NEWSಬೆಂಗಳೂರು

GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ

ರಾಗಿಗುಡ್ಡ - ರಾಘವೇಂದ್ರ ಸ್ವಾಮಿ ಮಠ ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಚಿಂತನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನಗರದ ಪ್ರಮುಖ ಸಂಚಾರ ದಟ್ಟಣೆಯ ಪ್ರದೇಶಗಳಿಗೆ ಹಾಗೂ ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಸಾರ್ವಜನಿಕ ಸುಗಮ ಸಂಚಾರಕ್ಕಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನವನ್ನು ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತ ಕೆ.ಎನ್. ರಮೇಶ್ ನೀಡಿದರು

ರಾಗಿಗುಡ್ಡ – ರಾಘವೇಂದ್ರ ಸ್ವಾಮಿ ಮಠ ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಚಿಂತನೆ: ರಾಗಿಗುಡ್ಡ ಡಬಲ್ ಡೆಕ್ಕರ್ ಫ್ಲೈಓವರ್‌ನ ಡೌನ್-ರ್ಯಾಂಪ್ ಬಳಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯನ್ನು ಸೂಕ್ಷ್ಮವಾಗಿ ಗಮನಿಸಿದ ಆಯುಕ್ತರು, ಈ ಭಾಗದಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ರಾಘವೇಂದ್ರ ಸ್ವಾಮಿ ಮಠದ ಜಂಕ್ಷನ್ ಬಳಿ ಉದ್ದೇಶಿತ ಕೆಳಸೇತುವೆ ನಿರ್ಮಾಣದ ಕುರಿತು ಟ್ರಾಫಿಕ್ ಪೊಲೀಸ್ ಹಾಗೂ ತಾಂತ್ರಿಕ ತಂಡದೊಂದಿಗೆ ಚರ್ಚಿಸಿ, ಪ್ರಾಥಮಿಕ ವರದಿ ಪರಿಶೀಲಿಸಿದರು.

ಸಿಲ್ಕ್ ಬೋರ್ಡ್ ಜಂಕ್ಷನ್ – ನೀರು ನಿಲ್ಲುವ ಸಮಸ್ಯೆಗೆ ಕಡಿವಾಣ ಹಾಕಿ: ನಗರದ ಪ್ರಮುಖ ಜಂಕ್ಷನ್ ಆದ ಸಿಲ್ಕ್ ಬೋರ್ಡ್‌ನಲ್ಲಿ ಮಳೆಗಾಲದಲ್ಲಿ ಜೋರು ಮಳೆ ಬಂದಾಗ ಉಂಟಾಗುವ ನೀರು ನಿಲ್ಲುವ ಸ್ಥಳಗಳಿಗೆ ಭೇಟಿ ನೀಡಿದ ಆಯುಕ್ತರು, ಅದಕ್ಕೆ ಕಾರಣವಾದ ತಾಂತ್ರಿಕ ಲೋಪಗಳನ್ನು ಶೀಘ್ರ ಪತ್ತೆ ಹಚ್ಚಿ ಮಳೆನೀರು ಸರಾಗವಾಗಿ ಹರಿದು ಹೋಗಲು ರಾಜಕಾಲುವೆ ಹಾಗೂ ಚರಂಡಿಗಳ ದುರಸ್ತಿಗೆ ತಕ್ಷಣದ ಕ್ರಮ ಕೈಗೊಳ್ಳಲು ಸೂಚಿಸಿದರು.

ಬನಶಂಕರಿ ದೇವಸ್ಥಾನ ಜಂಕ್ಷನ್ – ವೃತ್ತಾಕಾರದ ಸ್ಕೈವಾಕ್ ನಿರ್ಮಾಣಕ್ಕೆ ಸಿದ್ಧತೆ: ಬನಶಂಕರಿ ಜಂಕ್ಷನ್‌ನಲ್ಲಿ ಪಾದಚಾರಿಗಳ ಸುರಕ್ಷತೆಗಾಗಿ ನಿರ್ಮಿಸಲು ಉದ್ದೇಶಿಸಿರುವ ವೃತ್ತಾಕಾರದ ಸ್ಕೈ ವಾಕ್ ನಿರ್ಮಾಣದ ಕಾಮಗಾರಿ ಪ್ರಾರಂಭದ ಹಂತದಲ್ಲಿ ಇದ್ದು, ಈ ಸಂಬಂಧ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.

ಬೆಂಗಳೂರು ದಕ್ಷಿಣ ಭಾಗವನ್ನು ಟ್ರಾಫಿಕ್ ದಟ್ಟಣೆಯಿಂದ ಮುಕ್ತಗೊಳಿಸಲು ಹಾಗೂ ಸುಸಜ್ಜಿತ ಮೂಲಸೌಕರ್ಯದ ಪ್ರದೇಶವನ್ನಾಗಿ ಮಾಡಲು ಪಾಲಿಕೆಯು ಬದ್ಧವಾಗಿದೆ ಎಂದು ಈ ಸಂದರ್ಭದಲ್ಲಿ ಆಯುಕ್ತರು ತಿಳಿಸಿದರು.

ಈ ವೇಳೆ ಪಾಲಿಕೆಯ ಮುಖ್ಯ ಅಭಿಯಂತರರಾದ ಬಸವರಾಜ ಕಬಾಡೆ, ಕೆ ವಿ ರವಿ ಹಾಗೂ ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಇನ್ನಿತರರು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರು: ಅಗ್ರಿಮೆಂಟ್ ಬೇಕು ಎನ್ನುವವರೇ ಒಮ್ಮೆ ನೋಡಿ ಇನ್ನಾದರೂ ಸರಿ ಸಮಾನ ವೇತನ ಕೇಳಲು ಮುಂದಾಗಿ..! ನಾಳೆ ಇಪಿಎಸ್-95, ಬಿಎಂಟಿಸಿ ‍& ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಮಾಸಿಕ ಸಭೆಯ ಶತದಿನೋತ್ಸವ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗೆ 993 ರೂ. ಹೆಚ್ಚಳ- ಭಾರೀ ಏರಿಕೆ ಮೇ 1ರಿಂದಲೇ ಜಾರಿ KSRTC: ಮೇ 4ರಂದು ಸರ್ಕಾರದ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಧರಣಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸಾರಿಗೆ ನೌಕರರಿಂದ ಕರಾಳ ಕಾರ್ಮಿಕ ದಿನಾಚರಣೆ- ಡ್ಯೂಟಿ ಮೇಲೆ ಮೌನ ಪ್ರತಿಭಟನೆ GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ !