NEWSನಮ್ಮರಾಜ್ಯರಾಜಕೀಯ

ಮಳೆಯಿಂದ 3 ಸಾವಿರ ಕೋಟಿ ರೂ. ನಷ್ಟ, 10ಮಂದಿ ಮೃತ: ಸಚಿವ ಅಶೋಕ್‌ ಮಾಹಿತಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ನಾಲ್ಕೈದು ದಿನದ ವರದಿ ಪ್ರಕಾರ ರಾಜ್ಯದಲ್ಲಿ ಮಳೆಯಿಂದಾಗಿ ಅಂದಾಜು 3000 ಕೋಟಿ ರೂ. ಹಾನಿಯಾಗಿದೆ. 10 ಜನ, ನೂರಕ್ಕೂ ಹೆಚ್ಚು ಜಾನುವಾರು ಮೃತಪಟ್ಟಿದ್ದು, 8 ಸಾವಿರ ಜನ ಪರಿಹಾರ ಕೇಂದ್ರದಲ್ಲಿದ್ದಾರೆಂದು ಕಂದಾಯ ಸಚಿವ ಆರ್.ಅಶೋಕ್‌ ಹೇಳಿದ್ದಾರೆ.

ಕಂದಾಯ ಸಚಿವ ಹಾಗೂ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ ಆರ್. ಅಶೋಕ್‌ ನಿನ್ನೆ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ ಅತಿವೃಷ್ಟಿ, ಪ್ರವಾಹ ಕಾರ್ಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ವರ್ಷದಿಂದ ಎದುರಾಗಿರುವ ಅತಿವೃಷ್ಟಿ ಮತ್ತು ಪರಿಹಾರದ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು ಈ ವರ್ಷ ಆಗಸ್ಟ್ ನಲ್ಲಿ ಶೇಕಡಾ 139ರಷ್ಟು ಅಧಿಕ ಮಳೆಯಿಂದ ಪ್ರವಾಹ ಸ್ಥಿತಿ ಎದುರಾಗಿತ್ತು. ಸದ್ಯಕ್ಕೆ ಪ್ರವಾಹ ಸ್ಥಿತಿಯಿಲ್ಲ ಎಂದು ತಿಳಿಸಿದ್ದಾರೆ ಎಂದರು.

ಹುಕ್ಕೇರಿಯಲ್ಲಿ ಮಾತ್ರ ಅತಿವೃಷ್ಟಿಯಿಂದ ಒಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 4,619 ಮನೆಗಳಿಗೆ ಹಾನಿಯಾಗಿದ್ದು, ಸದ್ಯಕ್ಕೆ ಕಾಳಜಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿಲ್ಲ. 14 ಸಾವಿರ ರೈತರಿಗೆ 6.40 ಕೋಟಿ ರೂ. ಬೆಳೆ ಪರಿಹಾರ ಪಾವತಿಸಲಾಗಿದ್ದು, ಉಳಿದವರಿಗೆ ಶೀಘ್ರ ಪಾವತಿಸಲಾಗುವುದು. 1.66 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆದಿದ್ದು, ಇದಾದ ಬಳಿಕ ಹಾನಿಯ ಸಮಗ್ರ ವರದಿಯನ್ನು ಸಲ್ಲಿಸಲಾಗುವುದು. ಹತ್ತು ದಿನಗಳಲ್ಲಿ ಪರಿಹಾರ ವಿತರಣಾ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಹಣದ ಅಭಾವ ಇಲ್ಲ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 666 ಕೋಟಿ ಹಣ ಜಮೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿ ಖಾತೆಯಲ್ಲಿ 88 ಕೋಟಿ ಹಣವಿದೆ. ಅಲ್ಲದೇ ಕಲಬುರಗಿಯಲ್ಲಿ 20 ಕೋಟಿ, ಯಾದಗಿರಿ 16 ಕೋಟಿ, ಬಾಗಲಕೋಟೆ 33 ಕೋಟಿ, ಕೊಡಗಿನಲ್ಲಿ 68 ಕೋಟಿ ಹಣವಿದೆ ಎಂದು ವಿವರಿಸಿದರು.

ನಾನು ಕಂದಾಯ ಸಚಿವನಾದ ಮೇಲೆ ಜಿಲ್ಲಾಧಿಕಾರಿಗಳು ಪಿಡಿ ಖಾತೆಯಲ್ಲಿ ಹಣ ಆದ ಮೇಲೆ ಪತ್ರ ಬರೆಯುತ್ತಿದ್ದರು. ಆ ಹಣ ಕಳುಹಿಸಿಕೊಡಲು ನಾಲ್ಕೈದು ತಿಂಗಳು ಆಗುತ್ತಿತ್ತು. ಆದರೆ, ಈಗ ಹಾಗೆ ಆಗೋಲ್ಲ 5 ಕೋಟಿ ರೂ.ಗಿಂತ ಕಡಿಮೆ ಇರುವ ಯಾವ ಯಾವ ಜಿಲ್ಲೆಯಲ್ಲಿ ಯಾವುದೇ ಡಿಸಿಯ ಅನುಮತಿ ಕೇಳದೆ ನಾವೇ ಹಣ ನೀಡುತ್ತೇವೆಂದು ಎಂದು ಹೇಳಿದರು.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್...