CRIMENEWSನಮ್ಮರಾಜ್ಯ

ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ

ಈಗಾಗಲೇ 5 ಲಕ್ಷ ರೂ. ಚೆಕ್ ನೀಡಲಾಗಿದೆ. ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲೇ ಬ್ಯಾಂಕ್‌ ಖಾತೆಗೆ ಹಾಕಲು ಅರಣ್ಯ ಅಧಿಕಾರಿಗಳು ನಿರ್ಧರಿಸಿದ್ದಾರೆ.

ವಿಜಯಪಥ ಸಮಗ್ರ ಸುದ್ದಿ

ಹನೂರು: ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುತ್ತಿದ್ದಾಗ ಚಿರತೆ ದಾಳಿಗೆ ಒಳಗಾಗಿ ಮೃತಪಟ್ಟ ಬೆಂಗಳೂರು ಮೂಲದ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂಪಾಯಿ ಪರಿಹಾರ ಕೊಡುವುದಾಘಿ ಘೋಷಣೆ ಮಾಡಿದೆ.

ನಿನ್ನೆ ಅಂದರೆ, ಭಾನುವಾರ (ಮೇ 10) ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕನ ಎಳೆದುಕೊಂಡು ಹೋಗಿ ಕೊಂದಿತ್ತು. ಈಗ ಅರಣ್ಯ ಇಲಾಖೆ ಬಾಲಕನ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಈಗಾಗಲೇ 5 ಲಕ್ಷ ರೂ. ಚೆಕ್ ನೀಡಲಾಗಿದೆ. ಇನ್ನುಳಿದ ಹಣವನ್ನು ಅಕೌಂಟ್ ಮಾಹಿತಿ ಪಡೆದು ಶೀಘ್ರದಲ್ಲೇ ಬ್ಯಾಂಕ್‌ ಖಾತೆಗೆ ಹಾಕಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಬಾಲಕನ ಕೊಂದ ಚಿರತೆಯ ಚಲನವಲನ ಥರ್ಮಲ್ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೀಗಾಗಿ ಅರಣ್ಯ ಇಲಾಖೆ ಚಿರತೆ ಸೆರೆಗೆ ಮುಂದಾಗಿದ್ದು, ನಾಲ್ಕು ಬೋನ್ ಅಳವಡಿಕೆ ಮಾಡಿದೆ. ಅಲ್ಲದೇ ಸ್ಥಳದಲ್ಲಿ 30ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿ ಬೀಡುಬಿಟ್ಟಿದ್ದಾರೆ. ಥರ್ಮಲ್ ಡ್ರೋನ್ ಟೀಂ ಕೂಡ ರಾತ್ರಿಯಿಡಿ ಚಿರತೆಯ ಮೇಲೆ ನಿಗಾ ವಹಿಸಿದ್ದು, ಇತ್ತ ತಾತ್ಕಾಲಿಕವಾಗಿ ನಾಗಮಲೆಗೆ ಹೋಗಲೂ ಭಕ್ತರಿಗೆ ನಿರ್ಬಂಧ ಹೇರಲಾಗಿದೆ.

ಏನಿದು ಘಟನೆ?: ನಾಗಮಲೆಗೆ ಪಾದಯಾತ್ರೆ ಹೋಗುತ್ತಿದ್ದ ಬೆಂಗಳೂರಿನ ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ನಿವಾಸಿ ಬಾಲಕ ಹರ್ಷಿತ್ ಗೌಡನನ್ನು ಚಿರತೆ ಪೋಷಕರ ಕಣ್ಣೆದುರಲ್ಲೇ ಎಳೆದೊಯ್ದು ಕೊಂದು ಹಾಕಿದ ಘೋರ ಘಟನೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದ ಬಳಿ ನಡೆದಿತ್ತು.

ಭಾನುವಾರ ಬೆಳಗ್ಗೆ ಕುಟುಂಬದ 10 ಸದಸ್ಯರೊಂದಿಗೆ ಹರ್ಷಿತ್ ನಾಗಮಲೆ ಹಾದಿಯಲ್ಲಿ ತೆರಳುತ್ತಿದ್ದಾಗ, ಇಂಡಿಗನತ್ತ ಸಮೀಪ ಚಿರತೆ ದಾಳಿ ಮಾಡಿತ್ತು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿದಾಗ, ಅರಣ್ಯದೊಳಗೆ ಬಾಲಕನ ಶವ ಪತ್ತೆಯಾಗಿತ್ತು.

ಕಾಡಿನೊಳಗೆ ಹೋಗುವಾಗ 200 ರೂ. ಹೆಚ್ಚಿನ ಹಣ ತೆಗೆದುಕೊಂಡು ಒಳಗಡೆ ಬಿಟ್ಟಿದ್ದಾರೆ. ಮಗು ಮೇಲೆ ದಾಳಿಯಾಗಿ ಅರ್ಧ ಗಂಟೆಯಾದರೂ ಯಾವ ಅರಣ್ಯಾಧಿಕಾರಿಯೂ ಬಂದಿರಲಿಲ್ಲ. ನಂತರ ಜನ ಜಗಳ ಮಾಡಿದಾಗ ಮೃತದೇಹ ಹುಡುಕಿದ್ದಾರೆ. ನಮ್ಮ ಮಗುವಿಗಾದಂತೆ ಯಾರಿಗೂ ಆಗಬಾರದು. ಈ ಸಾವಿಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಬಾಲಕನ ಕುಟುಂಬಸ್ಥರು ಆರೋಪಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ ಸಾರಿಗೆ ನೌಕರರಿಗೆ ಬಿಡುಗಡೆಯಾಗಿರುವ 450 ಕೋಟಿ ರೂ.ನಲ್ಲಿ KSRTC ನೌಕರರಿಗೆ ಮೇ 11ರಂದು 11 ತಿಂಗಳ ಹಿಂಬಾಕಿ ಪಾವತಿಗೆ ಕ...