NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಸರ್ಕಾರದ ವಿಳಂಬ ನೀತಿ ಖಂಡಿಸಿ ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಆಮರಣಾಂತ ಉಪವಾಸ ಸತ್ಯಾಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರ ಚುನಾವಣಾ ಪೂರ್ವ ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆ ಈಡೇರಿಸದೆ ಹಾಗೂ ಇತರೆ ಸಮಸ್ಯೆಗಳನ್ನು ಬಗೆಹರಿಸಲು ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಇದೇ ಏ.8ರಿಂದ ಚಿತ್ರದುರ್ಗದಿಂದ ಪಾದಯಾತ್ರೆ ಹೋರಟು ಇಂದಿಗೆ 14 ದಿನಗಳು ಕಳೆದಿದ್ದು, ಇಂದು (ಏ.21) ಬೆಂಗಳೂರಿಗೆ ತಲುಪಲಿರುವ ಪಾದಯಾತ್ರೆ, ಸ್ವಾತಂತ್ರ್ಯ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ.

ಈ ಸಂಬಂಧ ಮಾತನಾಡಿರುವ ಒಕ್ಕೂಟ ಪದಾಧಿಕಾರಿಗಳು, ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಲ್ಲಿ ಪ್ರತಿದಿನ ಒಂದು ಕೋಟಿಗೂ ಅಧಿಕ ಪ್ರಯಾಣಿಕರಿಗೆ ಸೇವೆ ನೀಡಲು 1.15 ಲಕ್ಷ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾವೆಲ್ಲ ಹಬ್ಬ-ಹರಿದಿನಗಳಲ್ಲಿ ಕುಟುಂಬ ಸದಸ್ಯರೊಂದಿಗೆ ಇರದೆ, ಮಳೆ-ಗಾಳಿ-ಬಿಸಿಲು ಎನ್ನದೆ ಅತೀ ಒತ್ತಡದಲ್ಲಿ ಕಷ್ಟಪಟ್ಟು ದುಡಿಯುವ ವರ್ಗವಾಗಿದ್ದರೂ ನಮಗೆ ಸರ್ಕಾರಿ ಮತ್ತು ಇತರೆ ನಿಗಮ ಮಂಡಳಿಗಳ ನೌಕರರ ವೇತನಕ್ಕೆ ಹೋಲಿಸಿದರೆ ಸಿಗುವ ವೇತನ ಅತ್ಯಲ್ಪ ಮತ್ತು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದೇವೆ.

ನಾವು ಕಾಯ-ವಚಾ-ಮನಸ್ಸ ದುಡಿಯುವ ಕಾರಣದಿಂದಲೇ ಸಂಸ್ಥೆಗೆ ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಒಲಿದು ಬಂದಿವೆ. ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾಂದ ಶಕ್ತಿ ಯೋಜನೆಯನ್ನು ಜಾರಿಗೆ ತರುವ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಸಾಕಷ್ಟು ಬಸ್ಸುಗಳ ಮತ್ತು ನೌಕರರ ಕೊರತೆ ಇದ್ದರೂ ಸಾರಿಗೆ ನೌಕರರು ಕಷ್ಟ ಪಟ್ಟು ದುಡಿದ ಪರಿಣಾಮ ಇಂದು ಶಕ್ತಿ ಯೋಜನೆಯಲ್ಲಿ ನೂರಾರು ಕೋಟಿಗಳ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ ದಾಖಲೆಯು ಸಹ ನಿರ್ಮಾಣವಾಗಿದೆ. ಜತೆಗೆ ಸರ್ಕಾರಕ್ಕೆ ಅತೀ ಹೆಚ್ಚು ಜನಪ್ರಿಯತೆ ತಂದುಕೊಟ್ಟ ಯೋಜನೆ ಎಂದರೆ ಶಕ್ತಿ ಯೋಜನೆ ಎಂದರೆ ಸುಳ್ಳಾಗಲಾರದು.

ನುಡಿದಂತೆ ನಡೆಯುವ ಸರ್ಕಾರವೆಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳು, ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದಿದೆ. ಇದರ ಜತೆಗೆ ಇದುವರೆಗೂ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಸಭೆಗಳು ನಡೆದಿವೆಯೇ ಹೊರತು ನೌಕರರಿಗೆ ಯಾವುದೇ ರೀತಿಯ ಅನುಕೂಲವಾಗಿಲ್ಲ. ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳು ಮಾತ್ರ ಇನ್ನೂ ಈಡೇರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ, ಇದು ಬೇಸರದ ಸಂಗತಿಯಾಗಿದೆ.

ಇನ್ನು ಇದರಿಂದ ಸಾರಿಗೆ ನೌಕರರು ತಮ್ಮ ದಿನ ನಿತ್ಯದ ಅಗತ್ಯ ವಸ್ತುಗಳ ಖರೀದಿಗೆ, ಮಕ್ಕಳ ವಿದ್ಯಭ್ಯಾಸಕ್ಕೆ ಮತ್ತು ಇತರೆ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಈ ಎಲ್ಲ ಕಾರಣಗಳಿಂದ ಬೇಸತ್ತ ನಮಗೆ ಅನ್ಯ ಮಾರ್ಗವಿಲ್ಲದೆ ಬೇಡಿಕೆಗಳ ಈಡೇರಿಕೆಗಾಗಿ ನಾವು ಒಕ್ಕೂಟದ ವತಿಯಿಂದ ಇದೇ ಏ.8ರಿಂದ ಚಿತ್ರದುರ್ಗದ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಸಾರಿಗೆ ನೌಕರರ ಬೇಡಿಕೆಗಳ ಮನವಿ ಪತ್ರ ರವಾನಿಸಿ ಪಾದಯಾತ್ರೆ ಆರಂಭ ಮಾಡಿದ್ದೇವು.

ಆದರೂ ಸಹ ಸರ್ಕಾರ ಈವರೆಗೂ ನಮ್ಮ ಕೂಗಿಗೆ ದನಿಯಾಗಿಲ್ಲ. ಹೀಗಾಗಿ ಇಂದಿಗೆ ಪಾದಯಾತ್ರೆ 14ದಿನಗಳನ್ನು ಪೂರೈಸುವ ಜತೆಗೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನ ತಲುಪುತ್ತಿದ್ದು ಇಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದು ಒಕ್ಕೂಟ ಪದಾಧಿಕಾರಿಗಳು ತಿಳಿಸಿದರು.

ಬೇಡಿಕೆಗಳು ಏನೇನು?: ಸರ್ಕಾರ ಚುನಾವಣಾ ಪೂರ್ವ ನೀಡಿರುವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿಗೆ ಬರುವಂತೆ ಕೂಡಲೇ ಕ್ರಮತೆಗೆದುಕೊಳ್ಳಬೇಕು.

01/01/2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡಬೇಕು. (ಈಗಾಗಲೇ ಸರ್ಕಾರ 26 ತಿಂಗಳ ವೇತನ ಹಿಂಬಾಕಿ ನೀಡುವ ಸುತ್ತೋಲೆ ಹೊರಡಿಸಿದ್ದು ಬಾಕಿ 12 ತಿಂಗಳ ವೇತನ ಹಿಂಬಾಕಿಯನ್ನು ಸರ್ಕಾರ ಅಥವಾ ಸಂಸ್ಥೆ
ಭರಿಸಬೇಕು)

ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆಗಾಗಿ, ಕಾರ್ಮಿಕ ಸಂಘಟನೆಗಳ ಚುನಾವಣೆ ಈ ಕೂಡಲೇ ನಡೆಸಬೇಕು ಎಂಬ ಬೇಡಿಕೆಗಳನ್ನು ಇಟ್ಟುಕೊಂಡು ಪಾದಯಾತ್ರೆ ಮಾಡಿರುವ ಒಕ್ಕೂಟ ಇಂದಿನಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದೆ.

Megha
the authorMegha

Leave a Reply

error: Content is protected !!
Latest news
KSRTC: ಪ್ರಣಾಳಿಕೆ ಭರವಸೆ ಈಡೇರಿಸುವಂತೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ... KSRTC: ಅರಿಸಿನಕುಂಟೆಯಲ್ಲಿ ಪಾದಯಾತ್ರೆ ತಡೆದಿದ್ದ ಪೊಲೀಸರು ಸದ್ಯ ಫ್ರೀಡಂ ಪಾರ್ಕ್‌ನತ್ತ ಹೊರಟ ಸಾರಿಗೆ ನೌಕರರು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ, ಸಾರಿಗೆ ಸಚಿವರಿಗೆ ಮಾರ್ಗದರ್ಶನ ನೀಡುವಂತೆ ಹೈ ಕೋರ್ಟ್‌ ಸಿಜೆಗೆ ಲಿಖಿತ ಮನವ... KSRTC: ಬೆಂಗಳೂರಿಗೆ ಪಾದಯಾತ್ರೆ ಬರುತ್ತಿರುವ ಸಾರಿಗೆ ನೌಕರರ ಅರಿಸಿನಕುಂಟೆ ಬಳಿ ತಡೆದ ಪೊಲೀಸರು KSRTC: ಮುಂದಿನ ಚಕ್ರದ ಮುಡಿ ಕಟ್ಟಾಗಿ ಬಸ್‌ ಪಲ್ಟಿ- ಸಣ್ಣಪುಟ್ಟಗಾಯಗಳೊಂದಿಗೆ 74 ಪ್ರಯಾಣಿಕರು ಪಾರು KSRTC ನೆಲಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನತ್ತ ಹೊರಟ ಪಾದಯಾತ್ರೆ: ಆಮರಣಾಂತ ಉಪವಾಸ ಸತ್ಯಾಗ್ರಹ ! KSRTC: ಸರ್ಕಾರದ ವಿಳಂಬ ನೀತಿ ಖಂಡಿಸಿ ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಆಮರಣಾಂತ ಉಪವಾಸ ಸತ್ಯಾಗ್ರಹ NWKRTC: ಜಾತಿರಹಿತ ಲಿಂಗ ತಾರತಮ್ಯ ಇಲ್ಲದ ಸಮಾಜ ಕಟ್ಟಲು ಶ್ರಮಿಸಿದವರು ಬಸವಣ್ಣ: ಸಾರಿಗೆ ಅಧಿಕಾರಿ ಅಶೋಕ ಪಾಟೀಲ ಕನಿಷ್ಠ 36,000 ರೂ. ಜತೆಗೆ ವೇತನ ಆಯೋಗ ಮಾದರಿ ಸಮಾನ ವೇತನಕ್ಕೆ ಸಾರಿಗೆ ಅಧಿಕಾರಿಗಳ ಆಗ್ರಹ -ಏ.30ರವರೆಗೆ ಗಡುವು ನಾಳೆಗೆ ಸಾರಿಗೆ ನೌಕರರ 14ದಿನಗಳ ಪಾದಯಾತ್ರೆ ಪೂರ್ಣ- ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭ