NEWSನಮ್ಮಜಿಲ್ಲೆಸಂಸ್ಕೃತಿ

ಕುಟುಂಬ ಸಮೇತರಾಗಿ ಆಗಮಿಸಿ ಶಕ್ತಿದೇವತೆ ಹಾಸನಾಂಬೆ ದರ್ಶನ ಪಡೆದ ಮಾಜಿ ಪ್ರಧಾನಿ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಹಾಸನಾಂಬೆ ಉತ್ಸವ ಮೊನ್ನೆಯಿಂದ ಆರಂಭವಾಗಿದ್ದು, ಜೆಡಿಎಸ್‌ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡ ಮತ್ತು ಅವರ ಕುಟುಂಬದವರು ಶಕ್ತಿದೇವಿ ಹಾಸನಾಂಬೆಯ ದರ್ಶನ ಪಡೆದರು.

ಶಾಸಕ ಎಚ್‌.ಡಿ.ರೇವಣ್ಣ, ಪತ್ನಿ ಹಾಗೂ ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸಂಜೆ ವೇಳೆಗೆ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ, ಪತ್ನಿ ಚನ್ನಮ್ಮ, ಪುತ್ರಿಯರಾದ ಅನಸೂಯ, ಶೈಲಜಾ ಹಾಗೂ ಮೊಮಗ ಸೂರಜ್ ರೇವಣ್ಣ ದೇವಿ ದರ್ಶನ ಪಡೆದರು.

ದೇವಿ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೊಡ್ಡಗೌಡರು, ʻಪ್ರತಿ ವರ್ಷದಂತೆ ಹಾಸನಾಂಬೆ ದೇವಿಗೆ ಕುಟುಂಬ ಸಮೇತರಾಗಿ ಬಂದು ಪ್ರಾರ್ಥನೆ ಸಲ್ಲಿಸಿದ್ದೇವೆ. ಈ ಬಾರಿ ಕೊರೊನಾ ಇರುವುದರಿಂದ ಸಂದರ್ಭ ಕ್ಲಿಷ್ಟಕರವಾಗಿದೆ. ಕಳೆದ ವರ್ಷ ಲಕ್ಷಾಂತರ ಜನರು ದೇವಿಯ ದರ್ಶನ ಪಡೆದಿದ್ದರು. ವರ್ಷ ಪೂರ್ತಿ ಗರ್ಭಗುಡಿಯಲ್ಲಿ ದೀಪ ಉರಿಯುತ್ತಿರುತ್ತದೆ ಎಂಬ ಪ್ರತೀತಿ ಇದೆ. ಎಲ್ಲರಿಗೂ ಹಾಸನಾಂಬೆ ಆರೋಗ್ಯ ನೀಡಲಿ ಎಂದು ಬೇಡಿಕೊಂಡಿದ್ದೇನೆ’ ಎಂದು ಹೇಳಿದರು.

ಇದೇ ವೇಳೆ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು ದೇವೇಗೌಡ ದಂಪತಿಯನ್ನು ಸನ್ಮಾನಿಸಿದರು. ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಶ್ರೀನಿವಾಸ್‌ಗೌಡ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ನಂದಿನಿ, ಉಪವಿಭಾಗಾಧಿಕಾರಿ ಬಿ.ಎ.ಜಗದೀಶ್ ಇದ್ದರು.

Leave a Reply

error: Content is protected !!
LATEST
ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ...