NEWSನಮ್ಮಜಿಲ್ಲೆನಮ್ಮರಾಜ್ಯ

ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌.ಅಶೋಕ್‌

ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಯ ಶಕ್ತಿ ಕುಂದಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಏಳಿಗೆಯ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತವನ್ನು ಸರ್ಕಾರ ತಲುಪಿರುವುದು ದುರಂತವೇ ಸರಿ.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮುಷ್ಕರ, ‌ಪ್ರತಿಭಟನೆಗಳು ಸಾಮಾನ್ಯವಾಗಿದೆ. Indian National Congress – Karnataka ಸರ್ಕಾರದ ಆಡಳಿತಕ್ಕೆ ರಾಜ್ಯವೇ ರೋಸಿ ಹೋಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಸಭೆಗಳ ಮೇಲೆ ಸಭೆ ನಡೆಸಿದರೂ ಅವರಿಗೆ ನ್ಯಾಯಯುತವಾಗಿ ಕೊಡಬೇಕಿರುವುದನ್ನು ಕೊಡುವುದಕ್ಕೆ ಇನ್ನೂ ಇವರಿಂದ ಸಾಧ್ಯವಾಗಿಲ್ಲ ಎಂದು ವ್ಯಂಗ್ಯವಾಡಿದ್ದು, ಇದರಿಂದ ನೌಕರರು ಅಡಿಗಡಿಗೆ ಪ್ರತಿಭಟನೆ, ಮುಷ್ಕರ ನಡೆಸುವುದಕ್ಕೆ ಮುಂದಾಗುತ್ತಿದ್ದಾರೆ.

ಇನ್ನು ಕಾಂಗ್ರೆಸ್ ಜಾರಿಗೊಳಿಸಿರುವ ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆ ಶಕ್ತಿಯಿಂದಾಗಿ ಸಾರಿಗೆ ಇಲಾಖೆಯ ನೌಕರರು ಹೈರಾಣಾಗಿದ್ದಾರೆ. ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ ಎಂದು ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಯ ಶಕ್ತಿ ಕುಂದಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಏಳಿಗೆಯ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತವನ್ನು ಸರ್ಕಾರ ತಲುಪಿರುವುದು ದುರಂತವೇ ಸರಿ.

ಸರ್ಕಾರದ ಬೇಜವಾಬ್ದಾರಿ ನಡೆಯಿಂದ‌ ಆಕ್ರೋಶಗೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮೇ 20ರಿಂದ ಮುಷ್ಕರ ನಡೆಸಲು ನಿರ್ಧರಿಸಿದೆ. ತಮ್ಮ ಬೇಡಿಕೆ ಈಡೇರದಿದ್ದರೆ ಮೇ 20ರ ನಂತರ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎಂದು ಸಾರಿಗೆ ನೌಕರರು ತಿಳಿಸಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ತುಘಲತ್ ಆಡಳಿತದಿಂದಾಗಿ ರಾಜ್ಯದ ಜನತೆ ಮತ್ತೊಮ್ಮೆ ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎಂದು ಆರ್‌.ಅಶೋಕ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ