Vijayapatha – ವಿಜಯಪಥ
Friday, November 1, 2024
NEWSರಾಜಕೀಯ

ಲವ್ ಜಿಹಾದ್ ಹೆಸರಿನಲ್ಲಿ ಮತಾಂತರಕ್ಕೆ ಪೂರ್ಣವಿರಾಮ: ಸಿಎಂ ಬಿಎಸ್‌ವೈ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಮಂಗಳೂರು: ಲವ್ ಜಿಹಾದ್ ಹೆಸರಲ್ಲಿ ಮತಾಂತವಾಗುತ್ತಿರುವುದನ್ನು ಕೊನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಗರದ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿರುವ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರಿಗಳ ಜತೆ ಈ ಬಗ್ಗೆ ಚರ್ಚೆಯಾಗುತ್ತಿದೆ. ಕರ್ನಾಟಕದಲ್ಲಿ ಮತಾಂತರದ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.

ಇನ್ನು ಮಂಗಳೂರಿನಲ್ಲಿ 20 ವರ್ಷಗಳ ನಂತರ ರಾಜ್ಯಕಾರ್ಯಕಾರಿಣಿ ಸಭೆಯಾಗುತ್ತಿದೆ. ರಾಜ್ಯಾಧ್ಯಕ್ಷರಾದ ಬಳಿಕ ನಳಿನ್ ಕುಮಾರ್ ಕಟೀಲ್ ಪಕ್ಷ ಬಲಪಡಿಸಿದ್ದಾರೆ. ಎರಡು ವರ್ಷಗಳ ಬಳಿಕ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತದೆ. 2014 ರಲ್ಲಿ ಬಿಜೆಪಿ 104 ಸೀಟ್ ಗಳಿಸಿತ್ತು. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ 18 ಮಂದಿ ಆಡಳಿತ ಪಕ್ಷದ ಸದಸ್ಯರು ಬಿಜೆಪಿಗೆ ಸೇರಿದ್ದರು. 18 ಜನರ ಸಹಕಾರದಿಂದ ಅಧಿಕಾರಕ್ಕೆ ಬರಲು ಸಾಧ್ಯವಾಯಿತು ಎಂದು ಸ್ಮರಿಸಿದರು.

ಆರ್.ಆರ್ ನಗರದಲ್ಲಿ 40 ಸಾವಿರ, ಶಿರಾದಲ್ಲಿ 25 ಸಾವಿರ ಮತಗಳ ಅಂತರದ ಗೆಲುವಾಗಲಿದೆ. ಕಾಂಗ್ರೆಸ್ ದಯನೀಯ ಸೋಲನ್ನು ಅನುಭವಿಸುತ್ತದೆ. ನ.10ರಂದು ಹೊರಬೀಳುವ ಫಲಿತಾಂಶದಲ್ಲಿ ವಿಪಕ್ಷಗಳಿಗೆ ಉತ್ತರ ಸಿಗಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಹಣಕಾಸಿನ ವ್ಯವಸ್ಥೆ ಸುಧಾರಣೆಯಾಗುತ್ತಿದೆ. ಶಾಸಕರಿಗೆ 50 ಲಕ್ಷ ರೂ. ಅನುದಾನ ಬಿಡುಗಡೆಯಾಗಲಿದೆ. ಮಂಗಳೂರು ನಗರ ಆಡಳಿತಕ್ಕೆ 125 ಕೋಟಿ ರೂ. ಅನುದಾನ ಸಿಗಲಿದೆ. ಈಗಾಗಲೇ 50 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇನೆ. ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಉತ್ತಮ ಕೆಲಸವಾಗುತ್ತಿದೆ. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಮಟ್ಟ ಹಾಕಲಾಗುತ್ತಿದೆ ಎಂದರು.

ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ. ಆರು ತಿಂಗಳಿನಲ್ಲಿ ಇಲ್ಲಿ ಬದಲಾವಣೆಯಾಗಲಿದೆ. ಸಾಗರದ ಅಲೆಗಳಿಂದ ವಿದ್ಯುತ್ ಉತ್ಪಾದನೆಗೂ ಕ್ರಮ ಕೈಗೊಂಡಿದ್ದೇವೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಸ್ಥಿತಿಯಲ್ಲಿದೆ. ಆದರೆ ಇನ್ನೂ ಹಲವು ತಿಂಗಳು ಕೊರೊನಾ ನಿಯಮ ಪಾಲಿಸಬೇಕಾಗಿದೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಸದಾನಂದ ಗೌಡ ಸೇರಿ ರಾಜ್ಯಸಮಿತಿ ಪದಾಧಿಕಾರಿಗಳು ಭಾಗಿಯಾಗಿದ್ದರು.

Leave a Reply

error: Content is protected !!
LATEST
ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ