ಬನ್ನೂರು: ಪತಿಯೇ ತನ್ನ ಪತ್ನಿಯನ್ನು ಕೊಂದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿರುವ ಘಟನೆ ಹೋಬಳಿಯ ದೊಡ್ಡಮುಲಗೂಡು ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ದೊಡ್ಡಮುಲಗೂಡು ಗ್ರಾಮದ ಶಾಂತಮ್ಮ (22) ಹತ್ಯೆಯಾದ ಮಹಿಳೆ. ಕೊಲೆ ಆರೋಪಿ ರಮೇಶ (30) ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದಾನೆ.
ಕೊಲೆ ಮಾಡಿ ಸೀಮೆಎಣ್ಣೆ ಸುರಿದು ಮೃತದೇಹವನ್ನು ಸುಟ್ಟುಹಾಕಿದ್ದಾನೆ. ದೊಡ್ಡಮುಲಗೂಡು ಗ್ರಾಮದ ಗ್ರಾಮ ಪಂಚಾಯ್ತಿ ಸದಸ್ಯನಾಗಿರುವ ರಮೇಶ್, ಹೆಂಡ್ತಿಯನ್ನು ಕೊಲೆ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದಾನೆ.
ಎರಡು ವರ್ಷ ಹಿಂದಷ್ಟೇ ವಿವಾಹವಾಗಿದ್ದ ದಂಪತಿ ನಡುವೆ ಯಾವ ಕಾರಣಕ್ಕೆ ಗಲಾಟೆ ನಡೆಯಿತು ಎಂಬುವುದು ಇನ್ನು ತಿಳಿದು ಬಂದಿಲ್ಲ. ವಿಷಯ ತಿಳಿದ ಬನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ದೂರು ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.