Vijayapatha – ವಿಜಯಪಥ
Friday, November 1, 2024
NEWSದೇಶ-ವಿದೇಶನಮ್ಮರಾಜ್ಯ

ವಿವಿ, ಕಾಲೇಜುಗಳ ಪುನಾರಂಭಕ್ಕೆ ಯುಜಿಸಿ ಮಾರ್ಗಸೂಚಿ ಬಿಡುಗಡೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಪುನಾರಂಭ ಕುರಿತಂತೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪರಿಶೀಲಿಸಿದ್ದು, ಶಿಕ್ಷಣ ಸಚಿವಾಲಯ ಮತ್ತು ಗೃಹ ವ್ಯವಹಾರಗಳ ಸಚಿವಾಲಯ ಅನುಮೋದನೆ ನೀಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಸ್ಥಳೀಯ ಸ್ಥಿತಿಗತಿಗಳು ಮತ್ತು ಸರ್ಕಾರಗಳ ನಿರ್ದೇಶನಗಳನ್ನು ಅನುಸರಿಸಿ ಶಿಕ್ಷಣ ಸಂಸ್ಥೆಗಳು ಈ ಮಾರ್ಗಸೂಚಿ ಅಳವಡಿಸಿಕೊಳ್ಳಬೇಕು. ಕೇಂದ್ರದಿಂದ ಆರ್ಥಿಕ ನೆರವು ಪಡೆಯುತ್ತಿರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಂಸ್ಥೆಯ ಮುಖ್ಯಸ್ಥರಿಗೆ ಆತ ಅಥವಾ ಆಕೆಗೆ ಭೌತಿಕವಾಗಿ ತರಗತಿಗಳನ್ನು ನಡೆಸುವ ಸಾಧ್ಯತೆಯ ಬಗ್ಗೆ ಮನವರಿಕೆಯಾದರೆ ಅವರು ಅದರಂತೆ ನಿರ್ಧಾರ ಕೈಗೊಳ್ಳಬಹುದು ಎಂದು ತಿಳಿಸಲಾಗಿದೆ.

ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ತಮ್ಮ ಕ್ಯಾಂಪಸ್ ಗಳನ್ನು ಹಂತಹಂತವಾಗಿ ಪುನರಾರಂಭ ಮಾಡುವ ಯೋಜನೆಗಳನ್ನು ರೂಪಿಸುವುದು. ಅಂತಹ ಸಂದರ್ಭಗಳಲ್ಲಿ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಮತ್ತು ಇತರ ರಕ್ಷಣಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದೆ.

ಇತರ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಅಂದರೆ ರಾಜ್ಯ ವಿಶ್ವವಿದ್ಯಾಲಯಗಳು, ಖಾಸಗಿ ವಿಶ್ವವಿದ್ಯಾಲಯಗಳು, ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ಆರಂಭಿಸಲು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರದ ನಿರ್ಧಾರದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

Leave a Reply

error: Content is protected !!
LATEST
ಅನ್ಯ ಭಾಷಿಕರಿಗೆ ಅಭಿಮಾನದಿಂದ ಕನ್ನಡ ಕಲಿಸಿ: ಪುರಸಭೆ ಅಧ್ಯಕ್ಷೆ ಪಂಕಜಾ ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ: ಶ್ರೀಗಂಗಾಧರ ಶಿವಾಚಾರ್ಯ ಸ್ವಾಮೀಜಿ KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ