CRIMENEWSದೇಶ-ವಿದೇಶನಮ್ಮರಾಜ್ಯ

KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ

ಬೆಂಗಳೂರಿನಿಂದ ಮಧುರೈಗೆ ಹೋಗುತ್ತಿದ್ದ KSRTC ಪಲ್ಲಕ್ಕಿ ಬಸ್ ಬೆಳಗಿನ ಜಾವ 3 ಗಂಟೆಯ ವೇಳೆಗೆ ಸೇಲಂ ತಲುಪಿದಾಗ ಈ ಅವಘಡ ಸಂಭವಿಸಿದೆ

ವಿಜಯಪಥ ಸಮಗ್ರ ಸುದ್ದಿ

ಸೇಲಂ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದ ಘಟನೆ ತಮಿಳುನಾಡಿನ ಸೇಲಂ (Salem) ಸಮೀಪ ಇಂದು ಮುಂಜಾನೆ ನಡೆದಿದೆ.

ಬೆಂಗಳೂರಿನಿಂದ ಮಧುರೈಗೆ ಹೋಗುತ್ತಿದ್ದ KSRTC ಪಲ್ಲಕ್ಕಿ ಬಸ್ ಬೆಳಗಿನ ಜಾವ 3 ಗಂಟೆಯ ವೇಳೆಗೆ ಸೇಲಂ ತಲುಪಿದಾಗ ಈ ಅವಘಡ ಸಂಭವಿಸಿದೆ.

ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆಯಿಂದ ಪಕ್ಕಕ್ಕೆ ಸರಿದಿದೆ. ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬದಿಯಲ್ಲಿದ್ದ ಮಣ್ಣಿನ ಗುಡ್ಡದ ಮೇಲೆ ಹತ್ತಿಸಿ ಬಸ್ ನಿಲ್ಲಿಸುವ ಮೂಲಕ ಸಭವಿಸುತ್ತಿದ್ದ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ.

ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆಯಿಂದ ಆತಂಕಕ್ಕೊಳಗಾಗಿದ್ದ ಪ್ರಯಾಣಿಕರು ಬಸ್ಸಿನಿಂದ ಕೆಳಗಿಳಿದು ನಿಟ್ಟುಸಿರು ಬಿಟ್ಟಿದ್ದಾರೆ. ಚಾಲಕ ನಿದ್ದೆಯ ಮಂಪರಿನಲ್ಲಿ ಬಸ್ ಚಾಲನೆ ಮಾಡುತ್ತಿದ್ದದ್ದೇ ಈ ಘಟನೆಗೆ ಕಾರಣ” ಎಂದು ಪ್ರಯಾಣಿಕರು ಗಂಭೀರ ಆರೋಪ ಮಾಡಿದ್ದಾರೆ.

ಅಪಘಾತ ಸಂಭವಿಸಿದ ಬೆನ್ನಲ್ಲೇ ಆಕ್ರೋಶಗೊಂಡ ಪ್ರಯಾಣಿಕರು, ನಿರ್ಲಕ್ಷ್ಯತನದಿಂದ ಚಾಲನೆ ಮಾಡಿದ ಚಾಲಕನನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗವೂ ನಡೆದಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳು ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇನ್ನು ಬಸ್‌ ಅಪಘಾತಕ್ಕೆ ಈಡಾದ ಹಿನ್ನೆಲೆಯಲ್ಲಿ ಪರ್ಯಾಯ ಬಸ್ಸಿನ ಮೂಲಕ ಪ್ರಯಾಣಿಕರನ್ನು ಮದುರೈಗೆ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಯಿತು.

Deva
the authorDeva

Leave a Reply

error: Content is protected !!
Latest news
KSRTC: ಅತೀ ಶೀಘ್ರದಲ್ಲೇ ಶೇ.15ರಿಂದ 20ರಷ್ಟು ಬಸ್‌ ಪ್ರಯಾಣ ದರ ಏರಿಕೆ- ಸುಳಿವುಕೊಟ್ಟ ಮುಖ್ಯಮಂತ್ರಿ ಡಿಕೆಶಿ ವಿದ್ಯುತ್‌ ಖಾಸಗೀಕರಣ ನಿಲ್ಲಿಸಲು ಆಗ್ರಹಿಸಿ ಅತ್ತಹಳ್ಳಿ ದೇವರಾಜ್ ನೇತೃತ್ವದಲ್ಲಿ ಪ್ರತಿಭಟನೆ NWKRTC: ಡೋರ್‌ ಹಾಕದಿದ್ದರೆ, ಚಾಲಕರ ಬಳಿ ಕುಳಿತಿದ್ದರೆ ಕಂಡಕ್ಟರ್‌ ವಿರುದ್ಧ ಪ್ರಕರಣ ದಾಖಲಿಸಿ- ತನಿಖಾಧಿಕಾರಿಗಳಿ ಡಿಸ... ಇದು ನಿಗಮಗೆ ಗೊತ್ತೆ? ಗ್ರಾಚ್ಯುಟಿ, ರಜೆ ನಗದೀಕರಣ ಸೇರಿ 10 ಆದಾಯಗಳ ಮೇಲೆ ಸರ್ಕಾರ ಯಾವುದೇ ತೆರಿಗೆ ವಿಧಿಸುವಂತಿಲ್ಲ 4-6 ತಿಂಗಳಿನಲ್ಲಿ ಬೆಂಗಳೂರಿನ ರಸ್ತೆಗಳಿಗೆ ಹೊಸ ಲುಕ್‌: ಸಚಿವ ಕೃಷ್ಣ ಬೈರೇಗೌಡ BMTC ಬಸ್‌- ಬೈಕ್‌ಗೆ ಡಿಕ್ಕಿ: ಬೈಕ್‌ನಲ್ಲಿದ್ದ ಮಗು, ದಂಪತಿ ಸೇರಿ ಮೂವರು ಮೃತ ಮತ್ತೊಂದು ಮಗುವಿನ ಸ್ಥಿತಿ ಚಿಂತಾಜನಕ BMTC: ಮುಂದಿನ ವರ್ಷದಿಂದ ನಿರ್ವಾಹಕರ ಮುಂಬಡ್ತಿ ಜೇಷ್ಠತಾ ಪಟ್ಟಿಯಲ್ಲಿ ನಿಧನ, ವಜಾ, ನಿವೃತ್ತರ ಹೆಸರು ಸೇರ್ಪಡೆ ಆಗಲ್ಲ-... ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಪ್ರತಿಭಟನೆ ಇಂದು KSRTC ನೂತನ ಎಂಡಿಯಾಗಿ ಅಧಿಕಾರ ವಹಿಸಿಕೊಂಡ ಶಿವಕುಮಾರ್ ಅಂತಾರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿದಿದೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಲೇ ಕಡಿತಗೊಳಿಸಿ – ಕೇಂದ್ರಕ್ಕೆ ಅಶೋಕ್ ಆಗ್ರಹ