NEWSಕೃಷಿನಮ್ಮರಾಜ್ಯ

ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ತ್ವರಿತ ಪರಿಹಾರಕ್ಕೆ ಅಧಿಕಾರಿಗಳು ಶ್ರಮಿಸಿ: ಕೃಷಿ ನಿರ್ದೇಶಕ ಶ್ರೀನಿವಾಸ್

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಅತಿವೃಷ್ಟಿಯಿಂದ ಬೆಳೆಹಾನಿಯಾದ ರೈತರಿಗೆ ಪರಿಹಾರ ಕಲ್ಪಿಸಲು ಅನುಕೂಲವಾಗುವಂತೆ ಕೃಷಿ ಇಲಾಖೆ ಅಧಿಕಾರಿಗಳು ರೈತ ಸ್ನೇಹಿಯಾಗಿ ಕಾರ್ಯನಿರ್ವಹಿಸುವ ಮೂಲಕ ಕೃಷಿಕರಿಗೆ ನೆರವಾಗಬೇಕೆಂದು ಕೃಷಿ ಇಲಾಖೆಯ ನಿರ್ದೇಶಕ ಬಿ. ವೈ. ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದರು.

ಕಲಬುರಗಿ ಜಿಲ್ಲೆಯ ಫಿರೋಜಾಬಾದ್, ನದಿಸಿನ್ನೂರ್, ಫರಹತಾಬಾದ್, ಹೆರೂರು, ಸರಡಗಿ ಗ್ರಾಮಗಳಲ್ಲಿನ ರೈತರ ತಾಕುಗಳಿಗೆ ಭೇಟಿ ನೀಡಿ ಬೆಳೆಹಾನಿಯನ್ನು ವೀಕ್ಷಿಸಿ, ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಬೆಳೆ ಹಾನಿ ಕುರಿತು ಸಭೆ ನಡೆಸಿ ನಿಖರವಾದ ಮಾಹಿತಿ ಪಡೆದರು. ಬೆಳೆ ಹಾನಿಯಾಗಿ ಸಂಕಷ್ಟದಲ್ಲಿರುವ ರೈತರಿಗೆ ತ್ವರಿತವಾಗಿ ಪರಿಹಾರ ಕಲ್ಪಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.

ಬೆಳೆ ಹಾನಿ ಸಮೀಕ್ಷೆ ಮಾಡುವಾಗ ನಿಖರ ಹಾಗೂ ವಾಸ್ತವಾಂಶವುಳ್ಳ ಮಾಹಿತಿ ನೀಡಬೇಕು. ಯಾವುದೇ ಕಾರಣಕ್ಕೂ ಪುನರಾವರ್ತನೆಯಾಗದಂತೆ ಎಚ್ಚರವಹಿಸಬೇಕು. ಸರ್ಕಾರದ ಮಾರ್ಗಸೂಚಿಯನ್ವಯ ರೈತರಿಗೆ ಪರಿಹಾರ ಕಲ್ಪಿಸುವ ಕೆಲಸವನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ತೊಗರಿ, ಹತ್ತಿ, ಕಬ್ಬು, ಉದ್ದು, ಮುಸುಕಿನ ಜೋಳ ಸೇರಿದಂತೆ ಒಟ್ಟು 1.53 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿರುವ ಕುರಿತು ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸೂಗುರ ನಿರ್ದೇಶಕರಿಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಉಪ ಕೃಷಿ ನಿರ್ದೇಶಕರಾದ ಅನುಸೂಯ ಹೂಗಾರ, ಸಮದ್ ಪಟೇಲ್ ಸೇರಿ ಮತ್ತಿತರ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು