LatestNEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಮೇ 4ರಂದು ಸರ್ಕಾರದ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಧರಣಿ

ಇನ್ನಾದರೂ ಸರ್ಕಾರ ಚುನಾವಣಾ ಪೂರ್ವ ನೀಡಿರುವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿಗೆ ಬರುವಂತೆ ಕೂಡಲೇ ಕ್ರಮತೆಗೆದುಕೊಳ್ಳಬೇಕು.

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸರ್ಕಾರ ಚುನಾವಣಾ ಪೂರ್ವ ಸಾರಿಗೆ ನೌಕರರಿಗೆ ನೀಡಿರುವ ಪ್ರಣಾಳಿಕೆ ಭರವಸೆ ಈಡೇರಿಸದೆ ಹಾಗೂ ಇತರೆ ಸಮಸ್ಯೆಗಳನ್ನು ಬಗೆಹರಿಸಲು ಅನುಸರಿಸುತ್ತಿರುವ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಇದೇ ಮೇ 4ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಹಾಗೂ ಒಕ್ಕೂಟದ ಪದಾಧಿಕಾರಿ ಚಂದ್ರಶೇಖರ್‌, ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಲ್ಲಿ ಪ್ರತಿದಿನ ಒಂದು ಕೋಟಿಗೂ ಅಧಿಕ ಪ್ರಯಾಣಿಕರಿಗೆ ಸೇವೆ ನೀಡಲು 1.15 ಲಕ್ಷ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಾವೆಲ್ಲ ಹಬ್ಬ-ಹರಿದಿನಗಳಲ್ಲಿ ಕುಟುಂಬ ಸದಸ್ಯರೊಂದಿಗೆ ಇರದೆ, ಮಳೆ-ಗಾಳಿ-ಬಿಸಿಲು ಎನ್ನದೆ ಅತೀ ಒತ್ತಡದಲ್ಲಿ ಕಷ್ಟಪಟ್ಟು ದುಡಿಯುವ ವರ್ಗವಾಗಿದ್ದರೂ ನಮಗೆ ಸರ್ಕಾರಿ ಮತ್ತು ಇತರೆ ನಿಗಮ ಮಂಡಳಿಗಳ ನೌಕರರ ವೇತನಕ್ಕೆ ಹೋಲಿಸಿದರೆ ಸಿಗುವ ವೇತನ ಅತ್ಯಲ್ಪ ಮತ್ತು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದೇವೆ.

ಹೀಗಾಗಿ ಇನ್ನಾದರೂ ಸರ್ಕಾರ ಚುನಾವಣಾ ಪೂರ್ವ ನೀಡಿರುವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಂತೆ ಸರಿಸಮಾನ ವೇತನ (7 ನೇ ವೇತನ ಆಯೋಗದ ಮಾದರಿಯಲ್ಲಿ) 01/01/2024 ರಿಂದ ಜಾರಿಗೆ ಬರುವಂತೆ ಕೂಡಲೇ ಕ್ರಮತೆಗೆದುಕೊಳ್ಳಬೇಕು.

01/01/2020 ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲಾಗಿದ್ದು, ಈ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ನೀಡಬೇಕು. (ಈಗಾಗಲೇ ಸರ್ಕಾರ 26 ತಿಂಗಳ ವೇತನ ಹಿಂಬಾಕಿ ನೀಡುವ ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಏ.29ರಂದು 450 ಕೋಟಿ ರೂ. ಬಿಡುಗಡೆ ಮಾಡಿದೆ. ಇದರ ಜತೆಗೆ ಬಾಕಿ 12 ತಿಂಗಳ ವೇತನ ಹಿಂಬಾಕಿಯನ್ನು ಸರ್ಕಾರ ಅಥವಾ ಸಂಸ್ಥೆ ಭರಿಸಬೇಕು)

ಸಾರಿಗೆ ಸಂಸ್ಥೆಗಳಲ್ಲಿ ಸಂಘಗಳ ಮಾನ್ಯತೆಗಾಗಿ, ಕಾರ್ಮಿಕ ಸಂಘಟನೆಗಳ ಚುನಾವಣೆ ಈ ಕೂಡಲೇ ನಡೆಸಬೇಕು ಎಂಬ ಈ ಬೇಡಿಕೆಗಳನ್ನು ಇಟ್ಟುಕೊಂಡು ಒಕ್ಕೂಟದಿಂದ ಒಂದುದಿನದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು ಸಮಸ್ತೆ ನೌಕರರು ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ನಾವು ನಾವು ಕಾಯ-ವಚಾ-ಮನಸ್ಸ ದುಡಿಯುವ ಕಾರಣದಿಂದಲೇ ಸಂಸ್ಥೆಗೆ ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಒಲಿದು ಬಂದಿವೆ. ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾಂದ ಶಕ್ತಿ ಯೋಜನೆಯನ್ನು ಜಾರಿಗೆ ತರುವ ಸಂದರ್ಭದಲ್ಲಿ ಸಂಸ್ಥೆಯಲ್ಲಿ ಸಾಕಷ್ಟು ಬಸ್ಸುಗಳ ಮತ್ತು ನೌಕರರ ಕೊರತೆ ಇದ್ದರೂ ಸಾರಿಗೆ ನೌಕರರು ಕಷ್ಟ ಪಟ್ಟು ದುಡಿದ ಪರಿಣಾಮ ಇಂದು ಶಕ್ತಿ ಯೋಜನೆಯಲ್ಲಿ ನೂರಾರು ಕೋಟಿಗಳ ಸಂಖ್ಯೆಯಲ್ಲಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ ದಾಖಲೆಯು ಸಹ ನಿರ್ಮಾಣವಾಗಿದೆ. ಜತೆಗೆ ಸರ್ಕಾರಕ್ಕೆ ಅತೀ ಹೆಚ್ಚು ಜನಪ್ರಿಯತೆ ತಂದುಕೊಟ್ಟ ಯೋಜನೆ ಎಂದರೆ ಶಕ್ತಿ ಯೋಜನೆ ಎಂದರೆ ಸುಳ್ಳಾಗಲಾರದು.

ನುಡಿದಂತೆ ನಡೆಯುವ ಸರ್ಕಾರವೆಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳು, ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದಿದೆ. ಇದರ ಜತೆಗೆ ಇದುವರೆಗೂ ಮುಖ್ಯಮಂತ್ರಿಗಳು, ಸಾರಿಗೆ ಸಚಿವರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಸಭೆಗಳು ನಡೆದಿವೆಯೇ ಹೊರತು ನೌಕರರಿಗೆ ಯಾವುದೇ ರೀತಿಯ ಅನುಕೂಲವಾಗಿಲ್ಲ. ನಮ್ಮ ನ್ಯಾಯಯುತ ಬೇಡಿಕೆಗಳು ಇನ್ನೂ ಈಡೇರಿಸಲು ಯಾವುದೇ ಕ್ರಮ ಕೈಗೊಂಡಿಲ್ಲ, ಇದು ಬೇಸರದ ಸಂಗತಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾವು ದಿನ ನಿತ್ಯದ ಅಗತ್ಯ ವಸ್ತುಗಳ ಖರೀದಿಗೆ, ಮಕ್ಕಳ ವಿದ್ಯಭ್ಯಾಸಕ್ಕೆ ಮತ್ತು ಇತರೆ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವಂತ ಸ್ಥಿತಿಗೆ ತಲುಪಿದ್ದೇವೆ, ಈ ಎಲ್ಲ ಕಾರಣಗಳಿಂದ ಬೇಸತ್ತ ನಮಗೆ ಅನ್ಯ ಮಾರ್ಗವಿಲ್ಲದೆ ಬೇಡಿಕೆಗಳ ಈಡೇರಿಕೆಗಾಗಿ ನಾವು ಒಕ್ಕೂಟದ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಒಂದುದಿನದ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಮೇ 4ರಂದು ಸರ್ಕಾರದ ವಿಳಂಬ ನೀತಿ ಖಂಡಿಸಿ ಸಾರಿಗೆ ನೌಕರರ ಒಕ್ಕೂಟದಿಂದ ಧರಣಿ ಸರ್ಕಾರದ ಧೋರಣೆ ಖಂಡಿಸಿ ರಾಜ್ಯ ಸಾರಿಗೆ ನೌಕರರಿಂದ ಕರಾಳ ಕಾರ್ಮಿಕ ದಿನಾಚರಣೆ- ಡ್ಯೂಟಿ ಮೇಲೆ ಮೌನ ಪ್ರತಿಭಟನೆ GBA ದಕ್ಷಿಣ: ಮಳೆ ಬಂದಾಗ ಹೆಚ್ಚು ನೀರು ನಿಲ್ಲುವ ಪ್ರದೇಶಗಳಿಗೆ ಆಯುಕ್ತ ರಮೇಶ್ ಭೇಟಿ ಸರ್ಕಾರ ಸಾರಿಗೆ ನೌಕರರ ಏಳಿಗೆ ಬಗ್ಗೆ ಯೋಚಿಸಲೂ ಆಗದಂತಹ ನಿಕೃಷ್ಟ ಹಂತ ತಲುಪಿರುವುದು ದುರಂತವೇ ಸರಿ: ವಿಪಕ್ಷ ನಾಯಕ ಆರ್‌... KKRTC: ಭ್ರಷ್ಟ ಅಧಿಕಾರಿಗಳ ವಿರುದ್ಧ ಎಂಡಿಗೆ ಲಿಖಿತ ದೂರು ಕೊಟ್ಟು 3 ತಿಂಗಳುಗಳು ಕಳೆದರೂ ಯಾವುದೇ ಕ್ರಮವಿಲ್ಲ ಏಕೆ- ಯಾ... KSRTC- ನಮ್ಮ ಹೋರಾಟ ಕಡೆಗಣಿಸುತ್ತಿದ್ದೀರಿ ಇದು ನಿಮಗೆ ಸಲ್ಲ- ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ ಕೇಂದ್ರ ಸರ್... ಸಾರಿಗೆ ನೌಕರರಿಗೆ 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಮೊದಲ ಹಂತವಾಗಿ 450 ಕೋಟಿ ರೂ. ಬಿಡುಗಡೆ ಮಾಡಿದ ಸರ್ಕಾರ ! KSRTC: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಗುಡ್ಡಕ್ಕೆ ಡಿಕ್ಕಿ ಹೊಡೆದು ನಿಂತ ಬಸ್‌- ತಪ್ಪಿದ ಭಾರಿ ಅನಾಹುತ KSRTC ಪ್ರಮುಖ ಬೇಡಿಕೆಗಳ ಸರ್ಕಾರ ಇನ್ನೂ ನೌಕರರ ಶ್ರಮಕ್ಕನ್ವಯ ಇತ್ಯರ್ಥಪಡಿಸಿಲ್ಲ: ಜ್ಯೋತಿ ಅನಂತಸುಬ್ಬರಾವ್ ಅಸಮಾಧಾನ ಇಂದು ಸಾರಿಗೆ ಸಚಿವರ ಅಧ್ಯಕ್ಷತೇಲಿ ನೌಕರರ ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿ ಕುರಿತು ಮತ್ತೇ ಒಕ್ಕೂಟದ ಜತೆ ಸಭೆ