ಬೆಂಗಳೂರು: ಮಾಜಿ ಮತ್ತು ಹಾಲಿ ಮುಖ್ಯಮಂತ್ರಿಗಳ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಹೌದು ನಿನ್ನೆ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಸುಮಾರು 15 ನಿಮಿಷಗಳು ಚರ್ಚೆ ನಡೆಸಿದ್ದಾರೆ. ಇದು ರಾಜಕೀಯ ನಾಯಕರ ನಡುವೆ ಗುಸುಗುಸಿಗೆ ಕಾರಣವಾಗಿದೆ.
ಸೆಪ್ಟೆಂಬರ್ನಲ್ಲಿ ನಡೆದ ಅಧಿವೇಶನದ ಸಂದರ್ಭದಲ್ಲೇ ಸಿಎಂ ಬಿಎಸ್ವೈ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಉಭಯರ ನಡುವೆ ಮಾತುಕತೆ ನಡೆದಿತ್ತು. ಅಧಿವೇಶನ ನಡೆಯುವಾಗ ವಿಧಾನಸೌಧದ ಸಿಎಂ ಕೊಠಡಿಯಲ್ಲೂ ಇಬ್ಬರು ನಾಯಕರು ಮುಖಾಮುಖಿಯಾಗಿದ್ದರು.
ಉಪಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಈ ಇಬ್ಬರು ನಾಯಕರ ಮುಖಾಮುಖಿಯಾಗಿದ್ದು, ಜತೆಗೆ ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಜತೆಗಿದ್ದರು.