NEWSದೇಶ-ವಿದೇಶರಾಜಕೀಯ

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್

ವಿಜಯ್‌ ಅವರು ತಮ್ಮ ಸಂಪುಟದಲ್ಲಿ 9 ಮಂದಿ ಶಾಸಕರಿಗೆ ಸಚಿವಸ್ಥಾನ ನೀಡಿದ್ದು, ಟಿವಿಕೆಗೆ ಬೆಂಬಲ ನೀಡಿದ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರಿಗೂ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.

ವಿಜಯಪಥ ಸಮಗ್ರ ಸುದ್ದಿ

ಚೆನ್ನೈ: ತಮಿಳು ನಾಡು ರಾಜಕಾರಣದಲ್ಲಿ ಇಂದು ಹೊಸ ಅಧ್ಯಾಯ ಆರಂಭವಾಗಿದ್ದು, ತಮಿಳಗ ವೆಟ್ರಿ ಕಳಗಂ (TVK) ನಾಯಕ, ಜನಪ್ರಿಯ ನಟ ವಿಜಯ್ (C. ಜೋಸೆಫ್ ವಿಜಯ್) ಅವರು ಇಂದು ಬೆಳಗ್ಗೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ತಮಿಳುನಾಡಿನ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ವಿಜಯ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು. ಇವರ ಜತೆಗೆ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ಅದ್ದೂರಿ ಸಮಾರಂಭದಲ್ಲಿ ವಿಜಯ್ ಅವರು ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದರು.

ಇನ್ನು ವಿಜಯ್‌ ಅವರು ತಮ್ಮ ಸಂಪುಟದಲ್ಲಿ 9 ಮಂದಿ ಶಾಸಕರಿಗೆ ಸಚಿವಸ್ಥಾನ ನೀಡಿದ್ದು, ಟಿವಿಕೆಗೆ ಬೆಂಬಲ ನೀಡಿದ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರಿಗೂ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ.

ವಿಸಿಕೆ (VCK), ಸಿಪಿಐ, ಸಿಪಿಎಂ ಮತ್ತು ಮುಸ್ಲಿಂ ಲೀಗ್ ಪಕ್ಷಗಳು ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿದ್ದರಿಂದ ಈ ಪಕ್ಷಗಳ ಶಾಸಕರು ಸಂಪುಟ ಸೇರುತ್ತಿಲ್ಲ. ಆದರೆ, ಈ ಹಿಂದೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ವಿಸಿಕೆ ಬೇಡಿಕೆ ಇಟ್ಟಿದೆ ಎಂದು ಹೇಳಲಾಗಿತ್ತು. ವಿಜಯ್ ಸರ್ಕಾರದಲ್ಲಿ ಸದ್ಯಕ್ಕೆ ಯಾರಿಗೂ ಡಿಸಿಎಂ ಸ್ಥಾನ ನೀಡಿಲ್ಲ.

ಒಟ್ಟು ಸಂಖ್ಯಾಬಲ ಎಷ್ಟಿದೆ?: ಟಿವಿಕೆ (107), ಕಾಂಗ್ರೆಸ್ (5), ಸಿಪಿಐ (2), ಸಿಪಿಎಂ (2), ವಿಸಿಕೆ (2), ಮುಸ್ಲಿಂ ಲೀಗ್ (2). ಸರ್ಕಾರ ರಚನೆಯ ಬೆನ್ನಲ್ಲೇ ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ಮೇ 13ರವರೆಗೆ (3 ದಿನಗಳು) ಗಡುವು ನೀಡಿದ್ದಾರೆ. 120 ಶಾಸಕರ ಬೆಂಬಲದೊಂದಿಗೆ ವಿಜಯ್ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ.

ಒಟ್ಟಾರೆ. ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ) ಸೇರಿದಂತೆ ವಿವಿಧ ಪಕ್ಷಗಳ ಬೆಂಬಲದೊಂದಿಗೆ 120 ಶಾಸಕರ ಬಲ ಹೊಂದಿರುವ ವಿಜಯ್, 1967ರ ನಂತರ ಡಿಎಂಕೆ ಮತ್ತು ಎಐಎಡಿಎಂಕೆ ಹೊರತಾಗಿ ಅಧಿಕಾರ ಹಿಡಿದ ಮೊದಲ ನಾಯಕ ಎಂಬ ಇತಿಹಾಸ ಬರೆದಿದ್ದಾರೆ. ಈ ಅದ್ದೂರಿ ಸಮಾರಂಭಕ್ಕೆ ಅನೇಕ ಗಣ್ಯಾತಿಗಣ್ಯರು ಸಾಕ್ಷಿಯಾದರು.

Megha
the authorMegha

Leave a Reply

error: Content is protected !!
Latest news
BMTC ಘಟಕ-29ರ ಆವರಣದಲ್ಲೇ ನಡೆದ ಅಪಘಾತ: ಗಾಯಾಳು ಚಾಲಕನಿಗೆ 6 ಸಾವಿರ ಕೊಟ್ಟು ಸುಮ್ಮನಾದ ಅಧಿಕಾರಿಗಳು- ಬಸ್‌ ನಿಲ್ಲಿಸಿ... KSRTC ಪುತ್ತೂರು: ಬಿದ್ದು ಎರಡೂ ಕಾಲುಗಳ ಮುರಿದುಕೊಂಡಿದ್ದ ಚಾಲಕನಿಗೆ 71 ಸಾವಿರ ರೂ. ನೆರವು- ಧೈರ್ಯ ತುಂಬಿದ ಡಿಎಂ KSRTC ಅರಸೀಕೆರೆ: ಚಾಲನಾ ಸಿಬ್ಬಂದಿ ಒಗ್ಗಟ್ಟಿಗೆ ಮಣಿದು ಎಂಡಿಗೆ ನೋಟಿಸ್‌ ಜಾರಿ ಮಾಡಿದ ಕಾರ್ಮಿಕ ಆಯುಕ್ತರು ಅರ್ಹ ದಲಿತರು, ಹಿಂದುಳಿದವರಿಗೆ ಯೋಜನೆ ಸೌಲಭ್ಯ ತಲುಪಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಅನುರಾಧ ತಾಕೀತು ಮಾವು ಬೆಳೆ ಹೆಕ್ಟೇರಿಗೆ 80 ಸಾವಿರ ರೂ. ಸಿಗಲಿದ್ದು ರೈತರು ಬೆಳೆ ವಿಮೆಗೆ ಅರ್ಜಿ ಹಾಕಿ: ಹಿರಿಯ ಸಹಾಯಕ ತೋಟಗಾರಿಕೆ ನಿರ್... ಒಲಿಂಪಿಕ್ಸ್‌ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ. ಭಾರಿ ನಗದು ಬಹುಮಾನ: ಕ್ರೀಡಾಪಟುಗಳ ಬದುಕಿಗೆ ಭರವಸೆ ನೀಡಿದ ಸಿಎಂ BMTC: ಮಹಿಳಾ ಕಂಡಕ್ಟರ್‌ಗಳಿಗೆ ಶೇ.33ರಷ್ಟು ಮುಂಬಡ್ತಿ ಮೀಸಲಾತಿ ಅಸಾಧ್ಯ- ಸಂಸ್ಥೆ ನಿಯಮದಲ್ಲೂ ಇಲ್ಲ ಅವಕಾಶ ಎಂದ ಸಿಪಿಎ... ಶಕ್ತಿಯೋಜನೆಗಾಗಿ ರಾಜಸ್ಥಾನದ ಆಧಾರ್‌ ಕಾರ್ಡ್‌ಗೆ ಬೆಂಗಳೂರು ನಿವಾಸಿ ಎಂಬ ನಕಲಿ ಕಾರ್ಡ್‌ ಸೃಷ್ಟಿಸಿಕೊಂಡು ಮಹಿಳೆ ಓಡಾಟ! BMTC ಘಟಕ 29: ಡಿಪೋ ಆವರಣದಲ್ಲಿ ಎಲೆಕ್ಟ್ರಿಕ್ ಬಸ್ ಡಿಕ್ಕಿ- ಚಾಲಕನಿಗೆ ತೀವ್ರ ಗಾಯ ತಿ.ನರಸೀಪುರ: ಯುವಕನ ಕಿರುಕುಳದಿಂದ ಮದುವೆ ನಿಶ್ಚಯವಾಗಿದ್ದ ಯುವತಿ ಜತೆಗೆ ಅಪ್ಪಅಮ್ಮ ಆತ್ಮಹತ್ಯೆ