ನ್ಯೂಡೆಲ್ಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ 1ರಿಂದಲೇ ಜಾರಿಗೆ ಬರುವಂತೆ 993 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಭಾರಿ ಏರಿಕೆಯ ನಂತರ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 3,071.50 ರೂಪಾಯಿ ತಲುಪಿದೆ. ಇದಕ್ಕೂ ಮೊದಲು ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2,078.50 ರೂಪಾಯಿ ಇತ್ತು. ಬೆಂಗಳೂರಿನಲ್ಲಿ 991 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ ಒಂದು ಕಮರ್ಷಿಯಲ್ ಸಿಲಿಂಡರ್ ಬೆಲೆ ಬರೋಬ್ಬರಿ 3,152 ರೂ. ಆಗಲಿದೆ.
ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ, ಗೃಹ ಬಳಕೆಯ (14.2 ಕೆಜಿ) ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇದು ಗೃಹಲಕ್ಷ್ಮೀಯರಿಗೆ ತುಸು ನೆಮ್ಮದಿ ತಂದಿದೆ ಎನ್ನಬಹುದು.
ಇನ್ನು ಜಾಗತಿಕ ಇಂಧನ ಬೆಲೆಗಳ ಏರಿಕೆ ಮತ್ತು ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ದರ ಪರಿಷ್ಕರಣೆ ಮಾಡಲಾಗಿದೆ.
ಈ ಏರಿಕೆಯು ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆಯನ್ನು ಉಂಟುಮಾಡಲಿದ್ದು ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.
Related










