NEWSರಾಜಕೀಯ

ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ ಕೂಡಲೇ ಸ್ಥಾಪಿಸಿ: ಸಿಎಂಗೆ ಮನವಿ ಮಾಡಿದ ಡಿಸಿಎಂ ಸವದಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚನೆ ಮಾಡಲು ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದ್ದು, ಸರ್ಕಾರದ ಈ ನಿರ್ಧಾರದ ವಿರುದ್ಧ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ. ಈ ಹೊತ್ತಿನಲ್ಲೇ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೋಮವಾರ ಮುಖ್ಯಮಂತ್ರಿಗಳ ಬಳಿ ಹೊಸ ಬೇಡಿಕೆಯೊಂದನ್ನು ಇಟ್ಟಿದ್ದಾರೆ.

ಈ ಬೇಡಿಕೆ ಮತ್ತೊಂದು ಸುತ್ತಿನ ರಾಜಕೀಯ ಚರ್ಚೆಗೆ ಅವಕಾಶ ಮಾಡಿಕೊಟ್ಟಿದೆ. ಜತೆಗೆ ರಾಜ್ಯದಲ್ಲಿ ಅಣ್ಣ ತಮ್ಮ ಬಂಧುಗಳಂತೆ ಇರುವವರ ಮನಸ್ಸುಗಳನ್ನು ಕದಡುವ ಇಂಥ ಪ್ರಯತ್ನಕ್ಕೆ ಈಗಾಗಲೇ ಹಲವರು ಪರವಿರೋಧ ಸೊಲ್ಲೆತ್ತಿದ್ದಾರೆ.

ಅದೇನಂಪ್ಪ ಅಂದರೆ ಲಕ್ಷ್ಮಣ ಸವದಿ ಫೇಸ್ ಬುಕ್‌ನಲ್ಲಿ, ‘ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತರ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಕೂಡಲೇ ಸ್ಥಾಪಿಸಬೇಕೆಂದು’ ಮುಖ್ಯಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಈ ರೀತಿಯ ಬೇಡಿಕೆ ಇಟ್ಟಿದ್ದು ಈಗ ರಾಜಕೀಯ ಮತ್ತು ಧರ್ಮ ಮತ್ತು ವಿವಿಧ ಜಾತಿಗಳ ಸಮುದಾಯಗಳ ನಡುವೆ ತೀರ್ವ ಚರ್ಚೆಯಾಗುತ್ತಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಸಂಸದರಾಗಿದ್ದ ಬಿಜೆಪಿ ನಾಯಕ ಸುರೇಶ್ ಅಂಗಡಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದರಿಂದ ಉಪ ಚುನಾವಣೆ ಎದುರಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತಿದೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಈಗ ಲಿಂಗಾಯತ ಸಮುದಾಯದವರು ಸಹ ಪ್ರಾಧಿಕಾರ/ನಿಮಮ ರಚನೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚನೆ ಮಾಡಲು ಸರ್ಕಾರ ತೀರ್ಮಾನ ಮಾಡಿದಾಗಲೇ ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿ/ ನಿಗಮವನ್ನು ಸ್ಥಾಪನೆ ಮಾಡಬೇಕು ಎಂಬ ಚರ್ಚೆಗಳು ಆರಂಭವಾಗಿದ್ದವು. ಈಗ ಲಕ್ಷ್ಮಣ ಸವದಿ ಅವರೇ ನಿಗಮವನ್ನು ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

Leave a Reply

error: Content is protected !!
LATEST
ಆಟೋಟದಲ್ಲಿ ಕೂಟದ ಕಟ್ಟಾಳುಗಳು ಬ್ಯುಸಿ: ನೌಕರರು ನಂಬಿ 4ವರ್ಷ ಕಳೆದರೂ ಈಡೇರೇಯಿಲ್ಲ ಬೇಡಿಕೆ - ದಿಕ್ಕು ತಪ್ಪುತ್ತಿದೆಯೇ ... BMTC ಬಸ್‌-ಟ್ರಕ್‌-ಇನೋವಾ ಕಾರು ನಡುವೆ ಸರಣಿ ಅಪಘಾತ: ಇಬ್ಬರು ಮೃತ, ಬಸ್‌ ಚಾಲಕನ ಸ್ಥಿತಿ ಗಂಭೀರ KSRTC: ಕೂಟದ ಅಜೆಂಡ ದಿಕ್ಕು ತಪ್ಪುತ್ತಿದೆಯೇ - ಸರಿ ಸಮಾನ ವೇತನದ ಪಾಡೇನು? 8ಕಿಮೀ BMTC ಬಸ್‌ ಹಿಂಬಾಲಿಸಿಕೊಂಡು ಬಂದು ಚಾಲಕನ ಮೇಲೆ ಹಲ್ಲೆಮಾಡಿ ಪೊಲೀಸರ ಅತಿಥಿಯಾದ ಬೈಕ್‌ ಸವಾರ ಸರಿ ಸಮಾನ ವೇತನಕ್ಕೆ ಅಡ್ಡಗಾಲು ಹಾಕುವುದನ್ನು ಈಗಲಾದರೂ ಬಿಡಿ- ಸಾರಿಗೆ ಅಧಿಕಾರಿಗಳು-ನೌಕರರ ಆಗ್ರಹ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗಹಾಕಿ ವಸೂಲಿ ಮಾಡಿ: ತುಷಾರ್ ಗಿರಿನಾಥ್ ಅಂಗನವಾಡಿ ನೌಕರರ ಸರ್ಕಾರಿ ನೌಕರರಾಗಿ ಪರಿಗಣಿಸಿ: ಹೈಕೋರ್ಟ್ ತೀರ್ಪಿನಿಂದ ಕರ್ನಾಟಕದ ಅಂಗನವಾಡಿ ನೌಕರರಿಗೂ ಬಲ ವೀರವನಿತೆ ಒನಕೆ ಓಬವ್ವ ಜಯಂತಿ: ಮಹಿಳೆಯರು ಶೌರ್ಯ, ಧೈರ್ಯ ಬೆಳೆಸಿಕೊಳ್ಳಿ-ಸಚಿವ ಮುನಿಯಪ್ಪ ಮೈಸೂರಿನಲ್ಲಿ ಸಚಿವರಿಗೆ ಕಪಾಳ ಮೋಕ್ಷ: ಎಚ್‌ಡಿಕೆ ಆರೋಪ ಸುಳ್ಳು ಎಂದ ಡಿಸಿಎಂ ಶಿವಕುಮಾರ್‌ ಮುಡಾ ಪ್ರಕರಣದ ಹೈಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಸಚಿವ ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಾಪಾಲರ ಸೂಚನ...