CrimeNEWSನಮ್ಮರಾಜ್ಯ

ಐಎಂಎ ಬಹುಕೋಟಿ ರೂ. ವಂಚನೆ ಪ್ರಕರಣ: ಮೂವರು ಪೊಲೀಸ್‌ ಅಧಿಕಾರಿಗಳು ಅಮಾನತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಐಎಂಎ ಬಹುಕೋಟಿ ರೂಪಾಯಿ ವಂಚನೆ ಪ್ರಕರಣ ಸಂಬಂಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದ ಬೆನ್ನಲ್ಲೇ ಐಎಂಎ ಮಾಲೀಕನಿಗೆ ನೆರವು ನೀಡಿದ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಡಿವೈಎಸ್ಪಿ ಸೇರಿ ಮೂವರು ಪೊಲೀಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ.

ರಾಜ್ಯ ಅಪರಾಧ ತನಿಖಾ ದಳ (ಸಿಐಡಿ) ಡಿವೈಎಸ್ಪಿ ಇ.ಬಿ.ಶ್ರೀಧರ್, ಇನ್‌ಸ್ಪೆಕ್ಟರ್ ರಮೇಶ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಗೌರಿ ಶಂಕರ್ ಅಮಾನತುಗೊಂಡ ಅಧಿಕಾರಿಗಳು. ಇವರು ಮನ್ಸೂರ್ ಪರವಾಗಿ ಕೆಲಸ ಮಾಡಿದ್ದ ಆಪಾದನೆ ಗುರಿಯಾಗಿದ್ದರು.

ವಂಚನೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಸಿಬಿಐ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಈ ಮೂವರು ಆರೋಪಿಗಳಾಗಿದ್ದರು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಅಧಿಕಾರಿಗಳ ತಲೆದಂಡ ಪಡೆದಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...