾಗ ಕೊಡ್ತೀರ ಎಂದು ಗುಡುಗಿದ್ದಾರೆ.

ನಮ್ಮ ಸರ್ಕಾರ ಪ್ರಾರಂಭಿಸಿದ್ದ ಯೋಜನೆಗಳನ್ನೆಲ್ಲ ಒಂದೊಂದಾಗಿ ನಿಲ್ಲಿಸ್ತಿದ್ದಾರೆ. ಅನ್ನಭಾಗ್ಯದ ಅಕ್ಕಿಯನ್ನು 7ಕೆಜಿಯಿಂದ 5ಕ್ಕೆ ಇಳಿಸಿದ್ದಾರೆ. ಇಂದಿರಾಕ್ಯಾಂಟೀನ್ ಗೆ ದುಡ್ಡು ಕೊಡದೆ ಮುಚ್ಚಲು ಹೊರಟಿದ್ದಾರೆ. ದನ-ಕುರಿ ಸತ್ತರೆ ಪರಿಹಾರ ಕೊಡ್ತಿಲ್ಲ, ಕ್ಷೀರಧಾರೆಯಲ್ಲಿ ಹಾಲಿನ ಸಬ್ಸಿಡಿ ಕಡಿಮೆ ಮಾಡಿದ್ದಾರೆ. ಕೃಷಿಭಾಗ್ಯವೂ ನಿಂತಿದೆ ಎಂದು ತಿಳಿಸಿದರು.

ಕಳೆದ ವರ್ಷದ ಪ್ರವಾಹದಲ್ಲಿ ಬಿದ್ದ ಮನೆಗಳನ್ನೇ ಕಟ್ಟಿಸಿಕೊಟ್ಟಿಲ್ಲ. ಈ ವರ್ಷದ ಪ್ರವಾಹದಲ್ಲಿ ಇನ್ನಷ್ಟು ಮನೆಗಳು ಬಿದ್ದಿವೆ. ಜಿಲ್ಲಾಧಿಕಾರಿಗಳಿಗೆ ದುಡ್ಡು ಕೊಟ್ಟಿದ್ದೇವೆ ಎಂದು
ಸಿಎಂ ಹೇಳ್ತಾರೆ. ಅವರ ಪಿಡಿ ಖಾತೆಯಲ್ಲಿ ದುಡ್ಡಿದ್ದರೆ ಸಂತ್ರಸ್ತರಿಗೆ ತಲುಪುತ್ತಾ? ಈ ವರ್ಷ ಯಾರಿಗಾದರೂ ಪರಿಹಾರ ಕೊಟ್ಟಿದ್ದಾರಾ ಎಂದು ಕಿಡಿಕಾರಿದರು.

ನಳೀನ್‌ ಕುಮಾರ್‌ ಕಟೀಲ್‌ ಅವರೇ, ರಾಜ್ಯದಲ್ಲಿ ರೈತರು, ನೇಕಾರರು, ಕೂಲಿ ಕಾರ್ಮಿಕರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ, ಇದನ್ನು ತಡೆಯಲು ತಾವೇನು ಮಾಡಿದ್ದೀರಿ? ಮೊದಲು ಜನರಿಗೆ ಲಾಕ್‌ಡೌನ್ ಮತ್ತು ಪ್ರವಾಹದಿಂದ ಉಂಟಾದ ನಷ್ಟವನ್ನು ತುಂಬಿಕೊಡುವ ವ್ಯವಸ್ಥೆ ಮಾಡಿ. ನಿಮ್ಮ ಭಾಷಣದಿಂದ ಜನರ ಹೊಟ್ಟೆ ತುಂಬಲ್ಲ ಎಂದು ಹರಿಹಾಯ್ದಿದ್ದಾರೆ.

ತಾನಿರುವ ಹುದ್ದೆಯ ಗೌರವದ ಅರಿವಿಲ್ಲದ ಕಟೀಲ್‌ ಒಬ್ಬ ಯಕಶ್ಚಿತ್ ರಾಜಕಾರಣಿ. ಬೆಂಕಿ ಹಾಕೋದು, ಸಮುದ್ರಕ್ಕೆ ಬಿಸಾಕೋದು ಬರೀ ಇಂತಹುದನ್ನೇ ತಲೆಯಲ್ಲಿ ತುಂಬಿಕೊಂಡಿದ್ದಾರೆ. ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಪಕ್ಷ ಹೀಗೆ ತನ್ನನ್ನು ಮುಳುಗಿಸ್ತೇನೆ ಅಂತ ಬಂದ ಬಹಳಷ್ಟು ಜನರನ್ನು ನೋಡಿದೆ ಎಂದು ಹೇಳಿದರು.

ಕಳೆದ ವರ್ಷದ ಆಗಸ್ಟ್‌ನಲ್ಲಿ, ಈ ಬಾರಿಯೂ ಆಗಸ್ಟ್‌ನಲ್ಲಿ, ಮತ್ತೆ ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಪ್ರವಾಹ ಬಂದಿದೆ. ಪ್ರಧಾನಿ ಮೋದಿ ಒಮ್ಮೆಯಾದರೂ ರಾಜ್ಯಕ್ಕೆ ಭೇಟಿ ನೀಡಿ ಜನರ ಕಷ್ಟ ಕೇಳಿದ್ದಾರ? ಬಿಜೆಪಿಯ 25 ಸಂಸದರನ್ನು ರಾಜ್ಯದಿಂದ ಆರಿಸಿ ಕಳಿಸಿರುವುದೇ ಮೋದಿ ಅವರು ಕರ್ನಾಟಕವನ್ನು ಇಷ್ಟು ತಾತ್ಸಾರ ಮಾಡಲು ಕಾರಣವಾಗಿದೆ ಎಂದರು.

ಪ್ರವಾಹ ಪರಿಸ್ಥಿತಿ ಇರುವಾಗ ವೈಮಾನಿಕ ಸಮೀಕ್ಷೆ ಮಾಡುವುದು ಸರಿ, ಆದರೆ ಈಗ ಪ್ರವಾಹ ಪೀಡಿತ ಸ್ಥಳಗಳಿಗೆ ರಸ್ತೆ ಮೂಲಕ ಸಂಚರಿಸಲು, ನಿರಾಶ್ರಿತ ಕೇಂದ್ರಗಳಲ್ಲಿರುವ ಜನರನ್ನು ಭೇಟಿ ಮಾಡಲು ಅವಕಾಶವಿದ್ದಾಗ್ಯೂ ಮುಖ್ಯಮಂತ್ರಿ ಅವರು ವಿಮಾನದಲ್ಲೇ ಸಮೀಕ್ಷೆ ಮಾಡಿದರೆ ಜನರ ಕಷ್ಟ ಏನು ಅಂತ ಹೇಗೆ ತಿಳಿಯುತ್ತೆ ಪ್ರಶ್ನಿಸಿದರು.

ಸಮುದಾಯ ಭವನಗಳ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದೆ.‌ ಅವುಗಳಿಗೆ ಹಣ ಬಿಡುಗಡೆ ಮಾಡುವಂತೆ ಸಮಾಜ ಕಲ್ಯಾಣ ಖಾತೆ ಸಚಿವ ಶ್ರೀರಾಮುಲು ಅವರನ್ನು ಕೇಳಿದರೆ, ಮುಖ್ಯಮಂತ್ರಿಗಳು ತಮ್ಮ ಇಲಾಖೆಗೆ ನಯಾಪೈಸೆ ಹಣ ಕೊಟ್ಟಿಲ್ಲ ಅಂತಾರೆ. ಸರ್ಕಾರ ದಿವಾಳಿಯಾಗಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್...