NEWSನಮ್ಮಜಿಲ್ಲೆನಮ್ಮರಾಜ್ಯ

ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ

ವಿಜಯಪಥ ಸಮಗ್ರ ಸುದ್ದಿ

ಚಿತ್ರದುರ್ಗ: ಸರ್ಕಾರ ನೀಡಿರುವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿಗೆ ಬರುವಂತೆ ಕೂಡಲೇ ನೀಡಬೇಕು ಎಂದುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಚಿತ್ರದುರ್ಗದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುವ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಪಾದಯಾತ್ರೆಗೆ ಚಾಲನೆ ನೀಡಿದೆ.

ಬುಧವಾರ ಬೆಳಗ್ಗೆ 10.30ರ ಸುಮಾರಿಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಮಾವೇಶಗೊಂಡ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸಾರಿಗೆ ನೌಕರರು ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮನವಿಪತ್ರ ಸಲ್ಲಿಸಿದರು.

ಆಬಳಿಕ ಪಾದಯಾತ್ರೆ ಜಾಥಾಗೆ ಚಾಲನೆ ನೀಡಲಾಗಿದ್ದು, ಈಗ ಚಿತ್ರದುರ್ಗದ ಆಂಜನೇಯಸ್ವಾಮಿ ದೇವಸ್ಥಾನ ತಲುಪಿದ್ದು, ಸಂಜೆವೇಳೆಗೆ ಮತ್ತೆ 4-5 ಕಿಲೋಮೀಟರ್‌ವರೆಗೆ ಪಾದಯಾತ್ರೆ ಹೊರಟು ಹಳ್ಳಿಯೊಂದರಲ್ಲಿ ತಂಗುವುದಾಗಿ ತಿಳಿಸಿದೆ. ಆದರೆ  ಯಾವ ಹಳ್ಳಿಯಲ್ಲಿ ನಾವು ತಂಗುತ್ತೇವೆ ಎಂಬುದನ್ನು ಸಂಜೆ 7 ಗಂಟೆ ನಂತರ ತಿಳಿಸುತೇವೆ ಎಂದು ಒಕ್ಕೂಟದ ಪದಾಧಿಕಾರಿ ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಕಳೆದ ಮಾರ್ಚ್‌ 29ರಂದು ಹಾವೇರಿಯಲ್ಲಿ ನಡೆದ ಕೂಟದ ಪದಾಧಿಕಾರಿಗಳ ಸಭೆಯಲ್ಲಿ ಸರ್ವಾನುಮತದಿಂದ ತೆಗೆದುಕೊಂಡಿರುವ ನಿರ್ಣಾಯದಂತೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ಪಾದಯಾತ್ರೆ ಮಾಡುವುದಾಗಿ ತರಲಾಗಿತ್ತು. ಅಷ್ಟರಲ್ಲಿ ನಮ್ಮೆಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಮನವಿ ಕೂಡ ಮಾಡಲಾಗಿತ್ತು. ಆದರೆ, ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಇಂದಿನಿಂದ ಪಾದಯಾತ್ರೆ ಆರಂಭವಾಗಿದೆ.

ಸಾರಿಗೆ ನೌಕರರು ಮತ್ತು ಅವರ ಕುಟುಂಬ ಸದಸ್ಯರು ಇಂದು ಚಿತ್ರದುರ್ಗದ ಡಿಸಿ ಕಚೇರಿಯಿಂದ ಪಾದಯಾತ್ರೆ ಹೊರಟಿದ್ದು, ಸದ್ಯ ಸಾಗರೋಪಾದಿಯಲ್ಲಿ ನೌಕರರು ಮತ್ತು ಅವರ ಕುಟುಂಬದವರು ಬರದಿದ್ದರು ಮುಂದಿನ ದಿನಗಳಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಸೇರಲಿದ್ದು ಕೊನೆಗೆ 21.04.2026 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ ತಲುಪಿ, ಬೇಡಿಕೆಗಳನ್ನು ಈಡೇರಿಸುವವರೆಗೂ ಅನಿರ್ದಿಷ್ಟಾವಧಿ ಆಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನು ಬಿಸಿಲಿನ ತಾಪದ ನಡುವೆ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಸಿಕೊಳ್ಳಲು ನಡೆಸುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಿರುವವರಿಗೆ ಸಾರ್ವಜನಿಕರೆ ಕರೆದು ಪಾನಕ, ಮಜ್ಜಿಗೆ ವ್ಯವಸ್ಥೆ ಮಾಡುತ್ತಿದ್ದಾರೆ. ಇದು ನಿಜಕ್ಕೂ ಜನರಿಗೆ ಸಾರಿಗೆ ನೌಕರರ ಬಗ್ಗೆ ಇರುವ ಕಾಳಜಿಯನ್ನು ತೋರುತ್ತಿದೆ.

ಬೇಡಿಕೆಗಳು: ಸರ್ಕಾರ ನೀಡಿರುವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿಗೆ ಬರುವಂತೆ ಕೂಡಲೇ ನೀಡುವುದು.

01.01.2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡುವುದು. (ಈಗಾಗಲೇ ಸರ್ಕಾರ 26 ತಿಂಗಳ ವೇತನ ಹಿಂಬಾಕಿ ನೀಡುವ ಸುತ್ತೋಲೆ ಹೊರಡಿಸಿದ್ದು ಬಾಕಿ 12 ತಿಂಗಳ ವೇತನ ಹಿಂಬಾಕಿಯನ್ನು ಸರ್ಕಾರ ಅಥವಾ ಸಂಸ್ಥೆ ಭರಿಸುವುದು.)

ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆಗಾಗಿ, ಕಾರ್ಮಿಕ ಸಂಘಟನೆಗಳ ಚುನಾವಣೆಯನ್ನು ಈ ಕೂಡಲೆ ನಡೆಸುವುದು. ಈ ಎಲ್ಲ ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ 06.04.2026 ರಂದು ನಡೆಯಲ್ಲಿರುವ ಸಭೆಯಲ್ಲಿ ಸೂಕ್ತ ನಿರ್ಣಾಯಗಳನ್ನು ಕೈಗೊಂಡು ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವೆಂದರೆ ಮುಂದೆ ನಡೆಯುವ ಹೋರಾಟಗಳು ತೀವ್ರಗೊಂಡು ಬೇರೆ ರೀತಿಯ ಯಾವುದೇ ತಿರುವು ಪಡೆದರೆ ಅದಕ್ಕೆ ಸರ್ಕಾರ ಮತ್ತು ಆಡಳಿತ ಮಂಡಳಿಯೇ ನೇರೆ ಹೊಣೆಯಾಗಿರುತ್ತದೆ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಇಂದು ಸಾರಿಗೆ ಸಚಿವರ ಭೇಟಿಯಾದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳು KSRTC: ಸಾರಿಗೆ ನೌಕರರ ಪಾದಯಾತ್ರೆ ಯಶಸ್ವಿಗಾಗಿ ಬೇರೆ ಸಂಘಟನೆಗಳೂ ಸಾಥ್‌! ಆಟೋ ಗ್ಯಾಸ್ ಕೊರತೆ - ವದಂತಿಗಳಿಗೆ ಕಿವಿಗೊಡಬೇಡಿ - ಸಾರ್ವಜನಿಕರಿಗೆ ಕರೆ ಚಿತ್ರದುರ್ಗ: ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಾರಿಗೆ ನೌಕರರ ಪಾದಯಾತ್ರೆ ಆರಂಭ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಬಂದಿದ್ದ 16 ವರ್ಷದ ವಿದ್ಯಾರ್ಥಿನಿ ನಾಪತ್ತೆ KSRTC ನೌಕರರ ವಿರುದ್ಧ ನಿಯಮ 23 ರಡಿಯಲ್ಲಿ ದಾಖಲಾದ ಪ್ರಕರಣಗಳ ನಿಯಮ-22ಕ್ಕೆ ಮಾರ್ಪಡಿಸಿ: ಎಂಡಿ ಆದೇಶ ಟನ್‌ ಕಬ್ಬಿಗೆ ಹೆಚ್ಚುವರಿ ₹100 ಪಾವತಿಸದ ಬಣ್ಣಾರಿ ಕಾರ್ಖಾನೆ ಸಕ್ಕರೆ ದಾಸ್ತಾನು ಮುಟ್ಟುಗೋಲು ಹಾಕಿಕೊಳ್ಳಿ: ಡಿಸಿಗೆ ಒ... KSRTC ನೌಕರರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿ: ಕಾರ್ಮಿಕ ಆಯುಕ್ತರಿಗೆ ಒಕ್ಕೂಟ ಮನವಿ ಇಂದು ಹೊರಬೀಳಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಮುಂದೂಡಿಕೆ KKRTC ಇಂಡಿ: ನಿವೃತ್ತಿ ಅಂಚಿನಲ್ಲಿರುವ ನೌಕರನಿಗೆ ಮೇಲಧಿಕಾರಿ ರಜೆ ಮಂಜೂರು ಮಾಡುತ್ತಾರೆ ಡಿಎಂ ರದ್ದು ಮಾಡುತ್ತಾರೆ!!??