CRIMENEWSನಮ್ಮರಾಜ್ಯ

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ ಪತ್ನಿ ನೋಡಲು ಬೈಕ್‌ನಲ್ಲಿ ಹೋಗುತ್ತಿದ್ದ ಪತಿ ಸರ್ಕಾರಿ ಬಸ್‌ಗೆ ಬಲಿ, ಪತ್ನಿಯೂ ಸಾವು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಅನಾರೋಗ್ಯದಿಂದ ಬಳಲುತ್ತಿದ್ದ ಮತ್ನಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದನ್ನು ನೋಡಲು ಆಸ್ಪತ್ರೆಗೆ ಬೈಕ್‌ನಲ್ಲಿ ಭಾವಿಸುತ್ತಿದ್ದ ಪತಿಗೆ ಸರ್ಕಾರಿ ಬಸ್‌ ಡಿಕ್ಕಿ ಹೊಡೆದ ಪರಿಣಾಂ ಆತನೂ ಮೃತಪಟ್ಟಿರುವ ಧಾರುಣ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ನಡೆದಿದೆ.

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅರವಳ್ಳಿ ಗ್ರಾಮದ ನಿವಾಸಿ ಕರೆಪ್ಪ ಗಂಗಪ್ಪ ಮಾದರ ಅವರ ಪತ್ನಿ ಮಧುರಾ ಕರೆಪ್ಪ ಮಾದರ (30) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅಸುನೀಗಿದರೆ, ಕರೆಪ್ಪ ಗಂಗಪ್ಪ ಮಾದರ(36) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಒಟ್ಟಾರೆ ದಂಪತಿ ಒಂದೇದಿನ ಇಹಲೋಕತ್ಯಜಿಸಿದ್ದು ಮಾತ್ರ ದುರಂತವಾಗಿದೆ. ಮಧುರಾ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು, ತಕ್ಷಣ ಅವರನ್ನು ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಧುರಾ ಕೊನೆಯುಸಿರೆಳೆದಿದ್ದಾರೆ.

ಇತ್ತ ಪತ್ನಿ ಆಸ್ಪತ್ರೆ ಸೇರಿದ ಸುದ್ದಿ ಕೇಳಿ ಬೆಳಗಾವಿಗೆ ತರಾತುರಿಯಲ್ಲಿ ಬೈಕ್‌ನಲ್ಲಿ ಬರುತ್ತಿದ್ದ ಪತಿ ಕರೆಪ್ಪ ಅರವಳ್ಳಿ, ಕ್ರಾಸ್ ಬಳಿ ಧಾರವಾಡದಿಂದ ವೇಗವಾಗಿ ಬರುತ್ತಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಕರೆಪ್ಪ ಸ್ಥಳದಲ್ಲೇ ಅಸುನೀಗಿದ್ದಾರೆ.

ಒಂದೇ ದಿನ ಪತಿ ಪತ್ನಿ ಮೃತಪಟ್ಟಿರುವುದರಿಂದ ಅರವಳ್ಳಿ ಗ್ರಾಮದಲ್ಲಿ ಶೋಕ ವಾತಾವರಣ ನಿರ್ಮಾಣವಾಗಿದೆ ಮಕ್ಕಳು ಹಾಗೂ ಕುಟುಂಬಸ್ಥರ ಾಕ್ರಂದನ ಮುಗಿಲುಮುಟ್ಟುವಂತಿತ್ತು.

ಮಧುರಾ ಮತ್ತು ಕರೆಪ್ಪ ದಂಪತಿ ಮದುವೆ ಆಗಿ 9 ವರ್ಷ ಆಗಿತ್ತು. ಇವರಿಗೆ ಓರ್ವ ಪುತ್ರಿ, ಇಬ್ಬರು ಪುತ್ರರು ಇದ್ದಾರೆ. ಈಗ ಒಂದೇ ದಿನ ತಂದೆ-ತಾಯಿಯನ್ನು ಕಳೆದುಕೊಂಡು ಮೂವರು ಮಕ್ಕಳು ಅನಾಥರಾಗಿದ್ದಾರೆ.

ಅಪಘಾತ ಸಂಬಂಧ ಬೈಲಹೊಂಗಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...