NEWSನಮ್ಮಜಿಲ್ಲೆನಮ್ಮರಾಜ್ಯ

ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕೇರಳದಿಂದ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿ 16 ವರ್ಷದ ವಿದ್ಯಾರ್ಥಿನಿ ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗದಲ್ಲಿ ನಡೆದಿದೆ.

ಶ್ರೀನಂದನಾ (16) ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ ಚಂದ್ರದ್ರೋಣ ಸಾಲಿನಲ್ಲಿ ಪ್ರಕೃತಿ ಸೌಂದರ್ಯ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಕತ್ತಲಾಗಿದ್ದರಿಂದ ಶ್ರೀನಂದನ ನಾಪತ್ತೆಯಾಗಿದ್ದಾಳೆ. ಜೊತೆಗಿದ್ದವರು ಹುಡುಕಾಡಿದರೂ ಪತ್ತೆಯಾಗಿಲ್ಲ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕದ 30ಕ್ಕೂ ಹೆಚ್ಚು ಸಿಬ್ಬಂದಿ ಟಾರ್ಚ್ ಹಾಕಿಕೊಂಡು ಮಧ್ಯರಾತ್ರಿವರೆಗೂ ಹುಡುಕಾಡಿದರೂ ಬಾಲಕಿಯ ಸುಳಿವು ಸಿಗಲಿಲ್ಲ.

ಇನ್ನು ಬೆಟ್ಟಗುಡ್ಡಗಳ ಕಾಡಿನ ಪ್ರದೇಶ, ಮಂಜು ಹಾಗೂ ತುಂಬಾ ಕತ್ತಲು ಕವಿದಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿ ಎಲ್ಲರೂ ವಾಪಸ್ಸಾಗಿದ್ದರು. ಸ್ಥಳಕ್ಕೆ ಮಧ್ಯರಾತ್ರಿಯೇ ಹೆಚ್ಚುವರಿ ಪೊಲೀಸ್‌ವರಿಷ್ಠಾಧಿಕಾರಿ (ಎಎಸ್ಪಿ) ಜಯಕುಮಾರ್ ಕೂಡ ಭೇಟಿ ನೀಡಿದ್ದರು.

ಮತ್ತೆ ಇಂದು ಬೆಳಗ್ಗೆ 50ಕ್ಕೂ ಹೆಚ್ಚು ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಮೂಲಕ ಬಾಲಕಿಯ ಪತ್ತೆಗೆ ಮುಂದಾಗಿದ್ದಾರೆ.

ಇನ್ನು ಬಾಲಕಿ ನಾಪತ್ತೆಯಾದ ಸ್ಥಳದಿಂದ ಹೋಗಿರಬಹುದಾದ ಮಾರ್ಗದ ಅಂದಾಜಿನಲ್ಲಿ ಜಿಲ್ಲಾಡಳಿತದ ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ತಂಡಗಳಾಗಿ ಬಾಲಕಿ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ಕೂಡ ನಾಪತ್ತೆಯಾಗಿರುವ ಬಾಲಕಿ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Megha
the authorMegha

Leave a Reply

error: Content is protected !!
Latest news
ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ ಸಿಬಿಎಸ್‌ಇ ತ್ರಿಭಾಷಾ ನೀತಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಪಾಲಕರು: ಮುಂದಿನ ವಾರ ವಿಚಾರಣೆ ಫೆಬ್ರವರಿ 2025- ಮಾರ್ಚ್‌ 2025ರ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಗೆ ನಿರ್ದೇಶನ ನೀಡಲು ಹೈ ಕೋರ್ಟ್‌ ಮೆಟ್ಟಿಲೇರಿ... BMTC ನೌಕರರಿಗೆ ಏಪ್ರಿಲ್-2018 ರಿಂದ ಜುಲೈ-2018 ರವರೆಗಿನ 4ತಿಂಗಳ ಮೂಲ ತುಟ್ಟಭತ್ಯೆ ಮೇ 2026ರ ವೇತನದೊಂದಿಗೆ ಪಾವತಿಸಲ...