NEWSಕೃಷಿನಮ್ಮರಾಜ್ಯ

ಹಿಂಗಾರು, ಬೇಸಿಗೆ ಹಂಗಾಮಿಗೆ ಬೆಳೆ ನೋಂದಣಿ ಪ್ರಾರಂಭ

ವಿಜಯಪಥ ಸಮಗ್ರ ಸುದ್ದಿ

ಬಾಗಲಕೋಟೆ: ಪ್ರಸಕ್ತ ಸಾಲಿಗೆ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ವಿವಿಧ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಹೋಬಳಿ, ಗ್ರಾಪಂ ಮಟ್ಟದಲ್ಲಿ ಅಧಿಸೂಚಿತ ಬೆಳೆಗಳಿಗೆ ನೋಂದಣಿ ಪ್ರಕ್ರಿಯೆ ಪಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ರೈತರ ವಿವಿಧ ಬೆಳೆ ವಿಮಾ ಯೋಜನೆ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಯೋಜನೆಗೆ ಒಳಪಡಿಸುವ ವಿವಿಧ ಬೆಳೆಗಳಿಗೆ ಬೆಳೆಸಾಲ ಪಡೆಯುವ ಮತ್ತು ಬೆಳೆಸಾಲ ಪಡೆಯದ ರೈತರು ಬ್ಯಾಂಕ್‍ಗಳಿಗೆ ಘೋಷಣೆಗಳನ್ನು ನಿಗದಿಪಡಿಸಿದ ದಿನಾಂಕಗಳೊಳಗಾಗಿ ಸಲ್ಲಿಸಬೇಕಾಗಿರುವದರಿಂದ ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಾಗಲಕೋಟೆ ಜಿಲ್ಲೆಗೆ ಬಜಾಜ್ ಅಲಿಯಾಂಜ್ ಇನ್ಸೂರೆನ್ಸ್ ಕಂಪನಿ ಸಂಸ್ಥೆ ಆಯ್ಕೆಯಾಗಿದ್ದು, ಹಿಂಗಾರು ಮತ್ತು ಬೇಸಿಗೆ ಹಂಗಾಮಿಗೆ ಅರ್ಹ ಸಾಲ ಪಡೆದ ರೈತರಿಗೆ ಈ ಯೋಜನೆ ಕಡ್ಡಾಯವಾಗಿದ್ದು, ಇತರ ರೈತರಿಗೆ ಇದು ಐಚ್ಛಿಕವಾಗಿರುತ್ತದೆ. ಈ ಯೋಜನೆ ಬಿತ್ತನೆ ಕ್ಷೇತ್ರ ಅನುಸಾರವಾಗಿ ವಿಮಾ ಪರಿಹಾರ ವಿಧಾನ ಆಧರಿಸಿದ್ದು, ರೈತರು ತಾವು ಬೆಳೆದ ಬೆಳೆಗಳಿಗೆ ಮಾತ್ರ ವಿಮಾ ಮಾಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಡಾ.ಚೇತನಾ ಪಾಟೀಲ ಮಾತನಾಡಿ, ಹಿಂಗಾರು ಹಂಗಾಮಿನ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಕಡಲೆ(ಮ.ಆ) ಬೆಳೆ ವಿಮೆಗೆ ಒಳಪಡಿಸಲು ಕೊನೆಯ ದಿನ ಡಿಸೆಂಬರ 31, ಜೋಳಕ್ಕೆ ನವೆಂಬರ 17, ಗೋವಿನ ಜೋಳಕ್ಕೆ ಡಿಸೆಂಬರ 16, ಸೂರ್ಯಕಾಂತಿ ಬೆಳೆಗೆ ನವೆಂಬರ 30, ಗೋಧಿ ಡಿಸೆಂಬರ 16 ಕೊನೆಯ ದಿನವಾಗಿದೆ. ಹೋಬಳಿ ಮಟ್ಟದ ಬೆಳೆಗಳಾದ ಕಡಲೆ ಡಿಸೆಂಬರ 31, ಹುರುಳಿ, ಜೋಳ, ಅಗಸೆ, ಕುಸುಬೆಗೆ ನವೆಂಬರ 17, ಗೋವಿನ ಜೋಳಕ್ಕೆ ಡಿಸೆಂಬರ 16, ಸೂರ್ಯಕಾಂತಿ ನವೆಂಬರ 30, ಗೋಧಿ ಡಿಸೆಂಬರ 16, ಗೋಧಿ ನವೆಂಬರ 30 ಹಾಗೂ ಈರುಳ್ಳಿಗೆ ವಿಮೆ ಒಳವಡಿಸಲು ಡಿಸೆಂಬರ 16 ಕೊನೆಯ ದಿನವಾಗಿದೆ ಎಂದು ತಿಳಿಸಿದರು.

ಬೇಸಿಗೆ ಹಂಗಾಮಿಗೆ ಗ್ರಾಮ ಪಂಚಾಯಿತಿ ಮಟ್ಟದ ಬೆಳೆಗಳಾದ ಸೂರ್ಯಕಾಂತಿಗೆ ಮಾರ್ಚ್‌ 1, 2021, ಹೋಬಳಿ ಮಟ್ಟದ ಬೆಳೆಗಳಾದ ಶೇಂಗಾ, ಸೂರ್ಯಕಾಂತಿ, ಈರುಳ್ಳಿ ಬೆಳೆಗೆ ಮಾರ್ಚ್‌ 1, 2021 ಕೊನೆಯ ದಿನವಾಗಿರುತ್ತದೆ ಎಂದರು ತಿಳಿಸಿದರು.

ರೈತರು ಬೆಳೆ ವಿಮೆ ಕುರಿತು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಬ್ಯಾಂಕ್ ಸಿಬ್ಬಂದಿಯನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...