NEWSನಮ್ಮರಾಜ್ಯರಾಜಕೀಯ

ಅತೀಬುದ್ಧಿವಂತರಾದ ನಗರವಾಸಿಗಳು: ಬೆಂಗ್ಳೂರು ಮಂದಿಯಲ್ಲಿ ಕಳೆಗುಂದಿದ ಮತದಾನ, ಶಿರಾದಲ್ಲಿ ಉತ್ಸಾಹ ಅಲೆ

ಆರ್‌ಆರ್‌ ನಗರ ಉಪ ಚುನಾವಣೆಯಲ್ಲಿ ಕೋವಿಡ್ ಸೋಂಕಿತರಿಂದ ಮತದಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪ್ರತಿಷ್ಠೆಯ ಕಣಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಬೈಎಲೆಕ್ಷನ್ ಅತ್ಯಂತ ಶಾಂತಿಯುತವಾಗಿ ನಡೆದಿದ್ದು, ರಾಜರಾಜೇಶ್ವರಿ ಕ್ಷೇತ್ರದಲ್ಲಿ ಈ ಬಾರಿ 45.33% ಮತದಾನ ನಡೆದರೆ 2018ರಲ್ಲಿ 52% ರಷ್ಟು ಮತದಾನ ನಡೆದಿತ್ತು. ಶಿರಾದಲ್ಲಿ ಈ ಬಾರಿ 82.31% ರಷ್ಟು ಮತದಾನ ನಡೆದಿದ್ದರೆ 2018 ರಲ್ಲಿ 84.31% ರಷ್ಟು ಮಂದಿ ಹಕ್ಕು ಚಲಾಯಿಸಿದ್ದರು. ಒಟ್ಟಾರೆ ಇಂದು ಎರಡೂ ಕ್ಷೇತ್ರಗಳಲ್ಲಿ ಶೇ.51.3ರಷ್ಟು ಮತದಾನವಾಗಿದೆ.

ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್‍ನ ಕುಸುಮಾ, ಜೆಡಿಎಸ್‍ನ ಕೃಷ್ಣಮೂರ್ತಿ ಸೇರಿ 16 ಹುರಿಯಾಳುಗಳ ಭವಿಷ್ಯ ಮತಯಂತ್ರ ಸೇರಿದರೆ, ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ, ಕಾಂಗ್ರೆಸ್‍ನ ಜಯಚಂದ್ರ, ಜೆಡಿಎಸ್‍ನ ಅಮ್ಮಾಜಮ್ಮ ಸೇರಿ 15 ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರವಾಗಿದೆ.

ಏಳು ದಿನಗಳ ಬಳಿಕ ಅಂದರೆ, ನವೆಂಬರ್ 10ಕ್ಕೆ ಫಲಿತಾಂಶ ಹೊರಬೀಳಲಿದೆ. ರಾಜರಾಜೇಶ್ವರಿ ನಗರ ಪ್ರಚಾರ ಕಣದಲ್ಲಿ ಸಿಡಿದ ಮಾತಿನ ಬಾಂಬ್‌ಗಳನ್ನು ಗಮನಿಸಿದರೆ ಈ ಬಾರಿಯ ಚುನಾವಣೆಯಲ್ಲಿ ಏನೇನೋ ಆಗಿಬಿಡಬಹುದು ಎಂಬ ಭೀತಿ ಮನೆ ಮಾಡಿತ್ತು. ಆದರೆ ಅದೃಷ್ಟವಶಾತ್ ಅಂಥದ್ದೇನು ನಡೆಯಲಿಲ್ಲ. ಬೆಳಗ್ಗೆ ಏಳು ಗಂಟೆಗೆ ಶುರುವಾದ ಮತದಾನ ಸಂಜೆ ಆರರವರೆಗೂ ನಿರಾತಂಕವಾಗಿ ನಡೆಯಿತು.

ಬೆಳಗ್ಗೆ ಮತ್ತು ಸಂಜೆ ಮತದಾನ ಪ್ರಕ್ರಿಯೆ ಒಂಚೂರು ಬಿರುಸು ಪಡೆದಿದ್ದು ಬಿಟ್ಟರೆ ಉಳಿದ ಅವಧಿಯಲ್ಲಿ ಅತ್ಯಂತ ನೀರಸವಾಗಿತ್ತು. ಬೇಸರದ ವಿಷ್ಯ ಅಂದ್ರೆ, ಅತ್ಯಂತ ಸುಶಿಕ್ಷಿತ ಮತದಾರರು ಎನಿಸಿಕೊಂಡ ನಗರ ಪ್ರದೇಶದ ಮಂದಿ, ತಮ್ಮ ಹಕ್ಕು ಚಲಾಯಿಸಲು ಉತ್ಸಾಹ ತೋರಲೇ ಇಲ್ಲ.

ಮತದಾನದ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಆರ್ ಆರ್ ನಗರದಲ್ಲಿ ವೋಟಿಂಗ್ ಪ್ರಮಾಣ ಹೆಚ್ಚಲೇ ಇಲ್ಲ. ಯುವಕರಿಗಿಂತ ಹಿರಿಯರೇ ಮತಗಟ್ಟೆಗೆ ಹೆಚ್ಚಾಗಿ ಧಾವಿಸಿದ್ದರು. ಆರೋಗ್ಯ ಸಮಸ್ಯೆಯಿಂದ ಬಳಲಿ ನಡೆಯಲಾಗದವರೂ ಸಹ ಮತ ಚಲಾಯಿಸಲು ಬಂದಿದ್ದರು. ಆದರೆ, ಎಲ್ಲಾ ಸರಿಯಾಗಿದ್ದ ಹಲವು ಮಂದಿ ಬಾರದಿರುವುದು ಅವರ ಮೂಲ ಭೂತ ಹಕ್ಕನ್ನು ಅವರೇ ಪ್ರಶ್ನಿಸಿಕೊಳ್ಳುವಂತೆ ಮಾಡಿದೆ ಎಂದರೆ ತಪ್ಪಾಗಲಾರದು.

ಇನ್ನು ಶಿರಾದಲ್ಲಿ ಪರಿಸ್ಥಿತಿ ಇದಕ್ಕೆ ಸಂಪೂರ್ಣ ತದ್ವಿರುದ್ಧ. ಅಲ್ಲಿನ ಕೊರೊನಾ ನಡುವೆಯೂ ಮತದಾರರು ಬಲು ಉತ್ಸಾಹದಿಂದ ಮತಗಟ್ಟೆಗೆ ಬಂದರು. ಒಟ್ಟಾರೆ ಎರಡೂ ಕ್ಷೇತ್ರಗಳಲ್ಲಿ ಶೇ.51.3ರಷ್ಟು ಮತದಾನ ಆಗಿದೆ.

ಮತ ಪ್ರಮಾಣ ಇಳಿಕೆಗೆ ಕಾರಣ
1.ಲಾಕ್‍ಡೌನ್ ವೇಳೆ ಊರಿಗೆ ಹೋದವರು ಸಂಪೂರ್ಣವಾಗಿ ವಾಪಸ್ ಆಗದೇ ಇರುವುದು
2.ಕೊರೊನಾ ಸೋಂಕು ಭೀತಿ
3.ಮತದಾನ ಮಾಡಲು ನಿರ್ಲಕ್ಷ್ಯ ಧೋರಣೆ
4.ಗಾರ್ಮೆಂಟ್ಸ್‌ ಗೆ ರಜೆ ನೀಡದೇ ಇರುವುದು ಸೇರಿ ಹಲವು ಕಾರಣಗಳು ಇವೆ ಎಂದು ಹೇಳಲಾಗುತ್ತಿದೆ.

ಕೋವಿಡ್ ಸೋಂಕಿತರಿಂದ ಮತದಾನ
154-ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತದಾನದ ದಿನ 6 ಮಂದಿ ಕೋವಿಡ್ ಸೋಂಕಿತರು ಮತದಾನ ಮಾಡುವುದಾಗಿ ಆಸಕ್ತಿ ವಹಿಸಿ ನೋಂದಣಿ ಮಾಡಿಕೊಂಡಿದ್ದರು. ಸದರಿ ನೋಂದಣಿ ಮಾಡಿಕೊಂಡಿದ್ದವರಲ್ಲಿ ಕ್ರ.ಸಂ: 3 ಮತ್ತು 6 ರವರನ್ನು ಹೊರತುಪಡಿಸಿ 4 ಮಂದಿ ಇಂದು ಮತದಾನ ಮಾಡಿದ್ದಾರೆ. ಈ ವೇಳೆ ಮತಗಟ್ಟೆ 370/Aರಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಆಯುಕ್ತರು ಮತದಾನ ಮಾಡಲು ಬಂದ ಕೋವಿಡ್ ಸೋಂಕಿತರನ್ನು ಬರಮಾಡಿಕೊಂಡು ಮತದಾನ ಮಾಡಲು ಬಂದವರ ಗುರುತಿನ ಚೀಟಿ ಪರಿಶೀಲನೆ ಮಾಡಿ ಶ್ಲಾಘಿಸಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?