CrimeNEWSರಾಜಕೀಯ

ಸಚಿವ ಸಿಟಿ ರವಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್‌ ವಿಶೇಷ ಕೋರ್ಟ್‌ಗೆ ವಾಪಸ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಕೇಸನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ಉಲ್ಲೇಖಿಸಿರುವುದನ್ನು ಬದಿಗೊತ್ತಿ ರಾಜ್ಯ ಹೈಕೋರ್ಟ್ ಕೇಸನ್ನು ವಿಶೇಷ ಕೋರ್ಟ್‌ಗೆ ಹಿಂತಿರುಗಿಸಿದೆ.

ಅಲ್ಲದೆ, ಸಚಿವ ಸಿ.ಟಿ. ರವಿ ವಿರುದ್ಧ ದೂರು ಸಲ್ಲಿಸಿರುವ ಎ ಸಿ ಕುಮಾರ್ ಎಂಬುವವರು ತಮ್ಮ ಆರೋಪಕ್ಕೆ ಸಂಬಂಧಪಟ್ಟಂತೆ ಅಫಿಡವಿಟ್ಟು ಸಲ್ಲಿಕೆಗೆ ಮತ್ತೊಂದು ಅವಕಾಶವನ್ನು ಹೈಕೋರ್ಟ್ ನೀಡಿದೆ. ರವಿ ಅವರ ಬಲ್ಲ ಆದಾಯದ ಮೂಲ 49 ಲಕ್ಷ ರೂಪಾಯಿ. ಆದರೆ ಅವರ ಆಸ್ತಿ ಗಳಿಕೆ 3.18 ಕೋಟಿಯಷ್ಟಾಗಿದೆ, ಇಷ್ಟೊಂದು ಗಳಿಕೆ ಹೊಂದಲು ಹೇಗೆ ಸಾಧ್ಯ ಎಂದು ಕುಮಾರ್ ಪ್ರಶ್ನಿಸಿದ್ದರು.

ಅಲ್ಲದೆ, ಚಿಕ್ಕಮಗಳೂರು ನಿವಾಸಿಯಾಗಿರುವ ಎ ಸಿ ಕುಮಾರ್ ಅವರು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದೂರು ನೀಡಿರುವುದರಿಂದ ಎಸಿಬಿ ಮುಂದೆ ಸಹ ದೂರು ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡಿದೆ. ಕುಮಾರ್ ಅವರು ಸಿ.ಟಿ. ರವಿ ವಿರುದ್ಧ 2012ರಲ್ಲಿ ಖಾಸಗಿ ದೂರೊಂದನ್ನು ನೀಡಿ 2004 ರಿಂದ 2010ರ ಮಧ್ಯೆ ಬಲ್ಲ ಮೂಲಗಳ ಆದಾಯದ ಹೊರತಾಗಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆಪಾದಿಸಿದ್ದರು.

2015ರಲ್ಲಿ ಸುಪ್ರೀಂ ಕೋರ್ಟ್, ದೂರು ನೀಡಿದವರು ಕಡ್ಡಾಯವಾಗಿ ದೂರಿಗೆ ಸಾಕ್ಷಿಯಾಗಿ ಅಫಿಡವಿಟ್ಟು ಸಲ್ಲಿಸಬೇಕೆಂದು ಆದೇಶ ಹೊರಡಿಸಿತ್ತು. ದೂರು ನೀಡಿದವರು ಅದಕ್ಕೆ ಪೂರಕವಾಗಿ ಅಫಿಡವಿಟ್ಟು ಸಲ್ಲಿಸಿಲ್ಲ, ಹಾಗಾಗಿ ಇಡೀ ಪ್ರಕರಣವನ್ನು ಕೈಬಿಡಬೇಕೆಂದು ಸಿ ಟಿ ರವಿ ಹೈಕೋರ್ಟ್ ಮೊರೆ ಹೋಗಿದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...