NEWSರಾಜಕೀಯ

ಪಕ್ಷಾತೀತವಾಗಿ ನಾಡು, ಗಡಿ ಉಳಿಸಲು ಬದ್ಧ: ಸಂಸದ ಪ್ರಜ್ವಲ್ ರೇವಣ್ಣ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಪಕ್ಷಾತೀತವಾಗಿ ಕನ್ನಡದ ನಾಡು ಗಡಿ ಉಳಿಸಲು ನಾನು ಬದ್ಧವಾಗಿದ್ದೇನೆ. ನಮ್ಮ ನಾಡು ಭಾಷೆ ವಿಚಾರದಲ್ಲಿ ನಾನು ಯಾವಾಗಲೂ ಹೋರಾಡಲು ಸಿದ್ಧ. ಸರ್ಕಾರದ ಜತೆಯಿದ್ದು ನಾನು ಹೋರಾಟ ಮಾಡುತ್ತೇನೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಸವ ಕಲ್ಯಾಣ ಉಪ ಚುನಾವಣೆ ಮುಂದಿಟ್ಟುಕೊಂಡು ಈ ನಿಗಮ ಮಾಡಿದ್ದಾರೆ. ಹಣವಿಡದೇ ಕೇವಲ ನಾಮ್‌ ಕೆ ವಾಸ್ತೆ ನಿಗಮ ಮಾಡಿದ್ದಾರೆ. ಈ ಹಿಂದೆ ಶಿರಾ ಉಪ ಚುನಾವಣೆ ಸಂದರ್ಭದಲ್ಲಿ ಕಾಡುಗೊಲ್ಲರ ನಿಗಮ ಮಾಡಿದ್ದರು. ಈವರೆಗೂ ಈ ನಿಗಮಗಳಿಗೆ ಹಣ ಬಿಡುಗಡೆಯಾಗಿಲ್ಲ ಎಂದು ಸರ್ಕಾರದ ನಡೆಗೆ ಕಿಡಿಕಾರಿದರು.

ಇದರ ಜತೆಗೆ ಕಾರವಾರ ಬೆಳಗಾವಿ ಸೇರಿ ಕೆಲ ಕರ್ನಾಟಕದ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಮಹಾ ಸರ್ಕಾರದ ಕ್ಯಾತೆ ತೆಗೆದಿರುವ ವಿಚಾರವಾಗಿ ಮಾತನಾಡಿ, ಕೇಂದ್ರದಲ್ಲಿ ನಮ್ಮ ಸಂಸದರು ಸರಿಯಾಗಿ ಮಾತನಾಡಿ ಉತ್ತರ ಕೊಡಬೇಕು ಎಂದರು.

ಇದೇ ವೇಳೆ ಜಿಲ್ಲೆಯಲ್ಲಿ ನಡೆದ ದಿಶಾ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡಿ ಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯ್ತಿ ಸಿಇಒಗೆ ಸೂಚನೆ ನೀಡಿದರು.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?