NEWSನಮ್ಮರಾಜ್ಯರಾಜಕೀಯ

ಉ.ಕ. ನೆರೆಪರಿಸ್ಥಿತಿ- ಕೇಂದ್ರದ ನೆರವು ಕೇಳುವ ಧೈರ್ಯ ಇಲ್ಲದಿದ್ದರೆ ಸರ್ವಪಕ್ಷಗಳ ನಿಯೋಗ ಕರೆಯಿರಿ: ಸಿದ್ದರಾಮಯ್ಯ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಉತ್ತರ ಕರ್ನಾಟಕದ ನೆರೆಪರಿಸ್ಥಿತಿಗೆ ಕೇಂದ್ರದ ನೆರವು ಕೇಳುವ ಧೈರ್ಯ ಮುಖ್ಯಮಂತ್ರಿಯವರಿಗೆ ಇರದೆ ಇದ್ದರೆ ಸರ್ವಪಕ್ಷಗಳ ನಿಯೋಗವನ್ನು ಕರೆದುಕೊಂಡು ಹೋಗಿ. ನಾವು ರಾಜ್ಯದ ಸ್ಥಿತಿಯನ್ನು ವಿವರಿಸಿ ಹಣ ಬಿಡುಗಡೆ ಮಾಡುವಂತೆ ಒತ್ತಡ ಹಾಕುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯಭರಿತವಾಗಿ ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಪರಿಸ್ಥಿತಿಯನ್ನು ಚರ್ಚಿಸಲು ತಕ್ಷಣ ವಿಧಾನ ಮಂಡಲದ ಅಧಿವೇಶನ ಕರೆಯಬೇಕು, ನಮ್ಮ ಎಲ್ಲಾ ಶಾಸಕರಿಗೆ ತಮ್ಮ ಕ್ಷೇತ್ರದಲ್ಲಿ ಮಳೆ ಮತ್ತು ಪ್ರವಾಹದಿಂದಾಗಿರುವ ಹಾನಿಯನ್ನು ಹೇಳಿಕೊಳ್ಳಲು ಅವಕಾಶ ನೀಡಬೇಕು ಎಂದು ಸರಣಿ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರವು ಸುಮಾರು 90,000 ಕೋಟಿಗೂ ಹೆಚ್ಚು ಮೊತ್ತದ ಸಾಲ ಮಾಡುತ್ತಿದೆ. ರಾಜ್ಯದ ಜನ ಮತ್ತು ರಾಜ್ಯದ ಆಸ್ತಿಯನ್ನು ಒತ್ತೆ ಇಟ್ಟು ತರುವ ಸಾಲ ಜನರ ಕಣ್ಣೀರು ಒರೆಸಬೇಕಲ್ಲದೇ ಭ್ರಷ್ಟಾಚಾರಕ್ಕೆ ಬಳಕೆಯಾಗಬಾರದು. ಜನರ ಸಂಕಷ್ಟ ಪರಿಹರಿಸಲು ಬಳಕೆಯಾಗದ ಸಾಲವನ್ನು ರಾಜ್ಯದ ಜನ ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

ಅಕ್ಟೋಬರ್ 19 ಮತ್ತು 20ರಂದು ಬಾದಾಮಿ ಹಾಗೂ 25 ಮತ್ತು 26ರಂದು ಬೀದರ್, ಕಲ್ಬುರ್ಗಿ, ಯಾದಗಿರಿ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ನಾನು ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಕಣ್ಣಾರೆ ನೋಡಿದ್ದೇನೆ, ಸಂತ್ರಸ್ತರ ಕಷ್ಟಗಳನ್ನು ಕೇಳಿದ್ದೇನೆ. ಅಲ್ಲಿನ ನಷ್ಟ ಹಿಂದಿನ ಬಾರಿಗಿಂತ ದುಪ್ಪಟ್ಟಾಗಿದೆ, ಪರಿಸ್ಥಿತಿ ಅಷ್ಟೇ ಗಂಭೀರವಾಗಿದೆ ಎಂದು ತಿಳಿದ್ದಾರೆ.

ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.30 ಕ್ಕಿಂತ ಅಧಿಕ ಬಿತ್ತನೆಯಾಗಿದೆ. ಮಳೆ ಮತ್ತು ಪ್ರವಾಹದಿಂದಾಗಿ ಸಾವಿರಾರು ಎಕರೆ ಭೂಮಿಯಲ್ಲಿ ಬೆಳೆದ ಶೇಂಗಾ, ಈರುಳ್ಳಿ, ಅಡಿಕೆ, ಭತ್ತ, ಕಾಫಿ, ಮೆಣಸು, ಜೋಳ, ದ್ವಿದಳ ಧಾನ್ಯಗಳು, ಹತ್ತಿ, ರಾಗಿ, ಸಜ್ಜೆ ಮುಂತಾದ ಬೆಳೆಗಳೆಲ್ಲ ನಾಶವಾಗಿವೆ ಎಂದು ವಿವರಿಸಿದ್ದಾರೆ.

ಕಳೆದ ವರ್ಷ ಬಿದ್ದ 1ಲಕ್ಷಕ್ಕೂ ಹೆಚ್ಚುಮನೆಗಳಿಗೆ ಪರಿಹಾರ ನೀಡಿಲ್ಲ. ಕೇಂದ್ರ ಸರ್ಕಾರಕ್ಕೆ 2,47,000 ಮನೆಗಳಿಗೆ ಹಾನಿಯಾಗಿದೆ ಎಂದು ಮನವಿ ಸಲ್ಲಿಸಲಾಗಿದೆ. ಆದರೆ ಪರಿಹಾರ ನೀಡಿರುವುದು ಕೇವಲ 1,24,000 ಮನೆಗಳಿಗೆ ಮಾತ್ರ. ಪೂರ್ಣ ಹಾನಿಯಾದ ಮನೆಗಳಿಗೆ ರೂ.5 ಲಕ್ಷ ನೀಡುವುದಾಗಿ ಹೇಳಿ ಇದುವರೆಗೆ ಕೇವಲ ರೂ.1 ಲಕ್ಷ ಮಾತ್ರ ನೀಡಲಾಗಿದೆ.

ಕೊಚ್ಚಿ ಹೋದ ಭೂಮಿಗೆ, ಕೊಳೆತು ಹೋದ ಬೆಳೆಗಳಿಗೆ ಇನ್ನೂ ಪರಿಹಾರವನ್ನೇ ನೀಡಿಲ್ಲವೆಂದು ನಾನು ಭೇಟಿಕೊಟ್ಟ ಗ್ರಾಮಗಳ ರೈತರು ಪದೇಪದೆ ಹೇಳುತ್ತಿದ್ದಾರೆ. ಕಳೆದ ವರ್ಷ ನದಿ ಪಾತ್ರಗಳ ಗ್ರಾಮಗಳ ಜನರು ತೀವ್ರ ನೋವು ಅನುಭವಿಸಿದರು.

ಸೆಪ್ಟೆಂಬರ್ ಅಂತ್ಯದವರೆಗೆ ರಾಜ್ಯದಲ್ಲಿ 8.68 ಲಕ್ಷ ಹೆಕ್ಟೇರ್ ಕೃಷಿ ಬೆಳೆ, 0.88 ಲಕ್ಷ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿವೆ. ಅಂದರೆ 11 ಲಕ್ಷ ಹೆಕ್ಟೇರ್ಗಳಲ್ಲಿ ಬೆಳೆದ ಬೆಳೆ ಸೆಪ್ಟೆಂಬರ್‌ ವರೆಗೆ ಹಾನಿಯಾಗಿದೆ. ಈಗ ಅಕ್ಟೋಬರ್ ತಿಂಗಳಲ್ಲಿ ಬಿದ್ದ ಮಳೆಯಿಂದಾಗಿ ಮುಕ್ಕಾಲು ರಾಜ್ಯವೇ ಕಂಗೆಟ್ಟು ಕೂತಿದೆ ಎಂದು ಹೇಳಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಬಿತ್ತನೆಯಾದ 3,70,982 ಹೆಕ್ಟೇರ್ಗಳಲ್ಲಿ 2,47,209 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಕಲ್ಬುರ್ಗಿ ಜಿಲ್ಲೆಯಲ್ಲಿ ಒಟ್ಟು 3,44,085 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದರಲ್ಲಿ 1.12 ಲಕ್ಷ ಹೆಕ್ಟೇರ್ ತೊಗರಿ, 34 ಸಾವಿರ ಹೆಕ್ಟೇರ್ ಹತ್ತಿ ನಾಶವಾಗಿದೆ.

ಬಿಜಾಪುರ ಜಿಲ್ಲೆಯಲ್ಲಿ 1,60,739 ಹೆಕ್ಟೇರ್ ಕೃಷಿ ಬೆಳೆಗಳು ಮತ್ತು 11,929 ಹೆಕ್ಟೇರ್ ತೋಟದ ಬೆಳೆಗಳು ಒಟ್ಟು 1,72,668 ಹೆಕ್ಟೇರ್ ನಾಶವಾಗಿದೆ ಎಂದು ಪ್ರಾಥಮಿಕ ಸಮೀಕ್ಷೆಗಳು ಹೇಳುತ್ತಿವೆ. ನಾನು ಭೇಟಿ ಕೊಟ್ಟಿದ್ದಾಗಲೂ ಹೊಲಗಳಲ್ಲಿ ಸುಮಾರು 2 ಅಡಿ ನೀರು ನಿಂತಿತ್ತು. ಸುಮಾರು ಒಂದು ಲಕ್ಷ ಮನೆಗಳಿಗೆ ಹಾನಿಯಾಗಿದೆ.

ಗುಲ್ಬರ್ಗ ಜಿಲ್ಲಾಧಿಕಾರಿ ಸಮೀಕ್ಷೆ ಪ್ರಕಾರ ಅಲ್ಲಿ ಸುಮಾರು 20,000 ಮನೆಗಳಿಗೆ ಹಾನಿಯಾಗಿದೆ. ದವಸ ಧಾನ್ಯ, ಬಟ್ಟೆ ಬರೆ, ಪುಸ್ತಕ ಕೊಚ್ಚಿ ಹೋಗಿವೆ. ರಾಯಚೂರಿನಲ್ಲಿ 3 ದಿನಗಳ ಮಳೆಗೆ ಸುಮಾರು 80,000 ಹೆಕ್ಟೇರ್, ಯಾದಗಿರಿಯಲ್ಲಿ 50,000 ಹೆಕ್ಟೇರ್, ಕೊಪ್ಪಳ 8,000 ಹೆಕ್ಟೇರ್, ಬಳ್ಳಾರಿಯಲ್ಲೂ ಸಾವಿರಾರು ಹೆಕ್ಟೇರ್ ಬೆಳೆ ನಾಶವಾಗಿದೆ ಎಂದಿದ್ದಾರೆ.

ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಬೆಳೆದ ಬಹುಪಾಲು ಬೆಳೆಗಳು ಹಾನಿಗೊಳಗಾಗಿವೆ. ಜಿಲ್ಲಾಡಳಿತ ಸಂಪೂರ್ಣವಾಗಿ ಸಮೀಕ್ಷೆಯನ್ನೇ ಮಾಡಿಲ್ಲ. ಸರ್ಕಾರದ ಸಚಿವರು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಂಪೂರ್ಣ ನಿರ್ಲಕ್ಷಿಸಿದ ಮೇಲೆ ತಹಸೀಲ್ದಾರ್, ಡಿಸಿ ಗಳು ಎಷ್ಟರ ಮಟ್ಟಿಗೆ ಜನರ ಜೊತೆ ನಿಲ್ಲಲು ಸಾಧ್ಯ ಎಂದು ಸರ್ಕಾರದ ವಿರುದ್ಧ ಕಿಡಿದ್ದಾರೆ.

 

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...