CrimeNEWSರಾಜಕೀಯ

ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‍ಐಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ನವೀನ್ ಎತ್ತಂಗಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾಕ್ಷೇತ್ರದ ಉಪಚುನಾವಣೆಗೆ ನಾಮ ಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕರು ಸೇರಿ ಅಭ್ಯರ್ಥಿಯೂ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್‍ಐಆರ್ ದಾಖಲಿಸಿದ್ದ ಇನ್ಸ್ ಪೆಕ್ಟರ್ ನವೀನ್ ಅವರನ್ನು ಎತ್ತಂಗಡಿ ಮಾಡಲಾಗಿದೆ.

ಎಫ್‍ಐಆರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಇತರರ ವಿರುದ್ಧ ಆರೋಪ ದಾಖಲಿಸಲಾಗಿತ್ತು. ಇದು ಭಾರಿ ವಿರೋಧಕ್ಕೆ ಕಾರಣವಾಗಿತ್ತು. ಅಧಿಕಾರಿಗಳು ಪಕ್ಷಪಾತ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ಕೂಡ ದೂರು ನೀಡಿ ಇನ್ಸ್‌ಪೆಕ್ಟರ್ ನವೀನ್‌ ಅವರನ್ನು‌ ವರ್ಗಾವಣೆ ಮಾಡುವಂತೆ ಒತ್ತಾಯಿಸಿತ್ತು.

ಸದ್ಯ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಸೂಚನೆ ಮೇರೆಗೆ ನವೀನ್ ಅವರನ್ನು ರಾಜ್ಯ ಗುಪ್ತಚರ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ಮಲ್ಲೇಶ್ವರಂನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ ಅನಿಲ್ ಆರ್.ಪಿ. ಅವರನ್ನು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ನೇಮಿಸಲಾಗಿದೆ.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...