Vijayapatha – ವಿಜಯಪಥ
Friday, November 1, 2024
NEWSನಮ್ಮಜಿಲ್ಲೆ

ಓದಲು ಇಷ್ಟವಿಲ್ಲದ ಬಾಲಕ ಹಣಕ್ಕಾಗಿ ಅಪಹರಣ ನಾಟಕವಾಡಿ ಪಾಲಕರ ಬೆಸ್ತು ಬೀಳಿಸಿದ !

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಕನಕಪುರ: ಓದಲು ಇಷ್ಟವಿಲ್ಲ ಬಾಲಕನೊಬ್ಬ ತನ್ನ ಪಾಲಕರನ್ನು ಭಯಗೊಳಿಸಲು ತನ್ನನ್ನು ಅಪಹರಣಮಾಡಿದ್ದಾರೆ ಎಂಬ ಸಂದೇಶವನ್ನು ಪಕ್ಕದ ಮನೆಯವರ ಮೊಬೈಲ್‌ಫೋನ್‌ ಕಳುಹಿಸುವ ಮೂಲಕ ತನ್ನ ಹೆತ್ತವರನ್ನೇ ಬೇಸ್ತು ಬೀಳಿಸಿರುವ ಘಟನೆ ರಾಮನಗರ ಜಿಲ್ಲೆ ಕನಕಪುರದಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ತಮಿಳುನಾಡು ಮೂಲದ ಬಟ್ಟೆ ಅಂಗಡಿ ಮಾಲೀಕ ಮನೋಹರ್ ಎಂಬುವವರ ಪುತ್ರ ಸರ್ವೇಶ್ (16) ಈ ನಾಟಕವಾಡಿ ಪೊಲೀಸರಿಗೂ ಕೆಲಸಕೊಟ್ಟ ಬಾಲಕ.
ಹೌದು..! ಸದಾ ಓದು ಎನ್ನುವ ಪೋಷಕರ ಕಾಟ ತಪ್ಪಿಸಿಕೊಳ್ಳಲು ಹಾಗೂ ಹಣಕ್ಕಾಗಿ ಅಪಹರಣದ ನಾಟಕ ಮಾಡಿದ್ದಾನೆ ಎಂಬುವುದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ವಿವರ: ಕಳೆದ ಶುಕ್ರವಾರ ಸೈಬರ್ ಸೆಂಟರ್ಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ. ರಾತ್ರಿಯಾದರೂ ಮನೆಗೆ ವಾಪಸ್‌ ಬಾರದ ಕಾರಣ ಆತಂಕಗೊಂಡ ಪೋಷಕರು, ಮಗ ಕಾಣೆಯಾಗಿದ್ದಾನೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ನಡುವೆ ಬಾಲಕ ಪಕ್ಕದ ಮನೆಯವರ ಮೊಬೈಲಿಗೆ ತನ್ನನ್ನು ಶೌಚಾಲಯದಲ್ಲಿ ಕೈ-ಕಾಲು ಕಟ್ಟಿ ಹಾಕಿರೋ ಸ್ಥಿತಿಯಲ್ಲಿರುವ ಫೋಟೋವನ್ನು ರವಾನಿಸಿ, 5 ಲಕ್ಷ ರೂಪಾಯಿಗೆ ಅಪಹರಣಕಾರರು ಬೇಡಿಕೆಯಿಟ್ಟಿದ್ದಾರೆ ಎಂದು ಸಂದೇಶ ಕಳುಹಿಸಿದ್ದ. ನಂತರ ಬಾಲಕನ ಫೋಟೋ ವೈರಲ್ ಆಗಿದ್ದರಿಂದ ಜನರು ಆತಂಕಕ್ಕೆ ಒಳಗಾಗಿದ್ದರು. ಪ್ರಕರಣ ಬೆನ್ನತ್ತಿದ ಪೊಲೀಸರು, ಬಾಲಕನನ್ನು ತಿರುಪತಿ ಬಳಿ ಲಾಡ್ಜ್ ನಲ್ಲಿ ಪತ್ತೆ ಹಚ್ಚಿದ್ದು, ಪೋಷಕರನ್ನು ಬೆದರಿಸಲು ಬಾಲಕನೇ ಅಪಹರಣದ ನಾಟಕವಾಡಿರುವುದು ಈ ವೇಳೆ ಪೊಲೀಸರಿಗೆ ಗೊತ್ತಾಗಿದೆ.

ಬಾಲಕ ಪೋಷಕರಿಂದ ಹಣ ಕೀಳಲು ಹಾಗೂ ಓದು ಎಂದು ಒತ್ತಾಯ ಮಾಡುವುದರಿಂದ ತಪ್ಪಿಸಿಕೊಳ್ಳಲು ಸ್ವಯಂ ಅಪಹರಣದ ನಾಟಕ ಸೃಷ್ಟಿಸಿದ್ದಾನೆ ಎಂದು ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಗಿರೀಶ್ ತಿಳಿಸಿದ್ದಾರೆ.

ಬಾಲಕನನ್ನು ತಿರುಪತಿಯಿಂದ ಕರೆತಂದು ಕನಕಪುರ ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದೆ. ಇನ್ನು ಬಾಲಕನಿಗೆ ಅಪಹರಣ ಎಂದು ಬಿಂಬಿಸಲು ಯಾರೆಲ್ಲ ಸಹಾಯ ಮಾಡಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಬಯಲಾಗಬೇಕಿದೆ.

Leave a Reply

error: Content is protected !!
LATEST
KSRTC: ದೀಪಾವಳಿ ಹಬ್ಬದಲ್ಲೂ ಕರ್ತವ್ಯ ನಿರತ ನಾಡಿನ ಸೈನಿಕರಾದ ಸಾರಿಗೆ ನೌಕರರಿಗೆ ಸಲಾಮ್‌! ಬೆಲೆ ಏರಿಕೆ ಬಿಸಿ ನಡುವೆಯೂ ಹಣತೆ, ಹೂವು, ಪಟಾಕಿ, ಹಣ್ಣುಗಳ ವ್ಯಾಪಾರ ವಹಿವಾಟು ಜೋರು ಚನ್ನಪಟ್ಟಣದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಬೃಹತ್ ಸಮಾವೇಶ: ನಿಖಿಲ್ ಗೆಲುವಿಗೆ ಒಗ್ಗಟ್ಟು ಪ್ರದರ್ಶನ ತೂಬಗೆರೆ ಗ್ರಾಮ ಪಂಚಾಯಿತಿಗೆ ಅವಿರೋಧವಾಗಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ - ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವರ್ಷ ಮೂರು ಮರೆಯದ ನೆನಪು ನೂರಾರು: ಸಹೋದರ ಪುನೀತ್‌ ಸ್ಮರಿಸಿದ ರಾಘಣ್ಣ ಕೌಟುಂಬಿಕ ಕಲಹ: ರೈಲಿಗೆ ತಲೆಕೊಟ್ಟು ಜೀವನ ಕೊನೆಗಾಣಿಸಿಕೊಂಡ ಮಹಿಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ: ಈಗಲೇ ಅರ್ಜಿ ಹಾಕಿ ಬಿಬಿಎಂಪಿ: ಅನಧಿಕೃತ ಹೆಚ್ಚುವರಿ ಮಹಡಿಗಳು, ಪಾದಚಾರಿ ಮಾರ್ಗ ಒತ್ತುವರಿ ತೆರವು KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ...