NEWSನಮ್ಮರಾಜ್ಯಸಂಸ್ಕೃತಿ

ಹಿರಿಯ ಪತ್ರಕರ್ತ ರವಿ ಬೆಳೆಗೆರೆ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬರಹಗಳ ಮೂಲಕವೇ ಬೆರಗು ಮೂಡಿಸಿ ಆ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಅಕ್ಷರ ಮಾಂತ್ರಿಕ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ನ ಸ್ಥಾಪಕ ರವಿ ಬೆಳೆಗೆರೆ (62) ಇಂದು  ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತಡರಾತ್ರಿ ಹೃದಯಾಘಾತಕ್ಕೆ ಒಳಗಾಗಿದ್ದು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇಂದು ಅವರ ಪ್ರಾರ್ಥಿವ ಶರೀರವನ್ನು ಅವರು ಸ್ಥಾಪಿಸಿರುವ ಪ್ರಾರ್ಥನಾ ಶಾಲೆಯ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮೃತರು ಪತ್ನಿಯರಾದ ಲಲಿತಾ, ಯಶೋಮತಿ, ಮಕ್ಕಳಾದ ಚೇತನ, ಭಾವನಾ, ಕರ್ಣ ಹಾಗೂ ಅಪಾರ ಬಂಧು ಬಳಗ ಅಭಿಮಾನಿಗಳನ್ನು ಅಗಲಿದ್ದಾರೆ.1995 ಸೆಪ್ಟೆಂಬರ್ 25ರಂದು ಹಾಯ್ ಬೆಂಗಳೂರು ಪತ್ರಿಕೆಯನ್ನು ಆರಂಭಿಸಿದ ಅವರು ತನಿಖಾ ಪತ್ರಿಕೋದ್ಯಮದ ಮೂಲಕ ಭಾರಿ ಸಂಚಲನವನ್ನೇ ಮೂಡಿಸಿದ್ದರು. ಬಳ್ಳಾರಿಯಿಂದ 400 ರೂ. ತೆಗೆದುಕೊಂಡು ಬೆಂಗಳೂರಿಗೆ ಬಂದಿದ್ದ ಇವರು ಬರವಣಿಗೆ ಮೂಲಕ ಬದುಕು ಕಟ್ಟಿಕೊಂಡಿದ್ದವರು. ಪ್ರಾರ್ಥನಾ ಎಂಬ ಶಿಕ್ಷಣ ಸಂಸ್ಥೆಯನ್ನು ಕಟ್ಟಿದ್ದಾರೆ.

1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಪತ್ರಿಕೋದ್ಯಮ ವೃತ್ತಿ ಪ್ರಾರಂಭಿಸಿದ್ದ ಅವರು, ಕನ್ನಡಪ್ರಭ, ಸಂಯುಕ್ತ ಕರ್ನಾಟಕ ಸೇರಿ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ರವಿ ಬೆಳೆಗೆರೆ ಅವರ ಬಾಟಮ್ ಐಟಮ್, ಖಾಸ್ ಬಾತ್ ಅಂಕಗಳು ಅತ್ಯಂತ ಜನಪ್ರಿಯ. ಹಿಮಾಗ್ನಿ, ನೀನಾ ಪಾಕಿಸ್ತಾನ? ಡಿ ಕಂಪನಿ, ದಂಗೆಯ ದಿನಗಳು ಸೇರಿ ಅನೇಕ ಜನಪ್ರಿಯ ಕೃತಿಗಳನ್ನು ರಚಿಸಿದ್ದರು.

ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ್ದ ರವಿ ಬೆಳೆಗೆರೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪುರಸ್ಕಾರಗಳು ಸಂದಿವೆ.

Leave a Reply

error: Content is protected !!
LATEST
ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ...