CRIMENEWSದೇಶ-ವಿದೇಶ

ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು

ಡಿಕ್ಕಿಯ ತೀವ್ರತೆ ಹೇಗಿತ್ತು ಎಂದರೆ, ಘಟನೆ ನಡೆದ ಕ್ಷಣಾರ್ಧದಲ್ಲೇ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಬೆಂಕಿಯ ಜ್ವಾಲೆ ವೇಗವಾಗಿ ವ್ಯಾಪಿಸಿದ್ದರಿಂದ ಬಸ್‌ನೊಳಗಿದ್ದ ಪ್ರಯಾಣಿಕರಿಗೆ ಹೊರಬರಲು ಅವಕಾಶವೇ ಸಿಗಲಿಲ್ಲ. ಅಷ್ಟರ ಮಟ್ಟಿಗೆ ಅಪಘಾತ ಸಂಭವಿಸಿದೆ.

ವಿಜಯಪಥ ಸಮಗ್ರ ಸುದ್ದಿ

ಜಕಾರ್ತಾ: ಬಸ್ ಮತ್ತು ಡೀಸೆಲ್ ತುಂಬಿದ್ದ ತೈಲ ಟ್ಯಾಂಕರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬಸ್‌ನಲ್ಲಿದ್ದ 16 ಮಂದಿ ಸಜೀವ ದಹನಗೊಂಡಿರುವ ಘಟನೆ ಇಂಡೋನೇಷ್ಯಾದ ದಕ್ಷಿಣ ಸುಮಾತ್ರಾ ಪ್ರಾಂತ್ಯದಲ್ಲಿ ನಡೆದಿದೆ.

ಈ ಭೀಕರ ರಸ್ತೆ ಅಪಘಾತ ಬುಧವಾರ ಮಧ್ಯಾಹ್ನ ಉತ್ತರ ಮುಸಿ ರವಾಸ್ ಜಿಲ್ಲೆಯ ಟ್ರಾನ್ಸ್-ಸುಮಾತ್ರಾ ಹೆದ್ದಾರಿಯಲ್ಲಿ ನಡೆದಿದೆ. ಸುಮಾರು 20 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್, ಎದುರಿನಿಂದ ಅತೀ ವೇಗವಾಗಿ ಬರುತ್ತಿದ್ದ ಇಂಧನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದಿದೆ ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ ವಾಹನಗಳು: ಡಿಕ್ಕಿಯ ತೀವ್ರತೆ ಹೇಗಿತ್ತು ಎಂದರೆ, ಘಟನೆ ನಡೆದ ಕ್ಷಣಾರ್ಧದಲ್ಲೇ ಎರಡೂ ವಾಹನಗಳು ಬೆಂಕಿಗಾಹುತಿಯಾಗಿವೆ. ಬೆಂಕಿಯ ಜ್ವಾಲೆ ವೇಗವಾಗಿ ವ್ಯಾಪಿಸಿದ್ದರಿಂದ ಬಸ್‌ನೊಳಗಿದ್ದ ಪ್ರಯಾಣಿಕರಿಗೆ ಹೊರಬರಲು ಅವಕಾಶವೇ ಸಿಗಲಿಲ್ಲ. ಅಷ್ಟರ ಮಟ್ಟಿಗೆ ಅಪಘಾತ ಸಂಭವಿಸಿದೆ.

ಇನ್ನು ಘಟನೆಯಲ್ಲಿ ಬಸ್‌ನಲ್ಲಿದ್ದ 14 ಪ್ರಯಾಣಿಕರು ಹಾಗೂ ಟ್ಯಾಂಕರ್ ಲಾರಿಯ ಚಾಲಕ ಮತ್ತು ಸಹಾಯಕ ಸೇರಿ ಒಟ್ಟು 16 ಮಂದಿ ಸಜೀವ ದಹನಗೊಂಡಿದ್ದು, ಮೃತದೇಹಗಳು ಸಂಪೂರ್ಣ ಸುಟ್ಟು ಹೋಗಿರುವುದರಿಂದ ಗುರುತು ಪತ್ತೆಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾಲ್ವರು ಪಾರಾದರೂ ಮೂವರಿ0ಗೆ ಗಂಭೀರ ಗಾಯ: ಅಪಘಾತ ಸಂಭವಿಸಿದ ಕ್ಷಣದಲ್ಲಿ ಬಸ್‌ನಿಂದ ಹೇಗೋ ಹೊರಕ್ಕೆ ಜಿಗಿದ ನಾಲ್ವರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಅವರಲ್ಲಿ ಮೂವರಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಅವರ ಸ್ಥಿತಿ ಸದ್ಯಕ್ಕೆ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟೈರ್ ಸ್ಫೋಟವೇ ಅಪಘಾತಕ್ಕೆ ಕಾರಣ?: ಪ್ರಾಥಮಿಕ ತನಿಖೆಯ ಪ್ರಕಾರ, ಬಸ್‌ನ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆ ಬರುತ್ತಿದ್ದ ಟ್ಯಾಂಕರ್‌ಗೆ ಬಸ್‌ ಡಿಕ್ಕಿ ಹೊಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಇನ್ನು ಡಿಕ್ಕಿಯಾದ ತಕ್ಷಣ ಟ್ಯಾಂಕರ್‌ನಿಂದ ಡೀಸೆಲ್ ಸೋರಿಕೆಯಾಗಿದ್ದು, ಇದರಿಂದ ಭಾರೀ ಬೆಂಕಿ ಕಾಣಿಸಿಕೊಂಡಿದೆ.

ಸ್ಥಳಕ್ಕೆ ಧಾವಿಸಿದ ರಕ್ಷಣಾ ಪಡೆ: ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಅಪಘಾತದ ಬಳಿಕ ಟ್ರಾನ್ಸ್-ಸುಮಾತ್ರಾ ಹೆದ್ದಾರಿಯಲ್ಲಿ ಹಲವು ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

Megha
the authorMegha

Leave a Reply

error: Content is protected !!
Latest news
ಬಸ್–ತೈಲ ಟ್ಯಾಂಕರ್ ನಡುವೆ ಡಿಕ್ಕಿ: 16 ಮಂದಿ ಸಜೀವ ದಹನ, ಕ್ಷಣಾರ್ಧದಲ್ಲಿ ಹೊತ್ತಿ ಉರಿದ ವಾಹನಗಳು KSRTC ಸಂಸ್ಥೆಯ ನೌಕರರ ಬಾಳು ಹಸನು ಮಾಡಲು ಸಂಘಟನೆಗಳ ನಾಯಕರು ಒಗ್ಗಟ್ಟಾಗಿ: ಜೀವನ್ ಮಾರ್ಟಿಸ್ ಮನವಿ ಟನ್‌ ಕಬ್ಬಿಗೆ 4500 ರೂ. ನಿಗದಿಗೊಳಿಸಿ: ಕೇಂದ್ರ ಸರ್ಕಾರಕ್ಕೆ ಅತ್ತಹಳ್ಳಿ ದೇವರಾಜ್ ಆಗ್ರಹ ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ