NEWSನಮ್ಮರಾಜ್ಯರಾಜಕೀಯ

ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಸಿ ಬಿಎಸ್‌ವೈ ಇಳಿಸಲು ಕಟೀಲ್‌ ತಂತ್ರ: ಬಾಂಬ್‌ ಸಿಡಿಸಿದ ಸಿದ್ದರಾಮಯ್ಯ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಶಿರಾ ಉಪ ಚುನಾವಣೆ ಮತ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಹೇಗಾದರೂ ಮಾಡಿ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಿ ಅದರ ಹೊಣೆಯನ್ನು ಯಡಿಯೂರಪ್ಪನವರ ತಲೆಗೆ ಕಟ್ಟಿ, ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕೆಳಗಿಳಿಸಬೇಕು. ಇದು ಕಟೀಲ್‌ ಅವರಿಗೆ ಪಕ್ಷದೊಳಗಿನ ಕೆಲವು ನಾಯಕರೇ ಕೊಟ್ಟಿರುವ ಟಾಸ್ಕ್ ಎನ್ನುವುದು ಈಗ ಗುಟ್ಟಾಗಿ ಉಳಿದಿಲ್ಲ ಎಂದು ಬಾಂಬ್‌ ಸಿಡಿಸಿದ್ದಾರೆ.

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ಕಟೀಲ್‌ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದರು.

ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಈ ಕಟೀಲ್‌ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು ಎಂದು ಸಲಹೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್‌ ಗೆ ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬಿಲ್ಲ. ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ಕಾಲೆಳೆದರು.

ಬಿಜೆಪಿ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನೂ ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಏನಾದರೂ ಸ್ವಲ್ಪ ಬುದ್ದಿ ಬರಬಹುದೇನೋ ಎಂದು ಹೇಳಿದರು.

2 Comments

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...