NEWSನಮ್ಮರಾಜ್ಯರಾಜಕೀಯ

ನಮ್ಮದು ಜಾತಿದಲ್ಲ ಕಾಯಕದ ರಾಜಕಾರಣ: ನ್ಯೂಡೆಲ್ಲಿ ಡಿಸಿಎಂ ಮನೀಷ್ ಸಿಸೋಡಿಯಾ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಮ್ ಆದ್ಮಿ ಪಕ್ಷ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲಿದ್ದು ನಾವು ಜಾತಿ ಆಧಾರದ ಮೇಲೆ ರಾಜಕಾರಣ ಮಾಡುವುದಿಲ್ಲ ಕಾಯಕದ ಮೇಲೆ ರಾಜಕಾರಣ ಮಾಡುತ್ತೇವೆ ಎಂದು ನ್ಯೂಡೆಲ್ಲಿ ಉಪ ಮುಖ್ಯಮಂತ್ರಿ, ಶಿಕ್ಷಣ ಸಚಿವ ಮನೀಷ್ ಸಿಸೋಡಿಯಾ ಹೇಳಿದ್ದಾರೆ.

ಶಾಂತಿನಗರದ ಆಮ್ ಆದ್ಮಿ ಕ್ಲಿನಿಕ್ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಸಂವಾದ ನಡೆಸಿದರು. ಬೆಂಗಳೂರಿನಲ್ಲಿ ಅಧಿಕಾರದಲ್ಲಿ ಇಲ್ಲದಿದ್ದರೂ ನಮ್ಮ ಸ್ವಯಂ ಸೇವಕರು ಸೇರಿ ಈ ಉಚಿತ ಕ್ಲಿನಿಕ್ ಪ್ರಾರಂಭಿಸಿದ್ದಾರೆ. ಬಿಬಿಎಂಪಿಯಲ್ಲಿ ಅಧಿಕಾರಕ್ಕೆ ಬಂದರೆ ಪ್ರತಿ ವಾರ್ಡ್ ಗೆ 3 ಕ್ಲಿನಿಕ್ ತೆರೆಯಲಾಗುವುದು ಎಂದು ಭರವಸೆ ನೀಡಿದರು.

ಬಿಬಿಎಂಪಿ ಅಧಿಕಾರ ಅನುಭವಿಸಿದ ಮೂರು ಪಕ್ಷಗಳು ಬೆಂಗಳೂರಿನ ಜನತೆಗೆ ನಯಾಪೈಸೆ ಅನುಕೂಲ ಮಾಡಿಲ್ಲ. ನಾವು ಅಧಿಕಾರಕ್ಕೆ ಬರುವ ವಿಶ್ವಾಸವಿದ್ದು ಬೆಂಗಳೂರಿನ ಚಿತ್ರಣವನ್ನೇ ಬದಲಾಯಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ ಮಾತನಾಡಿ, ಆರೋಗ್ಯ, ಶಿಕ್ಷಣ, ಮೂಲ ಸೌಕರ್ಯಗಳನ್ನು ನೀಡದ ಸರ್ಕಾರ ಜನರಿಗೆ ಬೇಕಿಲ್ಲ. ನಾವು ನಡೆಸಿದ ಸಮೀಕ್ಷೆಯ ಪ್ರಕಾರ ಬೆಂಗಳೂರಿನ ಶೇ.70ರಷ್ಟು ಜನ ನ್ಯೂಡೆಲ್ಲಿ ಮಾದರಿ ಆಮ್ ಆದ್ಮಿ ಸರ್ಕಾರ ಬೆಂಗಳೂರಿಗೆ ಬೇಕು ಎಂದು ಅಭಿಪ್ರಾಯ ತಿಳಿಸಿದ್ದಾರೆ, ಇದು ನಿಜವಾಗಲಿದೆ ಎಂದು ಹೇಳಿದರು.

ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, ಆಮ್ ಆದ್ಮಿ ಕ್ಲಿನಿಕ್ ಉಸ್ತುವಾರಿ ರಾಣಿ ದೇಸಾಯಿ, ರಾಜ್ಯ ಕಾರ್ಯದರ್ಶಿ ಸಂಚಿತ್ ಸಹಾನಿ, ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಉಪಾಧ್ಯಕ್ಷ ಸುರೇಶ್ ರಾಥೋಡ್ ಇದ್ದರು.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ