NEWSಸಂಸ್ಕೃತಿ

ಮೈಸೂರು: ವಿಶ್ವವಿಖ್ಯಾತ ಜಂಬೂಸವಾರಿಗೆ ಸಜ್ಜಾದ ಅರಮನೆ ಆವರಣ: ಈ ಬಾರಿ ಅದ್ದೂರಿಗೆ ಕಡಿವಾಣ

3.40 ರಿಂದ 4.15ರೊಳಗೆ ಸಲ್ಲುವ ಶುಭಲಗ್ನದಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯರಿಂದ ಪುಷ್ಪಾರ್ಚನೆ 

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ವಿಜಯದಶಮಿ 10ನೇ ದಿನವಾದ ಇಂದು ನಡೆಯಲಿದೆ.

ಈ ಬಾರಿ ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಅರಮನೆ ಆವರಣದೊಳಗೆ ಕೇವಲ ಮುನ್ನೂರು ಮಂದಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ. ಇಂದು ನಡೆಯಲಿರುವ ಜಂಬೂಸವಾರಿ ವೀಕ್ಷಣೆಗೆ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಸಿದ್ಧತೆ ಮಾಡಲಾಗಿದೆ.

ಮೆರವಣಿಗೆ ವೀಕ್ಷಣೆಗಾಗಿ ಕುರ್ಚಿ ಶಾಮಿಯಾನ ವ್ಯವಸ್ಥೆ, ಜಂಬೂಸವಾರಿಗೆ ತೆರಳುವ ಎಡ ಮತ್ತು ಬಲ ಭಾಗಗಳಲ್ಲಿ ಆಸನ ವ್ಯವಸ್ಥೆ, ಗಣ್ಯರಿಗೆ ಜನಪ್ರತಿನಿಧಿಗಳಿಗೆ ಕೂರಲು ಪ್ರತ್ಯೇಕ ಆಸನ ವ್ಯವಸ್ಥೆಯನ್ನು ಮಾಡಲಾಗಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಜಂಬೂಸವಾರಿಯಲ್ಲಿ ಭಾಗವಹಿಸಲಿದ್ದಾರೆ. 750 ಕೆಜಿಯ ಚಿನ್ನದ ಅಂಬಾರಿ ಹೊರಲಿರುವ ಅಭಿಮನ್ಯು, ತನ್ನ ಪಡೆಯೊಂದಿಗೆ ಗಂಭೀರವಾದ ಹೆಜ್ಜೆ ಹಾಕಲಿದ್ದಾನೆ.

ಕೊರೊನಾ ಸೋಂಕಿನ ಭಯದ ಹಿನ್ನೆಲೆಯಲ್ಲಿ ಅರಮನೆ ಆವರಣಕ್ಕಷ್ಟೇ ಈ ಬಾರಿ ಸೀಮಿತವಾಗಿರುವ ಜಂಬೂಸವಾರಿ, ಪ್ರತಿವರ್ಷ 5.5 ಕಿಲೋಮೀಟರ್ ಸಾಗುತ್ತಿದ್ದ ಜಂಬೂಸವಾರಿ ಮೆರವಣಿಗೆ ಈ ಬಾರಿ ಕೇವಲ ಮುನ್ನೂರು ಮೀಟರ್ ಅಷ್ಟೇ ಸಾಗಿ ಪೂರ್ಣಗೊಳ್ಳಲಿದೆ. ಅಂದರೇ ಕೇವಲ 30ರಿಂದ 40 ನಿಮಿಷಗಳಲ್ಲಿ ಪೂರ್ಣಗೊಳ್ಳಲಿದೆ.

ಜಂಬೂಸವಾರಿ ಮೆರವಣಿಗೆಗೆ ಇಂದು ಮಧ್ಯಾಹ್ನ 02:59 ರಿಂದ 3.20ರೊಳಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಂದಿಧ್ವಜಕ್ಕೆ ಸಂಪ್ರದಾಯಬದ್ಧವಾಗಿ ಪೂಜೆ ಸಲ್ಲಿಸಲಿದ್ದಾರೆ.

3.40 ರಿಂದ 4.15ರೊಳಗೆ ಸಲ್ಲುವ ಶುಭಲಗ್ನದಲ್ಲಿ ಅಭಿಮನ್ಯುವಿನ ಮೇಲೆ ಪ್ರತಿಷ್ಠಾಪಿಸಿರುವ ಚಿನ್ನದ ಅಂಬಾರಿಯೊಳಗೆ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿ ಕೂರಿಸಿ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಗಣ್ಯರಿಂದ ಪುಷ್ಪಾರ್ಚನೆ ನೆರವೇರಿಸಲಾಗುತ್ತದೆ.

ಈ ಬಾರಿ ಜಂಬೂಸವಾರಿಯೊಂದಿಗೆ 4 ಕಲಾತಂಡ, ಅಶ್ವಾರೋಹಿ ದಳದ ಎರಡು ತುಕಡಿ, ಸ್ತಬ್ಧಚಿತ್ರ, ಕರ್ನಾಟಕ ಪೊಲೀಸ್ ವಾದನದ ಆನೆಗಾಡಿ ಸಾಗಲಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...