NEWSನಮ್ಮರಾಜ್ಯರಾಜಕೀಯ

ಇಂದು ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆಬೀಳುತ್ತಿದ್ದು, ಆರ್.ಆರ್. ನಗರದಲ್ಲಿ ಅಂತಿಮ ಹಂತದ ಕಸರತ್ತು ನಡೆಸಲು ಕಾಂಗ್ರೆಸ್ ತುದಿಗಾಲಲ್ಲಿ ನಿಂತಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭಾನುವಾರ ಮತಬೇಟೆಯಾಡಲಿದ್ದು, ಕೊನೆ ಕ್ಷಣದಲ್ಲಿ ಮತದಾರರನ್ನು ಸೆಳೆಯಲು ಮುಂದಾಗಿದ್ದಾರೆ.

ಇನ್ನು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್‌ಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿ ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಚುನಾವಣಾ ಬಹಿರಂಗ ಪ್ರಚಾರ ಭಾನುವಾರ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಹೀಗಾಗಿ ಕ್ಷೇತ್ರಕ್ಕೆ ಸಂಬಂಧಪಡದವರು ಹೊರ ನಡೆಯಬೇಕು ಎಂದು ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಬಹಿರಂಗ ಪ್ರಚಾರದ ಅವಧಿ ಮುಕ್ತಾಯವಾದ ಬಳಿಕ ಯಾವುದೇ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು, ಕಾರ್ಯಕರ್ತರು ಸೇರಿ ಯಾರೊಬ್ಬರೂ ಬಹಿರಂಗ ಪ್ರಚಾರ ಕೈಗೊಳ್ಳುತ್ತಿಲ್ಲ. ಸೋಮವಾರ ಅಭ್ಯರ್ಥಿಗಳು ಅಂತಿಮ ಕಸರತ್ತು ನಡೆಸಲಿದ್ದು, ಮನೆ ಮನೆಗೆ ತೆರಳಿ ಮತಯಾಚಿಸಲಿದ್ದಾರೆ.

ಮೂರು ಪಕ್ಷಗಳ ಪ್ರಮುಖ ನಾಯಕರೂ ಪಾದರಸದಂತೆ ಶಿರಾ ಕ್ಷೇತ್ರದಲ್ಲಿ ಸುತ್ತಾಡ್ತಾ, ಸದ್ದಿಲ್ಲದೆ ಕಾರ್ಯತಂತ್ರ ನಡೆಸುತ್ತಿದ್ದಾರೆ. ಆದರೆ, ನಾಯಕರ ಈ ಲೆಕ್ಕಾಚಾರಗಳಿಗೆಲ್ಲ, ನವೆಂಬರ್ 3ರಂದು ಮತದಾರ ಅಭ್ಯರ್ಥಿಗಳ ಹಣೆಬರಹ ಬದಲಾಯಿಸಲಿದ್ದಾನೆ.

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು