NEWSಶಿಕ್ಷಣ-

ಗೊಂದಲದ ನಡುವೆಯೇ 8ತಿಂಗಳ ಬಳಿಕ ಕಾಲೇಜು ತರಗತಿ ಆರಂಭ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೊರೊನಾ‌ ಸಂದಿಗ್ಧತೆ ಮಧ್ಯೆ ಇಂದಿನಿಂದ ಕಾಲೇಜುಗಳು ಆರಂಭವಾದ್ದು, ಕೆಲವು ಖಾಸಗಿ ಕಾಲೇಜುಗಳು ವಿದ್ಯಾರ್ಥಿಗಳಿಗೆ ತಮ್ಮ ಸ್ವಂತ ಹಣದಿಂದ ಕೋವಿಡ್‌ ಟೆಸ್ಟ್‌ ಮಾಡಿಸಿಕೊಂಡು ಬರಬೇಕು ಎಂದು ಹೇಳುತ್ತಿರುವುದಕ್ಕೆ ಅಸಮಾಧಾನ ವ್ಯಕ್ತವಾಗುತ್ತಿದೆ.

ಈ ನಡುವೆ ಕೋವಿಡ್ ಕೇಸ್ ಕಡಿಮೆಯಾಗುತ್ತಿರುವ ಈ ಹೊತ್ತಿನಲ್ಲಿ ಈಗಾಗಲೇ ಆಡಳಿತ ಮಂಡಳಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡು ಕಾಲೇಜು ತೆರೆದಿದೆ. ಎಂಟು ತಿಂಗಳ ಬಳಿಕ ತೆರೆದಿರುವ ಕಾಲೇಜಿಗೆ ವಿದ್ಯಾರ್ಥಿಗಳು ಹೆಚ್ಚಾಗಿ ಬಾರದಿದ್ದರೂ ನಾಳೆ ಬರುತ್ತಾರೆ ಎಂಬ ವಿಶ್ವಾಸದಲ್ಲಿ ಸರ್ಕಾರವಿದೆ.

ಇನ್ನು ಕೊರೊನಾ ವ್ಯಾಕ್ಸಿನ್ ಸಿಕ್ಕಿಲ್ಲ. ಆದರೂ ಕೊರೊನಾ ಕಾಲದಲ್ಲಿ ಕಾಲೇಜು ತೆರೆಯಲು ಯುಜಿಸಿ ಸೂಚಿಸಿದ‌ ಮಾರ್ಗಸೂಚಿಗಳನ್ನು ಪಾಲಿಸುತ್ತ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಕಾಲೇಜು ಆರಂಭವಾಗಿವೆ. ಪ್ರತೀ ಬೇಂಚ್ ನಡುವೆ 6 ಅಡಿ ಅಂತರದಲ್ಲಿ ಮಾರ್ಕ್ ಗಳನ್ನು ಮಾಡಲಾಗಿದೆ. ಕಾಲೇಜು ಆವರಣ, ಕ್ಲಾಸ್ ರೂಂಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಈಗಾಗಲೇ ಕಾಲೇಜಿನ‌ ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಕೂಡ ಆಗಿದ್ದು, ಕೆಲವರಿಗೆ ಮಾಡಲಾಗುತ್ತಿದೆ.

ಕೊರೊನಾ ಮಾರ್ಗಸೂಚಿ ಅನ್ವಯ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿಗೆ ಹಾಜರಾದ ವಿದ್ಯಾರ್ಥಿಗಳಿಗೆ ಬಿಬಿಎಂಪಿ ಸಿಬ್ಬಂದಿ ಕೋವಿಡ್ ಟೆಸ್ಟ್ ಮಾಡಿದರು. ನಾಗರಬಾವಿಯ ಆಕ್ಸಫರ್ಡ್ ಕಾಲೇಜಿನಲ್ಲಿ ಅಂತಿಮ‌ ಸಿದ್ಧತೆ ಮಾಡಿಕೊಳ್ಳುತ್ತಿದ್ದರು‌. ಕಾಲೇಜು ಆವರಣದಲ್ಲಿ ಸಾಮಾಜಿಕ ಅಂತರದ ಗುರುತು ಮಾಡಿ, ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್, ಟೆಂಪರೇಚರ್ ಚೆಕ್ ಮಾಡುವ ವ್ಯವಸ್ಥೆ ಮಾಡಲಾಯಿತು. ತರಗತಿಗಳಿಗೆ ಪ್ರತಿದಿನ ಫ್ಯುಮಿಗೇಷನ್, ವಿದ್ಯಾರ್ಥಿ ಸಂಖ್ಯೆಗನುಗುಣವಾಗಿ ಬೆಳಗ್ಗೆ, ಮಧ್ಯಾಹ್ನ ಪ್ರತ್ಯೇಕ ಸೆಮಿಸ್ಟರ್ ತರಗತಿಗಳ ಆಯೋಜನೆ ಮಾಡಿದೆ.

ಕಾಲೇಜು ಆರಂಭಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ

  • ಕಾಲೇಜು ಪ್ರಾರಂಭಕ್ಕೆ ‌3 ದಿನ‌ ಮುಂಚೆ ಕೋವಿಡ್ ಟೆಸ್ಟ್
  • ಮಾಸ್ಕ್, ಸ್ಯಾನಿಟೈಸರ್ ಹಾಗೂ ದೈಹಿಕ ಅಂತರ ಕಡ್ಡಾಯ
  • ಸಾಮಾಜಿಕ ಅಂತರ 6 ಅಡಿಯಷ್ಟು ಪಾಲನೆ‌ ಮಾಡಬೇಕು
  • ಶುಚಿತ್ವ,‌ ಶುದ್ದ ಕುಡಿಯುವ ನೀರು ಕಡ್ಡಾಯ
  • ಕಾಲೇಜು ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು
  • ಖಾಸಗಿ ವಾಹನಗಳು, ಕಾಲೇಜು ಬಸ್ ಗಳನ್ನು ಸತತವಾಗಿ ಸ್ಯಾನಿಟೈಸ್ ಮಾಡಬೇಕು
  • ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಗಮನ ಕೊಡೋಕೆ ಕಡ್ಡಾಯ ಆರೋಗ್ಯ ಸಮಿತಿ ರಚನೆ ಮಾಡಬೇಕು
  • ಕಾಲೇಜು ಆವರಣರಲ್ಲಿ ಉಗುಳುವುದನ್ನ ಕಡ್ಡಾಯವಾಗಿ ನಿಷೇಧ ಮಾಡಲಾಗಿದೆ
  • ವಿದ್ಯಾರ್ಥಿಗಳು ಕಡ್ಡಾಯವಾಗಿ ಆರೋಗ್ಯ ಸೇತು ಆಪ್ ಇನ್ ಸ್ಟಾಲ್ ಮಾಡಿಕೊಂಡಿರಬೇಕು
  • ಹೊರ ರಾಜ್ಯಗಳಿಂದ ಬರುವ ವಿದ್ಯಾರ್ಥಿ, ಅಧ್ಯಾಪಕರು 14 ದಿನಗಳ ಕಾಲ ಕ್ವಾರಂಟೈನ್ ಇರಬೇಕು

ವಸತಿನಿಲಯಗಳಲ್ಲೂ  ಕೋವಿಡ್‌ ಮಾರ್ಗಸೂಚಿ ಅಳವಡಿಕೆ 

  • ಕಾಲೇಜುಗಳು ಆರಂಭದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಸತಿನಿಲಯಗಳು ಸಹ ಕೋವಿಡ್‌ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡಿವೆ.
  • ಬೆಂಗಳೂರು ವಿವಿ ಹಾಸ್ಟೆಲ್‌ಗಳನ್ನು ಶುಚಿಗೊಳಿಸಿದ್ದು, ಜ್ಞಾನಭಾರತಿ ಆವರಣದ ಬಿಸಿಎಂ ಹಾಸ್ಟೆಲ್ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಮೊದಲು ಆರು ವಿದ್ಯಾರ್ಥಿಗಳು ಒಂದು ಕೊಠಡಿಯಲ್ಲಿ ಉಳಿದುಕೊಳ್ಳುತ್ತಿದ್ದರು. ಇದೀಗ ಮೂವರು ಒಂದು ಕೊಠಡಿಯಲ್ಲಿ ಉಳಿದುಕೊಳ್ಳಲು ಅವಕಾಶ ನೀಡಲಾಗಿದೆ.
  • ಊಟದ‌ ಕೋಣೆಗೆ ವಿದ್ಯಾರ್ಥಿಗಳಿಗೆ ಪ್ರವೇಶವಿಲ್ಲ. ಊಟ ಬಡಿಸಿಕೊಂಡು ತಮ್ಮ ಕೊಠಡಿಯಲ್ಲಿ ಊಟ ಮಾಡಬೇಕು‌
  • ಹಾಸ್ಟೆಲ್‌ ಹೊರಗೆ ಗುಂಪಾಗಿ ವಿದ್ಯಾರ್ಥಿಗಳು ಸೇರುವಂತಿಲ್ಲ. ಕೊರೊನಾ ‌ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಕಾಲೇಜು ಆಡಳಿತ ಮಂಡಳಿ ಪಾಲನೆ ಮಾಡದೇ ಹೋದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ಸೂಚನೆ ನೀಡಿದ್ದಾರೆ‌.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ