ಬೆಂಗಳೂರು: ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಕೈಗೊಂಡಿರುವ ಅಗತ್ಯ ಸಿದ್ಧತೆಗಳ ಕುರಿತು ಚರ್ಚಿಸಲು ರಾಜ್ಯ ಚುನಾವಣಾ ಆಯೋಗವು ನ.17ರಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಆಯೋಜಿಸಿದೆ.
ಅಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಬೆಂಗಳೂರು ವಿಭಾಗ, ಕಲ್ಬುರ್ಗಿ ವಿಭಾಗ, ಮಧ್ಯಾಹ್ನ 3 ರಿಂದ ಸಂಜೆ 5.30ರವರೆಗೆ ಬೆಳಗಾವಿ ವಿಭಾಗ, ಮೈಸೂರು ವಿಭಾಗದ ಜಿಲ್ಲಾಧಿಕಾರಿಗಳ ಸಭೆ ಕರೆಯಲಾಗಿದೆ. ಜತೆಗೆ ಜಿಪಂ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೂ ಪಾಲ್ಗೊಳ್ಳುವಂತೆ ಸೂಚನೆ ನೀಡಿದೆ.