ಬೆಂಗಳೂರು: ಕೃಷಿ ಇಲಾಖೆ ವತಿಯಿಂದ 2020-21ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ(ವಿಮಾ)ಯೋಜನೆ ಅಡಿ ಹೋಬಳಿ/ ಗ್ರಾ.ಪಂ ಮಟ್ಟದಲ್ಲಿ ಅಧಿಸೂಚಿತ ಬೆಳೆಗಳಿಗೆ ರೈತರು ನೋಂದಣಿ ಮಾಡಿಸಿಕೊಳ್ಳಲು ಸೂಚನೆ ನೀಡಲಾಗಿದೆ.
ಮಳೆಯಾಶ್ರಿತ ಹಿಂಗಾರು ಜೋಳ, ಕಡಲೆ, ಹುರುಳಿ, ಬೆಳೆಗಳನ್ನು ಹೋಬಳಿ/ ಗ್ರಾಮಮಟ್ಟದಲ್ಲಿ ಅಧಿಸೂಚಿಸಲಾಗಿದ್ದು ಈ ಯೋಜನೆಗೆ ಒಳಪಡುವ ಬೆಳೆಗಳನ್ನು ನವೆಂಬರ್ 30ರ ಒಳಗಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.
ಸಾಲಪಡೆಯುವ ಆಸಕ್ತ ರೈತರು ಅಂತಿಮ ದಿನದೊಳಗೆ ತಮ್ಮ ವ್ಯಾಪ್ತಿಯ ಬ್ಯಾಂಕ್‌ಗಳಲ್ಲಿ ಅರ್ಜಿಯೊಂದಿಗೆ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಯನ್ನು ನೀಡಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.