NEWSನಮ್ಮರಾಜ್ಯರಾಜಕೀಯ

ಉಗುರು, ಹಲ್ಲು ಇಲ್ಲದ ಹುಲಿಯ ಸ್ಥಿತಿ ನಿಮ್ಮದು: ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರನ್ನು ಕಾಡು ಮನುಷ್ಯ ಎಂದು ಕರೆದಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನಿಮ್ಮ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿದೆ ಎಂದು ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದೆ.

ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ನಳೀನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ಸಂತೋಷಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್. ಯಡಿಯೂರಪ್ಪನವರನ್ನು ಕೆಡವುದು. ಅದನ್ನೇ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದರು.

ಅದಕ್ಕೆ ಪ್ರತಿಯಾಗಿ ಜನರ ಭಾವನೆಗೆ ಸ್ಪಂದಿಸದ ನಿಮ್ಮನ್ನು ಸ್ವಕ್ಷೇತ್ರ ಚಾಮುಂಡೇಶ್ವರಿ ಮತದಾರರು ಬೀದಿಗೆ ದೂಡಿದ್ದಾರೆ ಎಂಬುದನ್ನು ಮರೆಯಬೇಡಿ. ಕಾಂಗ್ರೆಸ್ ಪಕ್ಷದಲ್ಲಿ ನಿಮ್ಮ ಸ್ಥಿತಿ ಉಗುರು ಮತ್ತು ಹಲ್ಲು ಇಲ್ಲದ ಹುಲಿಯ ಪರಿಸ್ಥಿತಿಯಾಗಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ.

ನೀವು ಬಳಸುತ್ತಿರುವ ಪದಗಳು ಯಾರು ಕಾಡು ಮನುಷ್ಯ ಎಂಬುದನ್ನು ಸಾಬೀತುಪಡಿಸುತ್ತಿವೆ. ಕಾಡುಮನುಷ್ಯ, ಬೀದಿ ಅಲೆಯುತ್ತಿದ್ದ, ಎಲುಬಿಲ್ಲದ ಎಂಬ ಮಾತುಗಳೇ ಕಾಂಗ್ರೆಸ್ ಸಂಸ್ಕೃತಿಯನ್ನು ಬಿಂಬಿಸುತ್ತಿವೆ ಎಂದು ಪ್ರತಿಕ್ರಿಯಿಸಿದೆ.

ಕಾಂಗ್ರೆಸ್ ಸೇರುವುದಕ್ಕೂ ಮುನ್ನ ಮೊದಲು ಜೆಡಿಎಸ್ ನಲ್ಲಿ ಸಕಲ ಅಧಿಕಾರ ಭಾಗ್ಯಗಳನ್ನು ಅನುಭವಿಸಿ ಅವರಿಗೆ ನಾಮ ಹಾಕಿದ ಮಹಾನುಭಾವರು ನೀವೇ ಅಲ್ಲವೇ? ಬಿಜೆಪಿಯಲ್ಲಿ ಕಷ್ಟಪಟ್ಟು ಕೆಲಸ ಮಾಡಿದರೆ ಉನ್ನತ ಸ್ಥಾನ ಸಿಗುವುದನ್ನು ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು. ರಾಜ್ಯಾಧ್ಯಕ್ಷ ಕಟೀಲ್ ಅವರು 2019ರಲ್ಲಿ 2ಲಕ್ಷಕ್ಕೂ ಅಧಿಕ ಮತಗಳಿಂದ ಗೆದ್ದರು. ಜನತೆ ನಿಮ್ಮ ಬೆನ್ನು ಮೂಳೆ ಮುರಿದ ಇತಿಹಾಸ ನೆನಪಿಸಿಕೊಳ್ಳಿ. ಗೆದ್ದಿದ್ದು ಕೇವಲ 1696 ಮತಗಳಿಂದ ಸ್ವಲ್ಪ ವ್ಯತ್ಯಾಸ ಆಗಿದ್ದರು ಕಾಡುಮನುಷ್ಯರಂತೆ ಜೀವನ ಮಾಡಬೇಕಿತ್ತು ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿರಿ ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಸಿ ಬಿಎಸ್‌ವೈ ಇಳಿಸಲು ಕಟೀಲ್‌ ತಂತ್ರ: ಬಾಂಬ್‌ ಸಿಡಿಸಿದ ಸಿದ್ದರಾಮಯ್ಯ

ಚುನಾವಣೆಯಲ್ಲಿ ಸ್ವಾರ್ಥಕ್ಕಾಗಿ ಪರಮೇಶ್ವರ್ ಅವರನ್ನು ಸೋಲಿಸಿದ ಕುತಂತ್ರಿ ನೀವಲ್ಲವೇ? ಈ ಹಿಂದಿನ ಚುನಾವಣೆಯಲ್ಲಿ ನಳೀನ್ ಕುಮಾರ್ ಕಟೀಲ್ ಅವರ ನಾಯಕತ್ವದಲ್ಲಿ ಕ್ಷೇತ್ರಗಳಲ್ಲಿ 12 ಸ್ಥಾನ ಗೆದ್ದು ಯಡಿಯೂರಪ್ಪ ಅವರ ಕುರ್ಚಿ ಬಲಪಡಿಸಿದ್ದಾರೆ. ಈಗಲೂ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದೆ.

ಇನ್ನು ಡಿಜೆ ಹಳ್ಳಿ ಗಲಭೆ ನಡೆಸಿದವರ ಪರ ಯಾಕೆ ವಕಾಲತ್ತು ವಹಿಸಿದ್ದೀರಿ. ಆರೋಪಿಗಳನ್ನು ಅಮಾಯಕರು ಎಂದು ಬಿಂಬಿಸಿದ ನೀವು ಈಗ ಗಲಭೆಯ ರುವಾರಿ ಸಂಪತ್ ರಾಜ್ ಅವರಿಗೆ ಚುನಾವಣಾ ಜವಾಬ್ದಾರಿ ವಹಿಸಿದ್ದೀರಿ. ನಿಮ್ಮದೇ ದಲಿತ ಶಾಸಕರ ಪರವಾಗಿ ನಿಲ್ಲುವ ತಾಕತ್ತು ನಿಮಗಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...