NEWSನಮ್ಮರಾಜ್ಯಶಿಕ್ಷಣ

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ: ಶೇ.84ರಷ್ಟು ವಿದ್ಯಾರ್ಥಿಗಳು ಪಾಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇಂದು (ಏ.9) ಪ್ರಕಟಗೊಂಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತ ವೆಬ್​ಸೈಟ್​ ಮೂಲಕ ವಿದ್ಯಾರ್ಥಿಗಳು ಪಿಯುಸಿ ರಿಸಲ್ಟ್ ನೋಡಬಹುದಾಗಿದೆ. https://karresults.nic.in ಲಿಂಕ್ ಮೂಲಕ ಹಾಗೂ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಇದಲ್ಲದೇ ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆಪ್, SMS ಮೂಲಕವೂ ಫಲಿತಾಂಶವನ್ನು ರವಾನಿಸಲಾಗಿದೆ.

ಇನ್ನು ಈ 2025-26ನೇ ಸಾಲಿನ ಪಿಯುಸಿ ಫಲಿತಾಂಶ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಕಳೆದ ವರ್ಷಕ್ಕಿಂತ ಶೇಕಡಾ 12.50ಯಷ್ಟು ದಾಖಲೆಯ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಶೇಕಡಾ 84ರಷ್ಟು ಫಲಿತಾಂಶ ದಾಖಲಾಗಿದೆ.

ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ: ಈ ಬಾರಿಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಪ್ರಥಮ ಸ್ಥಾನ ಪಡೆದಿವೆ. ಈ ಬಾರಿಯೂ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಮುಂಚೂಣಿಯಲ್ಲಿ ಇದ್ದು, ಅತ್ಯಧಿಕ ಪಾಸ್ ಪ್ರಮಾಣ ದಾಖಲಿಸಿದೆ. ಬೆಂಗಳೂರು ನಗರ ಮತ್ತು ಮೈಸೂರು ಜಿಲ್ಲೆಗಳೂ ಉತ್ತಮ ಸಾಧನೆ ತೋರಿವೆ.

ಈ ಬಾರಿ ದಾಖಲೆಯ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಒಟ್ಟು ಪಾಸ್ ಪ್ರಮಾಣ ಸುಮಾರು 84% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸೈನ್ಸ್ ವಿಭಾಗದಲ್ಲಿ ಅತ್ಯಧಿಕ ಪಾಸ್ ಪ್ರಮಾಣ 90%ಕ್ಕಿಂತ ಹೆಚ್ಚುಾಗಿದೆ. ಕಾಮರ್ಸ್ ವಿಭಾಗದಲ್ಲಿ ಸರಾಸರಿ 80% ಪಾಸ್ ಪ್ರಮಾಣ ಆಗಿದ್ದು, ಆರ್ಟ್ಸ್ ವಿಭಾಗದಲ್ಲಿ 75% ಫಲಿತಾಂಶ ದಾಖಲಾಗಿದೆ.

ವಾಣಿಜ್ಯ ವಿಭಾಗದಲ್ಲಿ 9 ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಗಳಿಸಿದ್ದಾರೆ. ಒಂದೇ ಕಾಲೇಜಿನ 9 ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಸಾಧನೆ ಮಾಡಿದ್ದಾರೆ. ಬೆಂಗಳೂರಿನ ರಾಜಾಜಿನಗರದ ASC ಕಾಲೇಜಿನ 9 ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.

ಇನ್ನು ಆನ್‌ಲೈನ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.

ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದ ದ್ವಿತೀಯ ಪಿಯು ಪರೀಕ್ಷೆ-1ರಲ್ಲಿ 7.10,363 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದರು. ವಿಜ್ಞಾನ ವಿಭಾಗದಲ್ಲಿ 292 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 142 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Megha
the authorMegha

Leave a Reply

error: Content is protected !!
Latest news
ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ KSRTC ತುಮಕೂರು ಡಿಸಿಗೆ ಲಂಚ ಸಂಗ್ರಹ ಆರೋಪ: ಸಂಬಂಧಿಕರ ಫೋನ್‌ ಪೇ ಬಳಸಿ ಸಿಕ್ಕ ಬಿದ್ದ ನೌಕರ ಆತ್ಮಹತ್ಯೆಗೆ ಯತ್ನ- ಪಾರ... ಬಿಎಂಟಿಸಿ ಹೊಸ ವೇಗದೂತ ಬಸ್‌ಗಳ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು ನಿವೇಶನ ರಹಿತ 500 ಬಡ ಕುಟುಂಬಗಳಿಗೆ ಜೂನ್ ತಿಂಗಳಲ್ಲಿ ನಿವೇಶನ ವಿತರಣೆ: ಸಚಿವ ಮುನಿಯಪ್ಪ