NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಶೇ.3ರಿಂದ5ರಷ್ಟು ವೇತನ ಹೆಚ್ಚಳ ಮಾಡುತ್ತೇವೆ: ಕೆಎಸ್‌ಆರ್‌ಟಿಸಿ ಎಂಡಿ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ವೇತನ ಹೆಚ್ಚಳವನ್ನು ಶೇ.3ರಿಂದ ಶೇ.5ರಷ್ಟು ಕೊಡಲಷ್ಟೇ ನಮ್ಮ ನಿಗಮಗಳು ಶಕ್ತವಾಗಿವೆ ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ತಿಳಿಸಿದ್ದಾರೆ.

ಇಂದು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು 2021ನೇ ಸಾಲಿನಿಂದ ಪ್ರಸ್ತುತ ಇಲ್ಲಿಯವರೆಗೆ ಸಂಸ್ಥೆಯ ಆರ್ಥಿಕ ಸ್ಥಿತಿಗತಿಗಳು ಮತ್ತು ಖರ್ಚು ವೆಚ್ಚಗಳ ಬಗ್ಗೆ ಸಂಪೂರ್ಣ ಮಾಹಿತಿಯ ಸಾರಾಂಶವನ್ನು ವಿವರಿಸಿದರು.

ತದನಂತರದಲ್ಲಿ ಮೂರು ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಅವರವರ ಸಂಸ್ಥೆಯ ಆಯವ್ಯಯಗಳ ಬಗ್ಗೆ ವಿವರಣೆ ನೀಡಿದರು. ಬಳಿಕ ವೇತನ ಹಿಂಬಾಕಿಯ ವಿಚಾರದಲ್ಲಿ ಸರ್ಕಾರ ಈಗಾಗಲೇ 26 ತಿಂಗಳ ವೇತನದ ಹಿಂಬಾಕಿಯನ್ನು ನೀಡಲು 1,272 ಕೋಟಿ ರೂ.ಗಳನ್ನು ಅನುದಾನ ಮೀಸಲಿರಿಸಿದೆ. ಸರ್ಕಾರ ಅನುದಾನ ಬಿಡುಗಡೆ ಮಾಡಿದ ನಂತರ ನೌಕರರಿಗೆ ನೀಡುವುದಾಗಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದರು.

ಆ ಬಳಿಕ ವೇತನ ಹೆಚ್ಚಳದ ಬಗ್ಗೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ತಮ್ಮ ಸಂಸ್ಥೆಯ ಆರ್ಥಿಕ ಸ್ಥಿತಿಗತಿಗಳಿಗನುಗುಣವಾಗಿ ಬಿಎಂಟಿಸಿ 3% ಪರ್ಸೆಂಟ್ ಕೊಡಲು ಶಕ್ತವಾಗಿದೆ ಅನ್ನುವ ವಿಚಾರ ಪ್ರಸ್ತಾಪಿಸಿದರು.

ಕೆಎಸ್ಆರ್ಟಿಸಿ, ಕೆಕೆಆರ್‌ಟಿಸಿ ಹಾಗೂ ಎನ್‌ಡಬ್ಲ್ಯುಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರು ಕೊನೆಯದಾಗಿ 5% ಕೊಡಲು ನಾವು ಸಿದ್ದರಿದ್ದೇವೆ ಅನ್ನೋ ವಿಚಾರವನ್ನು ತಿಳಿಸಿದರು.

ಈ ಎಲ್ಲವನ್ನು ಕೇಳಿದ ಮೇಲೆ ನಾವು ಅನಿವಾರ್ಯವಾಗಿ ಮುಂದಿನ ದಿನಗಳಲ್ಲಿ ನಾವು ಹೋರಾಟದ ಮುಖಾಂತರ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ಹೇಳಿ ಸಭೆಯಿಂದ ಹೊರ ನಡೆದೆವು ಎಂದು ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

ಒಟ್ಟಾರೆ ಇಂದಿನ ಎಂಡಿ ಸಭೆಯು ಯಾವುದೇ ಫಲಪ್ರದವನ್ನು ಕಾಣದೆ ವಿಫಲಗೊಂಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನಾವು ಹೋರಾಟ ಮಾಡಿಯೇ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಪಡೆದುಕೊಳ್ಳೋಣ ಎಂದು ಕೂಟದ ಅಧ್ಯಕ್ಷ ಚಂದ್ರಶೇಖರ್‌ ತಿಳಿಸಿದರು.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...