NEWSರಾಜಕೀಯ

ವಿದ್ಯುತ್ ದರ ಏರಿಕೆ ವಾಪಸ್‌ ಪಡೆಯಲು ಎಚ್‌ಡಿಕೆ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ಇಂಧ ಸಮಯದಲ್ಲಿ ಜನಸಾಮಾನ್ಯರ ಮೇಲೆ ಇನ್ನಷ್ಟು ಹೊರೆ ಹೇರುಯವುದು ತರವಲ್ಲ. ಹಾಗಾಗಿ ವಿದ್ಯುತ್ ದರ ಏರಿಕೆಯನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.

ಪ್ರತಿ ಯೂನಿಟ್‌ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು. ಇಲ್ಲದಿದ್ದರೆ ಜನರಿಗಾಗಿ ಬೀದಿಗಿಳಿದು ಹೋರಾಡಲು ಸಿದ್ಧ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ