ಪಾಟ್ನಾ: ಬಿಹಾರದ ಮಹಾಘಟಬಂಧನ್ ಶಾಸಕಾಂಗ ಪಕ್ಷದ ನಾಯಕರಾಗಿ ಆರ್‌ಜೆಡಿಯ ತೇಜಸ್ವಿ ಯಾದವ್ ಗುರುವಾರ ಆಯ್ಕೆಯಾಗಿದ್ದಾರೆ.
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಆರ್‌ಜೆಡಿ ರಾಜ್ಯದ ಜನರ ಬೆಂಬಲ ಗಳಿಸಿದೆ ಆದರೆ, ಎನ್‌ಡಿಎ ಹಣ, ತೋಳ್ಬಲ ಮತ್ತು ವಂಚನೆಯ ಮೂಲಕ ಗೆಲುವು ಸಾಧಿಸಿದೆ ಎಂದು ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ತೇಜಸ್ವಿ ಯಾದವ್ ಆರೋಪಿಸಿದರು.
ಇದೇ ವೇಳೆ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಲಾಲು ಪ್ರಸಾದ್ ಯಾದವ್ ಅವರ ಪುತ್ರ, ಚುನಾವಣೆಯಲ್ಲಿ ಜೆಡಿಯು ಮೂರನೇ ಸ್ಥಾನಕ್ಕೆ ತಳಲ್ಪಟ್ಟಿದ್ದು, ಒಂದು ವೇಳೆ ಅವರಿಗೆ ಆತ್ಮಸಾಕ್ಷಿ ಇದ್ದರೆ, ಮುಖ್ಯಮಂತ್ರಿ ಸ್ಥಾನ ತ್ಯಜಿಸಬೇಕು ಎಂದರು.
ಎನ್‌ಡಿಎ ಮಹಾಘಟಬಂಧನ್ ಕ್ಕಿಂತ ಕೇವಲ 12, 270 ಹೆಚ್ಚಿನ ಮತ ಪಡೆದಿದೆ. ಇಷ್ಟು ಕಡಿಮೆ ಮತಗಳಲ್ಲಿ 15 ಹೆಚ್ಚಿನ ಸ್ಥಾನಗಳನ್ನು ಗೆಲಲ್ಲು ಹೇಗೆ ಸಾಧ್ಯ? ಎಂದು ತೇಜಸ್ವಿ ಪ್ರಶ್ನಿಸಿದ್ದಾರೆ.
ಚುನಾವಣಾ ಪ್ರಕ್ರಿಯೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಆರ್‌ಜೆಡಿ ನಾಯಕ, ಕೊನೆಯಲ್ಲಿ ಮಾಡಲಾದ ಎಲ್ಲಾ ಕ್ಷೇತ್ರಗಳ ಅಂಚೆ ಮತಗಳನ್ನು ಮರು ಎಣಿಕೆ ಮಾಡಬೇಕೆಂದು ಒತ್ತಾಯಿಸಿದರು. ಕಡಿಮೆ ಅಂತರದಲ್ಲಿ ನಾವು ಚುನಾವಣೆಯಲ್ಲಿ ಸೋತಿದ್ದೇವೆ. ಅನೇಕ ಕ್ಷೇತ್ರಗಳಲ್ಲಿ 900ಕ್ಕೂ ಹೆಚ್ಚು ಅಂಚೆ ಮತಗಳನ್ನು ಅಮಾನ್ಯ ಮಾಡಲಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದರು.