ಬೆಂಗಳೂರು: ಉಪ ಚುನಾವಣೆ ಮುಗಿಯುತ್ತಿದ್ದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರ ಹೆಚ್ಚಳ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ವಿದ್ಯುತ್ ಸರಬರಾಜು ಕಂಪನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 40 ಪೈಸೆ ಹೆಚ್ಚಿಸಿದ್ದು, ನವೆಂಬರ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕಳೆದ ಮಾರ್ಚ್ ನಿಂದಲೇ ದರ ಹೆಚ್ಚಳವಾಗಬೇಕಿತ್ತು. ಆದರೆ ಕೊರೊನಾ ಮತ್ತು ಆರ್ ಆರ್ ನಗರ, ಶಿರಾ ಉಪ ಚುನಾವಣೆ ಕಾರಣದಿಂದ ತಡೆಹಿಡಿಯಲಾಗಿದ್ದ ದರ ಹೆಚ್ಚಳ ಪ್ರಸ್ತಾವಕ್ಕೆ ಸರ್ಕಾರ ಇಂದು ಒಪ್ಪಿಗೆ ಸೂಚಿಸಿದೆ.
2020-21ನೇ ಸಾಲಿನ ವಿದ್ಯುಚ್ಛಕ್ತಿದರ ಪರಿಷ್ಕರಣೆ: pic.twitter.com/wDqzpLLlXv
— @NammaBESCOM (@NammaBESCOM) November 4, 2020